ಅಂಗನವಾಡಿ ಕಾರ್ಯಕರ್ತೆಯರ ಧರಣಿ
Team Udayavani, Jul 7, 2019, 3:40 PM IST
ನರಗುಂದ: ಅಂಗನವಾಡಿ ಕಾರ್ಯಕರ್ತೆಯರು ತಹಶೀಲ್ದಾರ ಆಶಪ್ಪ ಪೂಜಾರ ಅವರಿಗೆ ಮನವಿ ಸಲ್ಲಿಸಿದರು.
ನರಗುಂದ: ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಎಲ್ಕೆಜಿ ಮತ್ತು ಯುಕೆಜಿ ಪ್ರಾರಂಭಿಸಿ ಅಂಗನವಾಡಿ ಕೇಂದ್ರಗಳ ಮೇಲೆ ಅನ್ಯಾಯ ಎಸೆಗುತ್ತಿದೆ ಎಂದು ಆರೋಪಿಸಿ ತಾಲೂಕಿನ ಎಲ್ಲ ಅಂಗನವಾಡಿ ಕೇಂದ್ರಗಳ ಸಿಬ್ಬಂದಿ ಮಿನಿವಿಧಾನಸೌಧ ಎದುರು ಶನಿವಾರ ಧರಣಿ ನಡೆಸಿದರು.
ಎಐಟಿಯುಸಿ ಜಿಲ್ಲಾ ಸಂಚಾಲಕ ಎನ್.ಎ. ಖಾಜಿ ಮಾತನಾಡಿ, ಪ್ರಾಥಮಿಕ ಪೂರ್ವ ಶಿಕ್ಷಣದಲ್ಲಿ ಅಂಗನವಾಡಿ ಕೇಂದ್ರಗಳ ಶ್ರಮ ಸಾಕಷ್ಟಿದೆ. ಪ್ರಾಥಮಿಕ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ಪ್ರಾರಂಭಿಸಿದ ಸರ್ಕಾರದ ಕ್ರಮದಿಂದ ಈಗಾಗಲೇ ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಜಿಲ್ಲೆಗಳ ಅಂಗನವಾಡಿ ಕೇಂದ್ರಗಳು 7 ಕೇಂದ್ರಗಳು ಬಾಗಿಲು ಮುಚ್ಚಿವೆ ಎಂದು ಆರೋಪಿಸಿದರು.
ಸರ್ಕಾರದ ಯೋಜನೆಗಳ ಅನುಷ್ಠಾನದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುವ ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನ ಹೆಚ್ಚಿಸದ ಸರ್ಕಾರ ಎಲ್ಕೆಜಿ, ಯುಕೆಜಿ ಪ್ರಾರಂಭಿಸಿ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಯಿಂದ ವಂಚಿತ ಆಗುವಂತೆ ಮಾಡುತ್ತಿದೆ. ಹೀಗಿದ್ದರೆ ಪ್ರಾಥಮಿಕ ಶಾಲೆಗಳಲ್ಲಿ ಪ್ರಾರಂಭಿಸಿದ ಎಲ್ಕೆಜಿ, ಯುಕೆಜಿಗೆ ಅಂಗನವಾಡಿ ಕಾರ್ಯಕರ್ತೆಯರನ್ನು ನೇಮಿಸಿಕೊಳ್ಳಲಿ ಎಂದು ಒತ್ತಾಯಿಸಿದರು.
ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಶನ್ ತಾಲೂಕು ಅಧ್ಯಕ್ಷೆ ಶಾರದಾ ಹಳೇಮನಿ, ಕಾರ್ಯದರ್ಶಿ ಶಾರದಾ ರೋಣದ, ಚಾಂದಬಿ ಮುಲ್ಲಾನವರ, ಜಿ.ಎಸ್.ಬೆಳವಟಗಿ, ಎ.ಬಿ.ಕುರಹಟ್ಟಿ, ಕೆ.ಬಿ.ಪೂಜಾರ, ಎಸ್.ಜಿ. ಬಾಗಲಕೋಟಿ, ಆರ್.ಎಲ್. ಹುಜರತ್ತಿ, ಎಲ್.ಎಚ್. ಭಜಂತ್ರಿ, ದೇವಕ್ಕ ಮಾಮನಿ, ಭೀಮವ್ವ ನವಲಗುಂದ ಹಾಗೂ ಎಲ್ಲ ಕಾರ್ಯಕರ್ತೆ, ಸಹಾಯಕಿಯರು ಧರಣಿಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ
Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
ಗದಗ: ಸರ್ಕಾರಿ ಶಾಲೆ ಗೋಡೆಗೆ ಚಂದದ ಚಿತ್ತಾರ – ಬಂದಿದೆ ಜಿಲ್ಲಾಮಟ್ಟದ ಪ್ರಶಸ್ತಿ…
MUST WATCH
ಹೊಸ ಸೇರ್ಪಡೆ
Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್ ಮಾಡಿದ ಯಶ್ ʼಟಾಕ್ಸಿಕ್ʼ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
Teertharoopa Tandeyavarige: ತೀರ್ಥರೂಪರ ಜೊತೆ ರಚನಾ
Ramanagara: ಬಸ್ -ಬೈಕ್ ಅಪಘಾತ; ಇಬ್ಬರು ಮಕ್ಕಳು ಮೂವರು ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.