ದನದ ಸಂತೆಗೂ ತಟ್ಟಿದ ಬರದ ಬಿಸಿ
Team Udayavani, Feb 6, 2019, 10:10 AM IST
ಗಜೇಂದ್ರಗಡ: ತಾಲೂಕಿನಲ್ಲಿ ಭೀಕರ ಬರಗಾಲದ ಬಿಸಿ ಜಾರುವಾರುಗಳ ಸಂತೆಗೂ ತಟ್ಟಿದೆ. ದನ ಕರುಗಳನ್ನು ಖರೀದಿಸುವವರಿಲ್ಲದೇ ಬಿಕೋ ಎನ್ನುತ್ತಿವೆ. ಮಾರಲು ಸಂತೆಗೆ ಬರುವ ರೈತರು ದನಗಳನ್ನು ಹಿಡಿದು ಮರಳಿ ಮನೆಗೆ ವಾಪಸ್ಸಾಗುವುದು ಎಲ್ಲೆಡೆ ಸಾಮಾನ್ಯವಾಗಿದೆ.
ಗಜೇಂದ್ರಗಡದ ಜಾನುವಾರುಗಳ ಸಂತೆ ದಿನವಾದ ಮಂಗಳವಾರ ಪಟ್ಟಣ ಸೇರಿದಂತೆ ಸುತ್ತಲಿನ ನೂರಾರು ಗ್ರಾಮಗಳ ರೈತರು ಜಾನುವಾರುಗಳನ್ನು ಕೊಂಡುಕೊಳ್ಳಲು ಪಟ್ಟಣಕ್ಕೆ ಆಗಮಿಸುತ್ತಾರೆ. ಆದರೆ ಈ ವಾರ ದನಗಳನ್ನು ಖರೀದಿಸುವವರ ಸಂಖ್ಯೆ ಗಣನೀಯವಾಗಿ ಇಳಿಮುಖವಾಗಿತ್ತು. ಇದಕ್ಕೆ ಕಾರಣ ಭೀಕರ ಬರದ ಛಾಯೆ. ಸಮಯಕ್ಕೆ ಸರಿಯಾಗಿ ಮಳೆಯಾಗದ ರೈತರು ಬೇಸಾಯ ಮಾಡದೇ ಸಂಕಷ್ಟದ ದಿನಗಳನ್ನು ಎದರಿಸುತ್ತಿದ್ದಾರೆ.
ಕಳೆದ ನಾಲ್ಕು ವರ್ಷಗಳಿಂದ ಬರ ಆವರಿಸಿದೆ. ಒಂದೆಡೆ ಕುಡಿಯುವ ನೀರಿನ ಕೊರತೆ, ಇನ್ನೊಂದೆಡೆ ಮೇವಿನ ಅಭಾವದಿಂದ ರೈತರು ಆತಂಕಕ್ಕೆ ಒಳಗಾಗಿದ್ದಾರೆ. ಅನ್ನದಾತನ ಸಂಗಾತಿಗಳಾದ ಎತ್ತು, ಎಮ್ಮೆಗಳಿಗೆ ಸಾಮಾನ್ಯವಾಗಿ ಹೊಲ, ಗದ್ದೆಗಳಲ್ಲಿ ಬೆಳೆಯುವ ಹುಲ್ಲನ್ನೇ ಹೆಚ್ಚಾಗಿ ಬಳಸಲಾಗುತ್ತದೆ. ಆದರೆ ಈ ಬಾರಿ ವರುಣನ ಮುನಿಸಿನಿಂದಾಗಿ ಹಸಿರು ಇಲ್ಲದಂತಾಗಿ ಜಾನುವಾರುಗಳಿಗೆ ಆಹಾರದ ಸಮಸ್ಯೆ ಬಿಗಡಾಯಿಸಿದೆ.
ಜಾನುವಾರುಗಳಿಗೆ ಸಜ್ಜೆ, ಮೆಕ್ಕೆಜೋಳ, ಭತ್ತದ ಹುಲ್ಲು, ಶೇಂಗಾ ಹೊಟ್ಟು, ಕಡಲೆ ಹೊಟ್ಟು ಹೀಗೆ ಇತರೆ ಧಾನ್ಯಗಳ ಹೊಟ್ಟು ಆಹಾರದ ವಸ್ತುಗಳಾಗಿದ್ದರೂ ಜೋಳದ ಮೇವು ಆಹಾರದ ಮುಖ್ಯ ವಸ್ತುವಾಗಿದೆ. ಆದರೆ ರೈತರು ಇತ್ತೀಚಿನ ದಿನಗಳಲ್ಲಿ ಆಹಾರ ಧಾನ್ಯಗಳ ಬೆಳೆಗಳನ್ನು ಕೈ ಬಿಟ್ಟು ವಾಣಿಜ್ಯ ಬೆಳೆಗಳತ್ತ ಮುಖ ಮಾಡಿರುವುದು ಮೇವಿನ ಅಭಾವ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ರೈತರು ಹೈನುರಾಸುಗಳನ್ನು ಹೊರತುಪಡಿಸಿ ಉಳಿದ ಜಾನುವಾರುಗಳನ್ನು ಸಿಕ್ಕಷ್ಟು ಬೆಲೆಗೆ ಮಾರುತ್ತಿದ್ದಾರೆ.
ಪಟ್ಟಣದಲ್ಲಿ ಮಾರುಕಟ್ಟೆಯಲ್ಲಿ ಕಳೆದ ಎರಡ್ಮೂರು ವರ್ಷಗಳ ಹಿಂದೆ ಜಾನುವಾರುಗಳಿಗೆ ಎಲ್ಲಿಲ್ಲದ ಬೇಡಿಕೆ ಇತ್ತು. ಅಲ್ಲದೇ ಗಜೇಂದ್ರಗಡದ ಜಾನುವಾರುಗಳ ಸಂತೆ ಖರೀದಿಸುವವರಿಂದ ಗಿಜುಗುಡುತ್ತಿತ್ತು. ಆದರೀಗ ಕೊಂಡುಕೊಳ್ಳುವವರು ಇಲ್ಲದಂತಾಗಿದೆ. 60ರಿಂದ 70 ಸಾವಿರ ರೂ. ಬೆಲೆ ಬಾಳುವ ಜೋಡೆತ್ತುಗಳನ್ನು 20ರಿಂದ 25 ಸಾವಿರಕ್ಕೆ ಕೊಟ್ಟರೂ ಖರೀದಿಸುವವರು ಇಲ್ಲದಂತಾಗಿದೆ.
ಮೇವು ಬ್ಯಾಂಕ್ ಸ್ಥಾಪನೆಗೆ ಆಗ್ರಹ
ತಾಲೂಕಿನಲ್ಲಿ ಬರ ಆವರಿಸಿದ್ದು, ರೈತರು ತೀವ್ರ ಸಂಕಷ್ಟದ ದಿನಗಳನ್ನು ಎದುರಿಸುತ್ತಿದ್ದಾರೆ. ಜಾನುವಾರುಗಳಿಗೆ ಹೊಟ್ಟು, ಮೇವು ಇಲ್ಲದೆ ಪರದಾಡುವಂತಾಗಿದೆ. ಇಷ್ಟೆಲ್ಲ ಸಮಸ್ಯೆಯಿಂದ ಬಳಲುತ್ತಿರುವ ರೈತ ಸಮೂಹದ ನೆರವಿಗೆ ಸರ್ಕಾರ ಧಾವಿಸಿ ತಾಲೂಕಿನಲ್ಲಿ ಆದ್ಯತೆಕ್ಕಿಂತ ಹೆಚ್ಚು ಸುಸಜ್ಜಿತ ಮೇವು ಬ್ಯಾಂಕ್ ಸ್ಥಾಪನೆಗೆ ಮುಂದಾಗಬೇಕೆನ್ನುವುದು ಅನ್ನದಾತರ ಆಗ್ರಹವಾಗಿದೆ.
ಮಳೆಯ ಅವಕೃಪೆಯಿಂದಾಗಿ ಬಿತ್ತಿದ ಬೆಳೆ ಬಾರದೇ ಸಾಲದ ಸುಳಿಗೆ ಸಿಲುಕಿ ಊರು ಬಿಡೋ ಪರಿಸ್ಥಿತಿ ಬಂದೈತ್ರಿ. ಇದರ ಮಧ್ಯೆ ದನಕರುಗಳಿಗೆ ಹೊಟ್ಟು ಮೇವು ಇಲ್ಲದಂಗಾಗಿ ಬಾಳ ಕಷ್ಟಾಗೈತ್ರಿ. ಹೀಗಾಗಿ ಕೊಟ್ಟಷ್ಟ ಕೊಡ್ಲಿ ಅಂತ ಸಂತ್ಯಾಗ ದನಕರುಗಳನ್ನು ಮಾರಾಕ ಬಂದರೂ ಕೊಂಡಕೊಳ್ಳೋರಿಲ್ರಿ.
•ಹನಮಪ್ಪ ಕೊಡಕೇರಿ, ರೈತ
ಬರಗಾಲದ ಸಂದರ್ಭದಲ್ಲಿ ಜಾನುವಾರುಗಳಿಗೆ ಆಹಾರ ಒದಗಿಸುವ ನಿಟ್ಟಿನಲ್ಲಿ ಮೇವು ಬ್ಯಾಂಕ್ ತೆರೆಯಲು ಪಿಡಿಒ ಮತ್ತು ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸ್ಥಳ ಗುರುತಿಸಲು ಸೂಚಿಸಲಾಗಿದೆ. ಹೋಬಳಿಗೆ ಒಂದರಂತೆ ಬ್ಯಾಂಕ್ ತೆರೆಯಲು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಆದ್ಯತೆ ಮೇರೆಗೆ ಇನ್ನೆರಡು ದಿನಗಳಲ್ಲಿ ಮೇವು ಬ್ಯಾಂಕ್ ಆರಂಭಕ್ಕೆ ಕ್ರಮ ಜರುಗಿಸಲಾಗುವುದು.
•ಗುರುಸಿದ್ದಯ್ಯ ಹಿರೇಮಠ, ತಹಶೀಲ್ದಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
Rey Mysterio Sr: ಖ್ಯಾತ ರೆಸ್ಲರ್ ರೇ ಮಿಸ್ಟೀರಿಯೊ ಸೀನಿಯರ್ ಇನ್ನಿಲ್ಲ
Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!
Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ
ಜೋಡೋ ಯಾತ್ರೆಯಲ್ಲಿ”ನಗರ ನಕ್ಸಲರು’: ಮಹಾರಾಷ್ಟ್ರ ಸಿಎಂ ಫಡ್ನವೀಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.