ಗ್ರಾಹಕರು ಖರೀದಿಸಿದ ವಸ್ತುವಿಗೆ ರಶೀದಿ ಅಗತ್ಯ: ಪಲ್ಲೇದ
ಪ್ರತಿಯೊಬ್ಬ ಗ್ರಾಹಕರಿಗೂ ತಮ್ಮ ಹಕ್ಕುಗಳ ಬಗ್ಗೆ ತಿಳಿವಳಿಕೆ ಹೊಂದುವುದು ಅವಶ್ಯವಾಗಿದೆ.
Team Udayavani, Jan 10, 2022, 6:30 PM IST
ಗದಗ: ಪ್ರತಿಯೊಬ್ಬ ಗ್ರಾಹಕರು ವಸ್ತುಗಳನ್ನು ಖರೀದಿಸುವಾಗ ಅದರ ಗುಣಮಟ್ಟ ಹಾಗೂ ಬೆಲೆಗಳ ಕುರಿತು ತಿಳಿವಳಿಕೆ ಹೊಂದುವುದು ಅವಶ್ಯಕ. ಖರೀದಿಸಿದ ವಸ್ತು ದೋಷಪೂರಿತವಾಗಿದ್ದರೆ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಿಂದ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳ ಕಾನೂನು ಸಲಹೆಗಾರರು ಹಾಗೂ ನಿವೃತ್ತ ಜಿಲ್ಲಾ ನ್ಯಾಯಾಧೀಶ ಎಸ್ .ಜಿ.ಪಲ್ಲೇದ ತಿಳಿಸಿದರು.
ಜಿಲ್ಲಾಡಳಿತ, ಜಿಪಂ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಕಾನೂನು ಮಾಪನ ಶಾಸ್ತ್ರ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ನಗರದ ಕೆಎಲ್‌ಇ ಸಂಸ್ಥೆಯ ಎಸ್.ಎ. ಮಾನ್ವಿ ಕಾನೂನು ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಪ್ರತಿ ವರ್ಷವೂ ಡಿ.24 ರಂದು ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಹಾಗೂ ಮಾರ್ಚ್ 15 ರಂದು ವಿಶ್ವ ಗ್ರಾಹಕರ ದಿನಾಚರಣೆ ಆಚರಿಸಲಾಗುತ್ತದೆ. ಮಗು ತಾಯಿಯ ಗರ್ಭದಲ್ಲಿರುವಾಗಲೇ ಕಾನೂನು ಆರಂಭವಾಗುತ್ತದೆ. ನಮ್ಮ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟವರಲ್ಲಿ ಕಾನೂನು ಅಭ್ಯಸಿಸಿದ ವಕೀಲರ ಪಾತ್ರವೂ ಮುಖ್ಯವಾಗಿದೆ ಎಂದರು.
ಪ್ರತಿಯೊಬ್ಬರೂ ಒಂದಿಲ್ಲೊಂದು ರೀತಿಯಿಂದ ಗ್ರಾಹಕರೇ ಆಗಿರುತ್ತಾರೆ. ಗ್ರಾಹಕರು ವಸ್ತುಗಳನ್ನು ಖರೀದಿಸುವಾಗ ಅದರ ಗುಣಮಟ್ಟ, ಪ್ರಮಾಣವನ್ನು ಪರಿಶೀಲಿಸಬೇಕು. ಪ್ರತಿಯೊಬ್ಬ ಗ್ರಾಹಕರು ತಮ್ಮ ಹಕ್ಕು ಹಾಗೂ ಕರ್ತವ್ಯಗಳ ಕುರಿತು ಪ್ರಜ್ಞೆ ಹೊಂದಿರುವುದು ಮುಖ್ಯವಾಗಿದೆ.
ಯಾವುದಾದರೂ ವಸ್ತುಗಳನ್ನು ಖರೀದಿಸುವಾಗ ಅಥವಾ ಸೇವೆಯನ್ನು ಪಡೆಯುವಾಗ ತಪ್ಪದೇ ರಸೀದಿ ಪಡೆಯಬೇಕು. ಒಂದು ವೇಳೆ ಖರೀದಿಸಿದ ವಸ್ತು ದೂಷಪೂರಿತವಾಗಿದ್ದರೆ ಸೂಕ್ತ ದಾಖಲೆ ಒದಗಿಸಿ ಅದಕ್ಕೆ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಿಂದ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದರು.
ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕ ಎ.ಎ.ಕಂಬಾಳಿಮಠ ಪ್ರಾಸ್ತಾವಿಕವಾಗಿ ಮಾತನಾಡಿ, ಗ್ರಾಹಕರಿಗೆ ತಮ್ಮ ಹಕ್ಕು ಮತ್ತು ಕರ್ತವ್ಯಗಳ ಕುರಿತು ಅರಿವು ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ತಿಳಿಸಿದರು.
ವಿಶೇಷ ಉಪನ್ಯಾಸಕರಾಗಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ವಿಶ್ರಾಂತ ಸದಸ್ಯ ಎಫ್.ಡಿ. ಲಕ್ಷ್ಮೇಶ್ವರಮಠ ಮಾತನಾಡಿ, ಪ್ರತಿಯೊಬ್ಬರೂ ಸರಕುಗಳನ್ನು ಖರೀದಿಸುವಾಗ ಹಾಗೂ ಸೇವೆಯನ್ನು ಪಡೆದುಕೊಳ್ಳವಾಗ ಗ್ರಾಹಕರಾಗುತ್ತಾರೆ. ಕೆಲವೊಂದು ಸಂದರ್ಭಗಳಲ್ಲಿ ಅನಕ್ಷರಸ್ಥರಲ್ಲದೇ ಅಕ್ಷರಸ್ಥರೂ ಸಹ ಮೋಸ ಹೋಗುತ್ತಾರೆ. ಪ್ರತಿಯೊಬ್ಬ ಗ್ರಾಹಕರಿಗೂ ತಮ್ಮ ಹಕ್ಕುಗಳ ಬಗ್ಗೆ ತಿಳಿವಳಿಕೆ ಹೊಂದುವುದು ಅವಶ್ಯವಾಗಿದೆ. ಗ್ರಾಹಕರು ತಮ್ಮ ಹಕ್ಕುಗಳನ್ನು
ತಿಳಿದುಕೊಳ್ಳದಿದ್ದರೆ ಶೋಷಣೆಗೊಳಗಾಗುತ್ತಾರೆ.
ಆಹಾರದಲ್ಲಿ ಕಲಬೆರಕೆ, ಕಳಪೆ ಗುಣಮಟ್ಟದ ವಸ್ತುಗಳ ಖರೀದಿ, ಹೆಚ್ಚಿನ ದರದಲ್ಲಿ ವಸ್ತುಗಳ ಖರೀದಿ ಇವೆಲ್ಲವುಗಳ ಕುರಿತು ಹಕ್ಕು ಚಲಾಯಿಸಿ ಪರಿಹಾರ ಕಂಡುಕೊಳ್ಳಬಹುದಾಗಿದೆ. ಗ್ರಾಹಕರು ಜಾಗೃತಿ, ಆಯ್ಕೆ, ಗುಣಮಟ್ಟ, ಕುಂದುಕೊರತೆ ಪರಿಹಾರ ಈ ಅಂಶಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು ಎಂದು ವಿವರಿಸಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ದಿವಾಣಿ ನ್ಯಾಯಾಧೀಶರಾದ ಎಸ್.ಜಿ. ಸಲಗರೆ
ಮಾತನಾಡಿ, ಸಮಾಜದಲ್ಲಿ ನಾವು ನೆಮ್ಮದಿಯ ಜೀವನ ನಡೆಸಬೇಕೆಂದರೆ ಕಾನೂನಿನ ಅರಿವು ಹೊಂದಬೇಕೆಂದು ಸಲಹೆ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಗಿರಿಜಾ ದೊಡ್ಡಮನಿ ಹಾಗೂ ಮತ್ತಿತರರು ವಿವಿಧ ವಿಷಯಗಳ ಕುರಿತು ಉಪನ್ಯಾಸ ನೀಡಿದರು. ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷೆ ವಿಶಾಲಾಕ್ಷಿ ಬೋಳಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ವೇದಿಕೆ ಮೇಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾ ಧಿಕಾರದ ಆಹಾರ ಸುರಕ್ಷತಾ ಅಧಿ ಕಾರಿ ಡಾ.ಆರ್.ಎಸ್.ಗಡಾದ, ಡಿ.ಎಸ್. ಅಂಗಡಿ, ಕಾನೂನು ಮಾಪನ ಶಾಸ್ತ್ರ ಇಲಾಖೆ ಸಹಾಯಕ ನಿಯಂತ್ರಕ ಆರ್.ಕೆ. ಕೊಪ್ಪರ,
ಮಾನ್ವಿ ಕಾನೂನು ಮಹಾವಿದ್ಯಾಲಯದ ಪ್ರಾಚಾರ್ಯ ಎಫ್.ಆರ್.ಪಾಟೀಲ, ಕೆ.ಎಫ್. ಸಿ.ಎಸ್.ಸಿ. ಜಿಲ್ಲಾ ವ್ಯವಸ್ಥಾಪಕ ಲಕ್ಷ್ಮೀ ಶಿವಾಜಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ವಂಚನೆಗೆ ಯತ್ನ
Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.