ನಿಗದಿತ ಅವಧಿಯಲ್ಲಿ ಕಾಮಗಾರಿ ಮುಗಿಸದಿದ್ದರೆ ಕ್ರಮ

Team Udayavani, Jun 4, 2019, 8:04 AM IST

gadaga tdy 2

ರೋಣ: ಪಟ್ಟಣದ ತಾಪಂ ಸಭಾಭವನದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ರೋಣ: ಪರಿಸರ ಸಂರಕ್ಷಣೆ, ಮಳೆ ನೀರು ಸಂಗ್ರಹ ಸೇರಿದಂತೆ ಅನೇಕ ಮಹತ್ವದ ಉದ್ದೇಶಗಳನ್ನು ಹೊಂದಿರುವ ನದಿ ಪುನಶ್ಚೇತನ ಕಾಮಗಾರಿಯನ್ನು ನಿಗದಿತ ಅವಧಿಯಲ್ಲಿ ಮಾಡಿ ಮುಗಿಸದಿದ್ದರೆ ಪಿಡಿಒ ಹಾಗೂ ತಾಂತ್ರಿಕ ಸಹಾಯಕರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಕಳಕಪ್ಪ ಬಂಡಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಪಟ್ಟಣದ ತಾಪಂ ಸಭಾಭವಣದಲ್ಲಿ ಸೋಮವಾರ ಜರುಗಿದ ನರೇಗ ಯೋಜನೆಯ ನದಿ ಪುನಶ್ಚೇತ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ನಡೆಸಿ ಅವರು ಮಾತನಾಡಿದರು. ತಾಲೂಕಿನ ವಿವಿಧ ಗ್ರಾಪಂಗಳಲ್ಲಿ ಇಲ್ಲಿಯವರೆ ನಿಗದಿತ ಗುರಿ ಮುಟ್ಟದೆ ಇರುವ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಿಗೆ ನಿಮ್ಮ ಕೆಲಸಗಳನ್ನು ಮಾಡಲು ಪ್ರಧಾನ ಮಂತ್ರಿ ಬರಬೇಕೊ ಅಥವಾ ಮುಖ್ಯಮಂತ್ರಿಗಳು ಬರಬೇಕೋ, ಇಲ್ಲ ನೀವೆ ಮಾಡಿ ಮುಗಿಸುತ್ತೀರಾ? ಎಂದು ಪಶ್ನಿಸಿದರು.

ಸರ್ಕಾರದ ಯೋಜನೆಗಳನ್ನು ಜಾರಿಗೆ ತರಲು ಆಗುವುದಿಲ್ಲ ಎಂದರೆ ಯಾಕೆ ಕೆಲಸ ಮಾಡಬೇಕು.ನಿಮಗೆ ನೀಡಿದ 100 ಗುರಿಯಲ್ಲಿ ಕೇವಲ 20 ಕಾಮಗಾರಿಗಳನ್ನು ಮಾಡಿರುವಿರಾ ಎಂದರೆ ನೀವು ಏನು ಮಾಡುತ್ತಿದ್ದಿರಾ ಎಂದು ಹಿರೇಹಾಳ ಪಿಡಿಒ ಬಸವರಾಜ ದಳವಾಯಿ ಹಾಗೂ ಸಂತೋಷ ಪಾಟೀಲ ಅವರಿಗೆ ಶಾಸಕ ತರಾಟೆಗೆ ತೆಗೆದುಕೊಂಡರು.

ನೇರವಾಗಿ ಇಲಾಖೆಯಿಂದ ಪರೀಕ್ಷೆ ಬರೆದು ನೇಮಕವಾಗಿರುವ ಪಿಡಿಒಗಳು ಸರಿಯಾಗಿ ಕೆಲಸ ಮಾಡದೆ, ನರೇಗ ಯೋಜನೆಯ ಮಹತ್ವ ಕಳೆಯುತ್ತಿದ್ದಿರಿ. ಬಿಲ್ ಕಲೆಕ್ಟರ್‌ ಆಗಿ ಕಾರ್ಯನಿರ್ವಹಿಸಿ ಈಗ ಪಿಡಿಒ ಆದವರು ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಗದಗ ಉಪ ಕಾರ್ಯದರ್ಶಿ ಪ್ರಾಣೇಶ್‌ ರಾವ್‌ ಹೇಳಿದರು.

ಜುಲೈ ಮೊದಲನೇ ವಾರದಲ್ಲಿ ಮತ್ತೆ ಸಭೆ ತೆಗೆದುಕೊಳ್ಳುತ್ತೇನೆ. ಅಷ್ಟರಲ್ಲಿ ನಿಮಗೆ ನೀಡಿರುವ ಕೆಲಸ ಮುಗಿಸಬೇಕು. ಇಲ್ಲವಾದರೆ ತೊಂದರೆ ಅನುಭವಿಸಬೇಕಾಗಿತ್ತದೆ ಎಂದು ಎಚ್ಚರಿಕೆ ನೀಡಿದರು.

ನೂರು ಯೋಜನೆಗಳಿಗೆ ಸಮವಾದ ಯೋಜನೆ ನರೇಗಾ. ಈ ಯೋಜನೆ ಸಮರ್ಪಕವಾಗಿ ಅನುಷ್ಠಾನಗೊಳಿಸಿದರೆ ಉತ್ತಮ ಜಲ ಸಂರಕ್ಷಣೆ, ಮಣ್ಣಿನ ಸವಕಳಿ ತಡೆಗಟ್ಟಲು ಕ್ರಮ ಕೈಗೊಳ್ಳಬಹುದು. ಜೊತೆಗೆ ಬರಗಾಲ ಬರಲು ಮುಖ್ಯ ಕಾರಣಗಳೆಂದರೆ ಅರಣ್ಯ ನಾಶ, ಮಣ್ಣಿನ ಸವಕಳಿ. ಇಂತಹ ಸಮಸ್ಯೆಗಳನ್ನು ಹೋಗಲಾಡಿಸುವ ಶಕ್ತಿ ನರೇಗ ಯೋಜನೆಯ ನದಿ ಪುನಶ್ವೇತನ ಕಾರ್ಯಕ್ರಮಕ್ಕೆ ಇದೆ. ಅದನ್ನು ಸರಿಯಾಗಿ ಎಲ್ಲ ಅಧಿಕಾರಿಗಳು ಅನುಷ್ಠಾನಗೊಳಿಸಬೇಕು ಎಂದು ಗದಗ ಉಪ ಕಾರ್ಯದರ್ಶಿ ಪ್ರಾನೇಶ ರಾವ್‌ ಅಧಿಕಾರಿಗಳಿಗೆ ಹೇಳಿದರು.

ತಾಪಂ ಇಒ ಎಂ.ವಿ. ಚಳಗೇರಿ, ಎಸ್‌.ವೈ. ಜಿಗಣಿ, ಸಂತೋಷ ಪಾಟೀಲ, ಎಂ.ಎಂ. ತರಫದಾರ ಸೇರಿದಂತೆ ತಾಲೂಕಿನ ವಿವಿಧ ಪಿಡಿಒ ಹಾಗೂ ತಾಂತ್ರಿಕ ಸಹಾಯಕರು ಇದ್ದರು.

ಜೂ. 30 ರೊಳಗೆ ಮಾನವ ದಿನಗಳನ್ನು ಬಳಸಿಕೊಂಡು ಕೆಲಸ ಮಾಡದಿದ್ದರೆ ಅವರಿಗೆ ಆ ತಿಂಗಳ ಸಂಬಳ ನೀಡಿಬೇಡಿ. ಇಂಗು ಗುಂಡಿ ಕಾಮಗಾರಿಗಳ ಎಂ.ಐ.ಎಸ್‌ ಮಾಡದ ಪರಿಣಾಮ ಜನರು ನಿಮ್ಮ ಹತ್ತಿರ ತಿರುಗಾಡಬೇಕಾ? ಒಂದೊಮ್ಮೆ ಜನ ನಿಮ್ಮ ಮೇಲೆ ತಿರುಗಿ ಬಿದ್ದರೆ ಯಾರು ಏನು ಮಾಡಲಿಕ್ಕೆ ಆಗುವುದಿಲ್ಲ. ಜನರು ತಮ್ಮ ತಾಳ್ಮೆ ಕಳೆದುಕೊಳ್ಳುವ ಮುನ್ನ ಅವರ ಕೆಲಸ ಮಾಡಿಕೊಡಿ.•ಕಳಕಪ್ಪ ಬಂಡಿ, ಶಾಸಕ

ಟಾಪ್ ನ್ಯೂಸ್

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ec-aa

Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ

Gundlupet-Arrest

Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು

amit Shah (2)

Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ

ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ

ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

3-gadaga

Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

Omission in egg distribution, head teacher, physical education teacher suspended

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.