ಅಕ್ರಮ ಆಸ್ತಿ ಗಳಿಕೆ ಆರೋಪ: ಅಣ್ಣಿಗೇರಿ ಮನೆ, ಕಚೇರಿ ಮೇಲೆ ಎಸಿಬಿ ದಾಳಿ
Team Udayavani, Mar 16, 2022, 8:32 AM IST
ಗದಗ: ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಉಪ ತಹಶೀಲ್ದಾರ್ ಬಿ.ಎಸ್.ಅಣ್ಣಿಗೇರಿ ಅವರ ಮನೆ ಹಾಗೂ ಕಚೇರಿ ಮೇಲೆ ಏಕಕಾಲಕ್ಕೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಇಲ್ಲಿನ ಪಂಚಾಕ್ಷರಿ ನಗರದಲ್ಲಿರುವ ಮನೆ, ಅಳಿಯನ ಮನೆ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿರುವ ಉಪ ತಹಶೀಲ್ದಾರ್ ಚೇಂಬರ್ ಮೇಲೆ ಬುಧವಾರ ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಅಣ್ಣಿಗೇರಿ ಅವರಿಗೆ ಸೇರಿದೆ ಎನ್ನಲಾದ ಟಾಂಗಾಕೂಟದಲ್ಲಿರುವ ಖಾಸಗಿ ಕಚೇರಿ ಮೇಲೂ ಅಧಿಕಾರಿಗಳು ದಾಳಿ ನಡೆಸಿದ್ದು, ಆದಾಯ ಮೀರಿ ಆಸ್ತಿ ಗಳಿಕೆ ಕುರಿತು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಗದಗ ಭ್ರಷ್ಟಾಚಾರ ನಿಗ್ರಹ ದಳ ಡಿಎಸ್ಪಿ ಮಲ್ಲಾಪುರ ಅವರ ನೇತೃತ್ವದ ಎರಡು ತಂಡಗಳಲ್ಲಿ ಸುಮಾರು ೧೫ಕ್ಕೂ ಹೆಚ್ಚು ಸಿಬ್ಬಂದಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Child Care: ಶಿಶು ಮರಣ ತಗ್ಗಿಸಲು ಮನೆಮಟ್ಟದ ಎಳೆ ಮಕ್ಕಳ ಆರೈಕೆ!
ರಾಜ್ಯದಲ್ಲಿ ಕೇರಳದ ಅಸುರಕ್ಷಿತ ಕುರುಕಲು ತಿಂಡಿ ಮಾರಾಟ
NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್ನಲ್ಲಿ: ಎನ್ಐಎಗೆ ಸುಳಿವು
Minister Sudhakar: ಸೀಟ್ ಬ್ಲಾಕಿಂಗ್ ದಂಧೆ ವಿರುದ್ಧ ಕ್ರಿಮಿನಲ್ ಕೇಸ್ ಅಸ್ತ್ರ
State Govt: ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್.ಎನ್. ನಾಗಮೋಹನ್ ದಾಸ್ ಅಧ್ಯಕ್ಷ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.