ಬಾಲ್ಯದಲ್ಲಿಯೇ ಮಕ್ಕಳಲ್ಲಿ ಆತ್ಮಸ್ಥೈರ್ಯ ಬೆಳೆಸಲು ಸಲಹೆ
ಐಪಿಎಸ್ ಅಧಿಕಾರಿ ರವಿ ಚನ್ನಣ್ಣನವರ್ ಸಂವಾದ
Team Udayavani, Jun 17, 2019, 2:18 PM IST
ಲಕ್ಷ್ಮೇಶ್ವರ: ಲಕ್ಷ್ಮೇಶ್ವರದ ಸ್ಕೂಲ್ ಚಂದನದಲ್ಲಿ ಐಪಿಎಸ್ ಅಧಿಕಾರಿ ರವಿ ಚನ್ನಣ್ಣನವರ್ 'ಸತ್ಕಾರ ಚಂದನ' ಗೌರವ ಸ್ವೀಕರಿಸಿದರು.
ಲಕ್ಷ್ಮೇಶ್ವರ: ಶಾಲೆ ಮತ್ತು ಮನೆಗಳಲ್ಲಿ ಮಕ್ಕಳಿಗೆ ಶಾಲಾ ಹಂತದಲ್ಲಿಯೇ ಆತ್ಮಸ್ಥೈರ್ಯ, ನೈತಿಕ ಮೌಲ್ಯ, ನಾಯಕತ್ವಗುಣ ಬೆಳೆಸಬೇಕು. ಇಂತಹ ವಾತಾವರಣ ನಿರ್ಮಿಸಬೇಕು ಎಂದು ರಾಜ್ಯದ ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಹೇಳಿದರು.
ಭಾನುವಾರ ಪಟ್ಟಣದ ಸ್ಕೂಲ್ ಚಂದನ ವಿದ್ಯಾರ್ಥಿಗಳೊಂದಿಗೆ ಚಂದನ-ಸ್ಪಂದನ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಪ್ರತಿ ಮಗುವೂ ವಿಶೇಷ-ವಿಭಿನ್ನವಾದ ಪ್ರತಿಭೆ ಹೊಂದಿರುತ್ತದೆ. ಕಲಿಕಾ ಹಂತದಲ್ಲಿ ದೇಹ, ಮನಸ್ಸು, ಭಾವ ಶುದ್ಧಿಯಾಗಿದ್ದಾಗ ಗ್ರಹಣ ಶಕ್ತಿ ಚನ್ನಾಗಿರುತ್ತದೆ. ಆದ್ದರಿಂದ ಮಕ್ಕಳನ್ನು ಸಾಧನೆ ಹಾದಿಯಲ್ಲಿ ಕರೆದೊಯ್ಯುವ ಪ್ರಾಮಾಣಿಕ ಪ್ರಯತ್ನ ಶಿಕ್ಷಕ ಮತ್ತು ಪಾಲಕರದ್ದಾಗಿದೆ ಎಂದರು.
ಕಾರ್ಯಕ್ರಮದ ಮೊದಲು ಚಂದನ ಶಾಲೆ ಬ್ಯಾಂಡ್ ಮ್ಯೂಸಿಕ್‌ನ ವಿದ್ಯಾರ್ಥಿಗಳಿಂದ ಗೌರವ ವಂದನೆ ಸಲ್ಲಿಸಲಾಯಿತು. ರವಿ ಡಿ. ಚನ್ನಣ್ಣನವರಿಗೆ ಶಾಲೆಯಿಂದ ‘ಸತ್ಕಾರ ಚಂದನ’ ಗೌರವ ಪುರಸ್ಕಾರ ಪ್ರದಾನ ಮಾಡಲಾಯಿತು. ಸಂಸ್ಥಾಪಕರಾದ ಟಿ. ಈಶ್ವರ ಮಾತನಾಡಿದರು. ಡಿವೈಎಸ್‌ಪಿ ಕಲ್ಲೇಶಪ್ಪ, ಎಚ್.ಸಿ. ರಟಗೇರಿ, ಡಿ.ಬಿ. ತಟ್ಟಿ, ವಿ.ಜಿ. ಪಡಗೇರಿ, ವಿಜಯ ಕರಡಿ, ನವೀನ ಕಗ್ಗಲಗೌಡರ, ಪ್ರಾಚಾರ್ಯ ಆರ್.ಜಿ. ಬಾವನವರ, ಪಟ್ಟಣದ ಗಣ್ಯರು, ಪಾಲಕರು, ವಿವಿಧೆಡೆಯಿಂದ ಆಗಮಿಸಿದ್ದ ಐಎಎಸ್, ಐಪಿಎಸ್ ಸೇರಿ ಸರ್ಧಾತ್ಮಕ ಪರೀಕ್ಷೆ ಬರೆಯಲು ಸಿದ್ಧತೆ ನಡೆಸಿರುವ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ವಿದ್ಯಾರ್ಥಿಗಳಾದ ಚೈತ್ರಾ, ರಿಹಾನ್ ಮಲೀಕ, ನವ್ಯಾ, ಕಾರ್ತಿಕ, ಸ್ನೇಹಾ, ಸಂಕೇತ ನಿರ್ವಹಿಸಿದರು. ನಂತರಚಂದನ ಸಂದನ ಸಂವಾದ ಕಾರ್ಯಕ್ರಮ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag; ಶಿರಹಟ್ಟಿ ಕ್ಷೇತ್ರದ ಶಾಸಕ ಚಂದ್ರು ಲಮಾಣಿ ಕಾರು ಚಾಲಕ ಆತ್ಮಹತ್ಯೆ
Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ
Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
MUST WATCH
ಹೊಸ ಸೇರ್ಪಡೆ
ಆಗಸ್ಟ್ 15ಕ್ಕೆ ತೆರೆಗೆ ಬರಲಿದೆ ಅರ್ಜುನ್ ಜನ್ಯಾ ನಿರ್ದೇಶನದ ʼ45ʼ ಸಿನಿಮಾ
Mumbai Unsafe; ಒಂದು ಘಟನೆಯಿಂದ ಹೀಗೆ ಹೇಳುವುದು ಸರಿಯಲ್ಲ: ಸಿಎಂ ಫಡ್ನವಿಸ್
RCB: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಇಂಗ್ಲೆಂಡ್ ಆಫ್ ಸ್ಪಿನ್ನರ್ ಎಂಟ್ರಿ
Saif Ali Khan ಬೆನ್ನುಮೂಳೆಯಿಂದ ಚಾಕು ತೆಗೆದ ವೈದ್ಯರು; ಅಪಾಯದಿಂದ ಪಾರು
Thirthahalli: ನೇಣಿಗೆ ಶರಣಾದ ಹೋಟೆಲ್ ಉದ್ಯಮಿ… ಕಾರಣ ನಿಗೂಢ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.