ಎಸಿಬಿ ಬಲೆಗೆ ಬಿದ್ದ ಸಿಟಿ ಸರ್ವೇಯರ್
Team Udayavani, Sep 20, 2019, 4:45 PM IST
ಗದಗ: ನಿವೇಶನದ ನಕ್ಷೆ ತಯಾರಿಸಲು ಅರ್ಜಿದಾರರಿಂದ ಲಂಚ ಪಡೆಯುತ್ತಿದ್ದ ಸಿಟಿ ಸರ್ವೇಯರ್ ಹಾಗೂ ದಿನಗೂಲಿ ನೌಕರನೊಬ್ಬ ಎಸಿಬಿ ಬಲೆಗೆ ಬಿದ್ದಿದ್ದಾರೆ.
ಇಲ್ಲಿನ ತಹಶೀಲ್ದಾರ್ ಕಚೇರಿ ಆವರಣದಲ್ಲಿರುವ ಭೂಮಾಪನ ಇಲಾಖೆ ಕಚೇರಿಯಲ್ಲಿ ಸಿಟಿ ಸರ್ವೇಯರ್ ರಮೇಶ್ ಹಾಗೂ ದಿನಗೂಲಿ ನೌಕರ ಮೋಹನ್ ಅವರು ಅರ್ಜಿದಾರರಿಂದ 1೦೦೦ ರೂ. ಪಡೆಯುತ್ತಿದ್ದಾಗ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ, ಆರೋಪಿಗಳನ್ನು ಬಂಧಿಸಿದ್ದಾರೆ.
ಚಂದ್ರಶೇಖರ ಎಂಬುವರರು ತಮ್ಮ ಚಿಕ್ಕಪ್ಪನ ಹೆಸರಲ್ಲಿರುವ ನಿವೇಶನದ ನಕ್ಷೆ ಮಾಡಿಕೊಂಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. 2 3 ತಿಂಗಳಿಂದ ನಿತ್ಯ ಅಲೆದಾಡಿಸುತ್ತಿದ್ದ ಭೂ ಮಾಪನ ಅಧಿಕಾರಿಗಳು 1 ಸಾವಿರ ರೂ. ನೀಡುವಂತೆ ಬೇಡಿಕೆ ಇಟ್ಟಿದ್ದರು. ಈ ಕುರಿತು ಖಚಿತ ದಾಳಿ ನಡೆಸಿದ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.
ಗದಗ ಭ್ರಷ್ಟಾಚಾರ ನಿಗ್ರಹ ದಳದ ಡಿವೈಎಸ್ಪಿ ವಾಸುದೇವರಾಮು ನೇತೃತ್ವದಲ್ಲಿ ದಾಳಿ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.