ಮಕ್ಕಳಿಲ್ಲದ ದಂಪತಿಗೆ ಮಗು ಹಸ್ತಾಂತರ

ಉತ್ತಮ ಸಂಸ್ಕಾರ, ಶಿಕ್ಷಣ ನೀಡಿ ಮಗುವಿನ ಉತ್ತಮ ಭವಿಷ್ಯ ನಿರ್ಮಿಸಬೇಕು

Team Udayavani, Jan 1, 2022, 6:19 PM IST

ಮಕ್ಕಳಿಲ್ಲದ ದಂಪತಿಗೆ ಮಗು ಹಸ್ತಾಂತರ

ಗದಗ: ಮಕ್ಕಳಿಲ್ಲದ ದಂಪತಿಗಳ ಮಡಿಲಿಗೆ ಮಗುವನ್ನು ನೀಡುವುದು ಪುಣ್ಯದ ಕೆಲಸ. ಇಂತಹ ಕಾರ್ಯದಲ್ಲಿ ಸಮರ್ಪಿಸಿಕೊಂಡ ಸೇವಾ ಭಾರತಿ ಟ್ರಸ್ಟ್‌ನ ಅಮೂಲ್ಯ ವಿಶೇಷ ದತ್ತು ಸ್ವೀಕಾರ ಸಂಸ್ಥೆಯ ಸಮಾಜಮುಖೀ ಕಾರ್ಯ ಶ್ಲಾಘನೀಯ ಎಂದು ಹರ್ಲಾಪುರ-ಹಳ್ಳಿಗುಡಿಯ ಕೊಟ್ಟೂರೇಶ್ವರ ಮಠದ ಅಭಿನವ ಡಾ| ಕೊಟ್ಟೂರೇಶ್ವರ ಸಾಮೀಜಿ ಹೇಳಿದರು.

ಬೆಟಗೇರಿಯ ಅಮೂಲ್ಯ ವಿಶೇಷ ದತ್ತು ಸ್ವೀಕಾರ ಸಂಸ್ಥೆಯಲ್ಲಿ ಏರ್ಪಡಿಸಿದ್ದ ದತ್ತು ಪೂರ್ವ ಪೋಷಕತ್ವದಡಿ ಮಕ್ಕಳಿಲ್ಲದ ದಂಪತಿಗೆ ಮಗುವನ್ನು ಹಸ್ತಾಂತರಿಸುವ ಸಮಾರಂಭದಲ್ಲಿ ಸಾನ್ನಿಧ್ಯ ವಹಿಸಿ ಅವರು ಮಾತನಾಡಿ, ಮಕ್ಕಳಿಲ್ಲದ ದಂಪತಿಗಳು ದತ್ತು ಪಡೆದ ಮಗುವಿಗೆ ತಾವೇ ಜನ್ಮ ನೀಡಿದ ಮಗುವಿನಂತೆ ಪ್ರೀತಿ, ಮಮತೆ, ಕಕ್ಕುಲತೆಯಿಂದ ಪೋಷಿಸಿ ಉತ್ತಮ ಸಂಸ್ಕಾರ, ಶಿಕ್ಷಣ ನೀಡಿ ಮಗುವಿನ ಉತ್ತಮ ಭವಿಷ್ಯ ನಿರ್ಮಿಸಬೇಕು ಎಂದರು.

ಹೆತ್ತವರಿಗೆ ಬೇಡವಾದ ಮಕ್ಕಳನ್ನು ಪೋಷಿಸಿ ಮಕ್ಕಳಿಲ್ಲದ ದಂಪತಿಗೆ ಕಾನೂನಿನ ಚೌಕಟ್ಟಿಗೆ ಒಳಪಟ್ಟು ದತ್ತು ಪೋಷಕತ್ವದಡಿ ಹಸ್ತಾಂತರಿಸುವ ಗುರುತರವಾದ ಜವಾಬ್ದಾರಿ ನಿಭಾಯಿಸುತ್ತಿರುವ ಸಂಸ್ಥೆ ಪುಣ್ಯದ ಕೆಲಸ ಮಾಡುತ್ತಿದೆ. ಇಲ್ಲಿನ ಆಯಾಗಳು ತಾಯಿ ಇಲ್ಲದ ಮಗುವಿಗೆ ತಾಯಿ ಸ್ಥಾನ ಕೊಟ್ಟು ಅಂತಹ ಮಕ್ಕಳನ್ನು ಲಾಲನೆ, ಪಾಲನೆ, ಪೋಷಣೆಯಲ್ಲಿ ಹಗಲಿರುಳು ಸಮರ್ಪಣಾ ಭಾವದಿಂದ ತಮ್ಮನ್ನು ತೊಡಗಿಸಿಕೊಂಡಿರುವುದೂ ಪುಣ್ಯಪ್ರಾಪ್ತಿಯ ಕಾರ್ಯ ಎಂದರು.

ಉದ್ಯಮಿ ಡಾ| ವಿಜಯ ಸಂಕೇಶ್ವರ ಮಾತನಾಡಿ, ಹೆತ್ತ ಮಗುವನ್ನು ತ್ಯಜಿಸಿವುದು, ಮಗು ಮಾರಾಟದಂತಹ ಘಟನೆಗಳನ್ನು ತಡೆಗಟ್ಟಬೇಕು. ಸಮಾಜ ಮತ್ತು ಸರಕಾರ ಜಾಗೃತವಾಗಬೇಕು. ವ್ಯಾಮೋಹ, ಸರಿಯಾದ ವಯಸ್ಸಿನಲ್ಲಿ ಮದುವೆ ಆಗದೇ, ಅನ್ಯ ಕಾರಣದಿಂದ ಜನಿಸುವ ಮಕ್ಕಳು, ಹೆಣ್ಣು ಮಗು ಬೇಡವೆಂದು ಹೆತ್ತ ಮಗುವನ್ನು ಬೇಕಾದಲ್ಲಿ ಬಿಟ್ಟು ಹೋಗುವುದು ಮುಗ್ಧ ಕಂದಮ್ಮಗಳ ಅನಾಥ ಸ್ಥಿತಿಗೆ ಕಾರಣವಾಗಲಿದೆ. ಪ್ರಜ್ಞಾವಂತರು ಇಂತಹ ಘಟನೆಗಳಿಗೆ ಕಡಿವಾಣ ಹಾಕಬೇಕು ಎಂದು ಸಲಹೆ ನೀಡಿದರು.

ಹುಬ್ಬಳ್ಳಿಯ ಸೇವಾ ಭಾರತಿ ಟ್ರಸ್ಟ್‌ನ ಅಧ್ಯಕ್ಷ ರಘು ಅಕಮಂಚಿ ಮಾತನಾಡಿ, ಟ್ರಸ್ಟ್‌ನ ಸಮಾಜಮುಖೀ ಕಾರ್ಯವನ್ನು ವಿವರಿಸಿದರು. ಬೆಟಗೇರಿಯ ಅಮೂಲ್ಯ ವಿಶೇಷ ದತ್ತು ಸ್ವೀಕಾರ ಸಂಸ್ಥೆಯ ಅಧ್ಯಕ್ಷ ಮಲ್ಲಿಕಾರ್ಜುನ ಬೆಲ್ಲದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಡಾ| ಶೇಖರ ಸಜ್ಜನರ, ಡಾ| ರಾಜಶೇಖರ ಬಳ್ಳಾರಿ, ವಿಜಯಕುಮಾರ ಗಡ್ಡಿ, ಸುಧೀಂದ್ರ ಘೋರ್ಪಡೆ, ಶ್ರೀಧರ ಸುಲ್ತಾನಪುರ, ಬಸವರಾಜ ನಾಗಲಾಪುರ, ಬಾಲಕೃಷ್ಣ ಕಾಮತ, ಪಟ್ಟಣಶೆಟ್ಟಿ, ಬೂದೇಶ ಬ್ಯಾಹಟ್ಟಿ, ಚನ್ನಯ್ಯ ಬೊಮ್ಮನಹಳ್ಳಿ, ರಾಜೇಶ ಖಟವಟೆ, ನಾಗವೇಣಿ ಕಟ್ಟಿಮನಿ, ಶ್ರೀಧರ ಉಡುಪಿ, ಲಲಿತಾಬಾಯಿ ಮೇರವಾಡೆ, ಪ್ರಲಾದರಾಜ ಕಾರ್ಕಳ
ಇದ್ದರು. ಪ್ರಾಚಾರ್ಯ ಮಾರುತಿ ಕಟ್ಟಿಮನಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಕಾಶ ಗಾಣಿಗೇರ ನಿರೂಪಿಸಿದರು. ಕಾರ್ಯದರ್ಶಿ ಸುಭಾಸ ಬಬಲಾದಿ ವಂದಿಸಿದರು.

ಟಾಪ್ ನ್ಯೂಸ್

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadag-CM-Dcm

Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ

8

CM Siddaramaiah: ಗ್ಯಾರಂಟಿಗಳನ್ನು‌ ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮ‌‌ದು

7

Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ

24-

Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

20-

Burhan Wani; ಬುರ್ಹಾನ್‌ ವಾನಿ ಅನುಚರ ಸೇರಿ 5 ಉಗ್ರರ ಎನ್‌ಕೌಂಟರ್‌

19-

IED explodes: ನಕ್ಸಲರು ಇರಿಸಿದ್ದ ಐಇಡಿ ಸ್ಫೋಟ: ಮೂರು ಕರಡಿಗಳು ಸಾವು

18-

Formula E race; ಫಾರ್ಮುಲಾ-ಇ ರೇಸ್‌ ಪ್ರಕರಣ: ಕೆಟಿಆರ್‌ ಮೇಲೆ ಎಸಿಬಿ ಎಫ್ಐಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.