ಸಂಬಳ ನೀಡದ ಸಂಸ್ಥೆಗಳನ್ನು ಕಪ್ಪು ಪಟ್ಟಿಗೆ ಸೇರಿಸಿ


Team Udayavani, May 19, 2020, 2:27 PM IST

Gadaga-tdy-2

ಗದಗ: ಕೋವಿಡ್‌-19 ಸೋಂಕು ನಿಯಂತ್ರಣ ಸಂಕಷ್ಟದ ಪರಿಸ್ಥಿತಿಯಲ್ಲಿ ವೈದ್ಯಕೀಯ ಸಿಬ್ಬಂದಿಗೆ ಯಾವುದೇ ಕಾರಣಕ್ಕೂ ಸಂಬಳ ವಿಳಂಬವಾಗಬಾರದು. ಮಾನವ ಸಂಪನ್ಮೂಲ ಒದಗಿಸಿರುವ ಸಂಸ್ಥೆ ಒಂದು ವಾರದಲ್ಲಿ ಬಾಕಿ ವೇತನ ಪಾವತಿಸಬೇಕು. ಇಲ್ಲವೇ ಸಂಸ್ಥೆಯ ಭದ್ರತಾ ಠೇವಣಿಯನ್ನು ಮುಟ್ಟುಗೋಲು ಹಾಕಿಕೊಂಡು ಕಪ್ಪು ಪಟ್ಟಿಗೆ ಸೇರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಜಿಲ್ಲಾಧಿಕಾರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ 402 ಜನರು ಕಾರ್ಯನಿರ್ವಹಿಸುತ್ತಿದ್ದಾರೆ. ಗ್ರೂಪ್‌ “ಡಿ’ ಹಾಗೂ ನರ್ಸ್‌ ಸಿಬ್ಬಂದಿಗಳಿಗೆ ವೇತನ ಬಿಡುಗಡೆ ಆಗಿಲ್ಲವೆಂಬ ದೂರುಗಳು ಕೇಳಿ ಬರುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಭೆಯಲ್ಲಿ ಮಾತನಾಡಿದ ಜಿಮ್ಸ್‌ ನಿರ್ದೇಶಕ ಡಾ| ಪಿ.ಎಸ್‌.ಭೂಸರೆಡ್ಡಿ, ಹೊರಗುತ್ತಿಗೆ ಸಿಬ್ಬಂದಿ ಕುರಿತಂತೆ 2020ರ ಜನವರಿಯಲ್ಲಿ 289 ಸಿಬ್ಬಂದಿ ಪೈಕಿ 277 ಸಿಬ್ಬಂದಿಗೆ ವೇತನ ಪಾವತಿಯಾಗಿದೆ. ಫೆಬ್ರವರಿಯಲ್ಲಿ 290ರ ಪೈಕಿ 276 ಜನರಿಗೆ ಹಾಗೂ ಮಾರ್ಚ್‌ನಲ್ಲಿ 296 ಜನರಲ್ಲಿ 275 ಜನರಿಗೆ ವೇತನ ಪಾವತಿಯಾಗಿದೆ. 47 ಜನ ಸಿಬ್ಬಂದಿಯ ವೇತನ ಪಾವತಿಯಾಗಿಲ್ಲ. ಇದಲ್ಲದೇ 104 ಜನ ಸಿಬ್ಬಂದಿಯು ದಾಖಲೆ ನೀಡದಿರುವ ಕಾರಣ ವೇತನ ಬಾಕಿ ಉಳಿದಿದೆ ಎಂದು ಗುತ್ತಿಗೆ ಸಂಸ್ಥೆ ತಿಳಿಸಿದೆ.

ಅಲ್ಲದೇ, ಮಾರ್ಚ್‌ ತಿಂಗಳಲ್ಲಿ 6 ಜನ, ಏಪ್ರಿಲ್‌ನಲ್ಲಿ 16 ಜನ ನರ್ಸ್‌ಗಳು ನೇಮಕವಾಗಿದ್ದು, ಅವರ 30 ದಿನದ ವೇತನ ಮಾತ್ರ ಬಾಕಿ ಇದೆ. ಸಿಬ್ಬಂದಿಯನ್ನು ಒದಗಿಸುವ ಗುತ್ತಿಗೆ ಸಂಸ್ಥೆಗೆ ಸಂಬಳ ಬಾಕಿ ಇರುವ ಪ್ರಕರಣಗಳಿಗೆ ಈಗಾಗಲೇ ಮೂರು ಬಾರಿ ಕಾರಣ ಕೇಳಿ ನೋಟಿಸ್‌ ನೀಡಲಾಗಿದೆ ಎಂದು ಸಭೆಗೆ ವಿವರಿಸಿದರು.

ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಜಿಪಂ ಸಿಇಒ ಡಾ| ಆನಂದ ಕೆ., ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಯತೀಶ ಎನ್‌. ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ಜಿಮ್ಸ್‌ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime (2)

Gajendragad: ಮನೆಯಲ್ಲೇ ಮುಖ್ಯ ಶಿಕ್ಷಕಿಯ ಹ*ತ್ಯೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadag-CM-Dcm

Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ

8

CM Siddaramaiah: ಗ್ಯಾರಂಟಿಗಳನ್ನು‌ ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮ‌‌ದು

7

Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.