ಕ್ವಾರಂಟೈನ್ ಉಲ್ಲಂಘಿಸಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ
Team Udayavani, May 25, 2020, 2:29 PM IST
ಗದಗ: ಕೋವಿಡ್-19 ಸೋಂಕು ನಿಯಂತ್ರಣಕ್ಕಾಗಿ ಘೋಷಿಸಿದ್ದ ಲಾಕ್‌ಡೌನ್ ನಿಯಮಗಳನ್ನು ಸಡಿಲಿಸಿ ಹೊರ ಜಿಲ್ಲೆ ಮತ್ತು ರಾಜ್ಯಗಳಿಂದ ಸ್ವಂತ ಊರುಗಳಿಗೆ ಮರಳಲು ಷರತ್ತುಬದ್ಧ ಅವಕಾಶ ನೀಡಲಾಗಿದೆ. ಅದರಂತೆ ಹೊರ ರಾಜ್ಯ ಮತ್ತು ಜಿಲ್ಲೆಯಿಂದ ಆಗಮಿಸಿದವರು ಕಟ್ಟುನಿಟ್ಟಾಗಿ ಕ್ವಾರಂಟೈನ್ ನಿಯಮ ಪಾಲಿಸದಿದ್ದರೆ ಕಠಿಣ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಎಚ್ಚರಿಕೆ ನೀಡಿದ್ದಾರೆ.
ಅದರಂತೆ ಜಿಲ್ಲೆಗೆ ಮರಳಿದವರನ್ನು ಪ್ರವೇಶ ಕೇಂದ್ರದಲ್ಲಿ ಆರೋಗ್ಯ ತಪಾಸಣೆಗೆ ಒಳಪಡಿಸಿ, ಸೋಂಕು ಲಕ್ಷಣವಿರುವ ವ್ಯಕ್ತಿಗಳನ್ನು ನಿಗದಿತ ಕೋವಿಡ್ ಸಂಸ್ಥೆಯಲ್ಲಿ 14 ದಿನ ಇರಿಸಲಾಗುತ್ತದೆ. ಉಳಿದವರನ್ನು ಮನೆಯಲ್ಲಿ 14 ದಿನ ಪ್ರತ್ಯೇಕ ವಾಸದಲ್ಲಿ ಇರಿಸಲಾಗುತ್ತಿದೆ. ಕ್ವಾರಂಟೈನ್ ನಿಯಮ ಉಲ್ಲಂಘಿಸುವವರ ವಿರುದ್ಧ ರಾಷ್ಟ್ರೀಯ ವಿಪತ್ತು ನಿರ್ವಹಣೆ ಕಾಯ್ದೆ, ಸಾಂಕ್ರಾಮಿಕ ಕಾಯ್ದೆ ಮತ್ತು ಐಪಿಸಿ ಕಲಂ 188ರ ಅನ್ವಯ ಕಠಿಣ ಕ್ರಮ ಕೈಕೊಳ್ಳಲಾಗುವುದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.