Gadag; ವಿಚಾರಣೆಗಾಗಿ ಅಭಿನವ ಹಾಲಶ್ರೀ ಮುಂಡರಗಿ ಪಟ್ಟಣಕ್ಕೆ: 2 ದಿನ ಪೊಲೀಸ್ ಕಸ್ಟಡಿಗೆ
Team Udayavani, Oct 3, 2023, 7:07 PM IST
ಗದಗ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಹೆಸರಲ್ಲಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಭಿನವ ಹಾಲಶ್ರೀ ಅವರನ್ನು ಜಿಲ್ಲೆಯ ಮುಂಡರಗಿ ಪೊಲೀಸರು ಪಟ್ಟಣದಲ್ಲಿ ಮಂಗಳವಾರ ವಿಚಾರಣೆ ನಡೆಸಿದರು.
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಅಭಿನವ ಹಾಲಶ್ರೀ ಅವರನ್ನು ಮುಂಡರಗಿ ಪಟ್ಟಣಕ್ಕೆ ಕರೆತಂದ ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿ, ನ್ಯಾಯಾಲಯದಿಂದ ಅನುಮತಿ ಪಡೆದು ಎರಡು ದಿನಗಳ ಪೊಲೀಸ್ ಕಸ್ಟಡಿ ತೆಗೆದುಕೊಂಡರು.
ಕೋರ್ಟ್ ನಿಂದ ಹಾಲಶ್ರೀ ಅವರನ್ನು ತಾಲೂಕಾ ಸರಕಾರಿ ಆಸ್ಪತ್ರೆಗೆ ಆರೋಗ್ಯ ತಪಾಸಣೆಗಾಗಿ ಕರೆದುಕೊಂಡು ಹೋಗಿ ತಪಾಸಣೆ ನಡೆಸಲಾಯಿತು.
ಇದನ್ನೂ ಓದಿ:Raj Kundra: ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಜೈಲಿನ ದಿನಗಳ ಸುತ್ತ ಬರಲಿದೆ ಸಿನಿಮಾ
ಹಾಲಶ್ರೀ ಅವರ ಆರೋಗ್ಯವು ಸ್ಥೀರವಾಗಿದೆ ಎಂದು ವೈದ್ಯರು ತಿಳಿಸಿದ್ದು, ಪೊಲೀಸರು ಎರಡು ದಿನಗಳ ಕಾಲ ವಿಚಾರಣೆ ನಡೆಸಲಿದ್ದಾರೆ.
ಜಿಲ್ಲೆಯ ಮುಂಡರಗಿ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಹಿರೇಹಡಗಲಿಯ ಅಭಿನವ ಹಾಲಶ್ರೀ ವಿರುದ್ದ ಎಂಎಲ್ಎ ಟಿಕೆಟ್ ಕೊಡಿಸುವ ಭರವಸೆ ನೀಡಿ ಒಂದು ಕೋಟಿ ರೂ. ವಂಚನೆ ಮಾಡಿರುವುದಾಗಿ ಆರೋಪಿಸಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸಂಜಯ ಚವಡಾಳ ಅವರು ಸೆ. 19ರಂದು ಅಭಿನವ ಹಾಲಶ್ರೀ ವಿರುದ್ಧ ದೂರು ದಾಖಲಿಸಿದ್ದರು. ಸೆ. 22 ಪ್ರಕರಣ ದಾಖಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ಭೀಷ್ಮ ಕೆರೆಗೆ ಸಚಿವ ಎಚ್.ಕೆ. ಪಾಟೀಲ ಬಾಗಿನ ಅರ್ಪಣೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf Issue: ಐದು ವರ್ಷ ಹಿಂದೆ ವಕ್ಫ್ ಆಸ್ತಿ ವಿರುದ್ಧ ಹೋರಾಡಿ ಗೆದ್ದಿದ್ದ 315 ರೈತರು
Gadaga: ಐತಿಹಾಸಿಕ ವೀರನಾರಾಯಣ ದೇವಸ್ಥಾನ ಪುನರುತ್ಥಾನ ಕಾರ್ಯಕ್ಕೆ ಚಾಲನೆ
ಕುಂಬಾರರ ಬದುಕಿನಲ್ಲಿಲ್ಲ ದೀಪಾವಳಿ ಬೆಳಕು: ಮಾರುಕಟ್ಟೆಗೆ ಲಗ್ಗೆ ಇಟ್ಟ ಪಿಂಗಾಣಿ ಹಣತೆ
MUST WATCH
ಹೊಸ ಸೇರ್ಪಡೆ
BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…
Pro Kabaddi;ಬೆಂಗಳೂರು ಬುಲ್ಸ್ ಜಯಭೇರಿ: ತಮಿಳ್ ತಲೈವಾಸ್‌ಗೆ 32-36 ಅಂಕಗಳ ಸೋಲು
Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡರ್ ಸ್ಫೋ*ಟ: ಅಪಾರ ಹಾನಿ
Kasaragod: ಪಟಾಕಿ ದುರಂತ ಪ್ರಕರಣ; ಸಾವಿನ ಸಂಖ್ಯೆ 4ಕ್ಕೆ ಏರಿಕೆ
By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.