ವಿಶಿಷ್ಟ ಕೌಶಲ ವೃದ್ಧಿಸಿಕೊಳ್ಳಲು ಸಲಹೆ
ತೋಂಟದಾರ್ಯ ಕಾಲೇಜಿನಲ್ಲಿ ಕ್ರೀಡಾ-ಸಾಂಸ್ಕೃತಿಕ ಚಟುವಟಿಕೆಗೆ ಚಾಲನೆ
Team Udayavani, Aug 11, 2019, 12:13 PM IST
ಗದಗ: ಕೆಎಲ್ಇ ಸಂಸ್ಥೆಯ ಜ| ತೋಂಟದಾರ್ಯ ಮಹಾವಿದ್ಯಾಲಯದಲ್ಲಿ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರೊ| ಎಸ್.ವಿ. ಸಂಕನೂರ ಮಾತನಾಡಿದರು.
ಗದಗ: ವಿದ್ಯಾರ್ಥಿಗಳು ಜೀವನದ ಉದ್ದಕ್ಕೂ ಸ್ವಯಂ ಪ್ರೇರಣೆ ಹಾಗೂ ಕ್ರಿಯಾಶೀಲತೆಯಿಂದ ಎಲ್ಲ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು. ಇದು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ವಿಯಾಗಲು ಸಹಾಯಕಾರಿಯಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರೊ| ಎಸ್.ವಿ. ಸಂಕನೂರ ಹೇಳಿದರು.
ನಗರದ ಕೆಎಲ್ಇ ಸಂಸ್ಥೆಯ ಜಗದ್ಗುರು ತೋಂಟದಾರ್ಯ ಮಹಾವಿದ್ಯಾಲಯದಲ್ಲಿ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆ ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಕೇವಲ ಹೆಚ್ಚು ಅಂಕ ಪಡೆಯಬೇಕೆಂಬ ಹುಮ್ಮಸ್ಸು ಹೊಂದದೇ ತಮ್ಮ ಆಸಕ್ತಿದಾಯಕ ಕ್ಷೇತ್ರಗಳಿಗೆ ಅನುಗುಣವಾಗಿ ಪಠ್ಯದೊಂದಿಗೆ ವಿಶಿಷ್ಟ ಕೌಶಲ ವೃದ್ಧಿಸಿಕೊಳ್ಳಬೇಕು. ಉತ್ಸಾಹದಿಂದ ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ಮತ್ತು ಮಾನಸಿಕ ಬೆಳವಣಿಗೆಯಾಗುತ್ತದೆ. ಇದಕ್ಕಿಂತ ಮಿಗಿಲಾಗಿ ಭಾವನಾತ್ಮಕ ಬೆಳವಣಿಗೆಯೂ ಹೆಚ್ಚುತ್ತದೆ. ಆಗಮಾತ್ರ ಸರ್ವತೋಮುಖ ಅಭಿವೃದ್ಧಿಯಾಗಲು ಸಾಧ್ಯ ಎಂದರು.
ಯುಪಿಎಸ್‌ಸಿಯಲ್ಲಿ ದೇಶಕ್ಕೆ 17ನೇ ರ್‍ಯಾಂಕ್ ಗಳಿಸಿದ ರಾಹುಲ್ ಸಂಕನೂರ ಮಾತನಾಡಿ, ಹಳ್ಳಿಯ ಯುವಜನರು ಕೀಳರಿಮೆ ತೊರೆದು ಆತ್ಮವಿಶ್ವಾಸದಿಂದ ಮುನ್ನುಗ್ಗಬೇಕು ಎಂದರು.
ಪದವಿ ಕಾಲೇಜಿನ ಪ್ರಾಚಾರ್ಯ ಸಿ. ಲಿಂಗಾರೆಡ್ಡಿ ಮಾತನಾಡಿ, ಬಡತನ, ಹಳ್ಳಿ ಬದುಕು ಸಾಧನೆಗೆ ಅಡೆತಡೆಯಾಗದು ಎಂದರು. ಪ್ರೊ| ಎಸ್.ಎಂ. ಬೆಂಗಳೂರ, ಶರಣಪ್ಪ ಸಂಕನೂರ, ಎಸ್.ಪಿ. ಸಂಶಿಮಠ, ವೀರೇಶ ಕೂಗು, ಅಶೋಕ ನಿಲೂಗಲ್ ಇದ್ದರು. ಪ್ರೊ| ಎಸ್.ಜೆ. ಹಿರೇಮಠ ಸ್ವಾಗತಿಸಿದರು. ಪ್ರೊ| ಎಂ.ಎಂ. ನರಗುಂದ ಪರಿಚಯಿಸಿದರು. ರಘುವೀರ ಕಲ್ಬುರ್ಗಿ ವಂದಿಸಿದರು. ಪ್ರೊ| ಶ್ವೇತಾ ಗುಂಡಾ ಹಾಗೂ ಪ್ರೊ| ಎಸ್.ಬಿ. ಹಾವೇರಿ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುದ್ರಣ ಕಾಶಿಯಲ್ಲಿ ಕ್ಯಾಲೆಂಡರ್ ಮುದ್ರಣ ಭರಾಟೆ; ಕ್ಯಾಲೆಂಡರ್-ತೂಗು ಪಂಚಾಂಗಗಳಿಗೆ ಖ್ಯಾತಿ
Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು
Diesel theft; ಗದಗ: ಕೆ.ಎಸ್.ಆರ್.ಟಿ.ಸಿ. ಬಸ್ ಗಳ ಡೀಸೆಲ್ ಕಳ್ಳತನ
ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ
ಗದಗ: 4 ವರ್ಷವಾದರೂ ಮುಗಿಯದ ವಸತಿ ಶಾಲೆ ಕೆಲಸ! 20 ಕೋಟಿ ರೂ. ವೆಚ್ಚ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.