ರೈತರ ಮನೆಬಾಗಿಲಿಗೆ ಕೃಷಿ ಮಾಹಿತಿ
ಸಮಗ್ರ ಕೃಷಿ ಅಭಿಯಾನ ಮಾಹಿತಿ ರಥಕ್ಕೆ ಶಾಸಕ ಕಳಕಪ್ಪ ಬಂಡಿ ಚಾಲನೆ •
Team Udayavani, Aug 4, 2019, 12:04 PM IST
ಗಜೇಂದ್ರಗಡ: ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ನಡೆದ ಸಮಗ್ರ ಕೃಷಿ ಅಭಿಯಾನ ಮಾಹಿತಿ ರಥಕ್ಕೆ ಶಾಸಕ ಕಳಕಪ್ಪ ಬಂಡಿ, ಎಪಿಎಂಸಿ ಸದಸ್ಯರಾದ ಅಂಬರೀಶ ಬಳಿಗೇರ, ಸುಗಿರೇಶ ಕಾಜಗಾರ ಚಾಲನೆ ನೀಡಿದರು.
ಗಜೇಂದ್ರಗಡ: ಕೃಷಿ ಇಲಾಖೆ ರೈತರಿಗೆ ಬೇಕಾದ ಎಲ್ಲ ಮಾಹಿತಿಯನ್ನು ಮನೆ ಬಾಗಿಲಿಗೆ ತಲುಪಿಸುವ ಕಾರ್ಯ ಮಾಡುತ್ತಿದ್ದು, ರೈತರು ಇದರ ಸದುಪಯೋಗ ಪಡೆಯಬೇಕು. ಈ ಮೂಲಕ ಹೆಚ್ಚು ಬೆಳೆ ಬೆಳೆದು ಆರ್ಥಿಕ ಸಬಲತೆ ಕಾಣುವ ದೃಷ್ಟಿಯಿಂದ ಕೃಷಿ ಇಲಾಖೆ ಮಾರ್ಗದರ್ಶನ ಪಡೆದುಕೊಳ್ಳಬೇಕಿದೆ ಎಂದು ಶಾಸಕ ಕಳಕಪ್ಪ ಬಂಡಿ ಹೇಳಿದರು.
ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ಜಿಪಂ, ಜಿಲ್ಲಾ ಕೃಷಿ ಇಲಾಖೆ ವತಿಯಿಂದ ಶನಿವಾರ ನಡೆದ ಸಮಗ್ರ ಕೃಷಿ ಅಭಿಯಾನ ಮಾಹಿತಿ ರಥಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ರಾಜ್ಯ ಸರ್ಕಾರ ಕೃಷಿ ಕ್ಷೇತ್ರವನ್ನು ಅಭಿವೃದ್ಧಿಪಡಿಸುವ ದೃಷ್ಟಿಯಿಂದ ಹಲವಾರು ಕಾರ್ಯಕ್ರಮಗಳನ್ನು ಪ್ರತಿವರ್ಷ ಅನುಷ್ಠಾನಕ್ಕೆ ತರುತ್ತಿದೆ. ಅಲ್ಲದೇ ಆಧುನಿಕತೆಗೆ ತಕ್ಕಂತೆ ಕೃಷಿ ಕ್ಷೇತ್ರದಲ್ಲಿ ಅಭಿವೃದ್ಧಿ ಮಾಡುವ ಉದ್ದೇಶದಿಂದ ಹಲವಾರು ಬದಲಾವಣೆ ಅನುಸರಿಸುತ್ತಿದೆ. ಇದರ ಮಾಹಿತಿಯನ್ನು ರೈತರಿಗೆ ತಲುಪಿಸುವ ಕಾರ್ಯವೂ ನಡೆದಿದೆ. ಪ್ರಸ್ತುತ ಪಾರಂಪರಿಕ ಪದ್ಧತಿ ಜೊತೆಗೆ ಆಧುನಿಕ ಪದ್ಧತಿ ಅಳವಡಿಸಿಕೊಂಡರೆ ಉತ್ತಮ. ಇದಕ್ಕಾಗಿ ಕೃಷಿ ಇಲಾಖೆ ವತಿಯಿಂದ ರೈತರಿಗೆ ದೊರೆಯುವ ವಿವಿಧ ಸೌಲಭ್ಯ ಸದ್ಬಳಕೆ ಮಾಡಿಕೊಂಡು ಹೆಚ್ಚಿನ ಲಾಭ ಪಡೆಯಲು ಮುಂದಾಗಬೇಕು. ಜೊತೆಗೆ ಅಧಿಕಾರಿಗಳು ಎಲ್ಲ ರೈತರಿಗೆ ಯೋಜನೆಗಳ ಸಂಪೂರ್ಣ ಮಾಹಿತಿ ನೀಡಲು ಹಿಂಜರಿಯಬಾರದು ಎಂದು ಸೂಚಿಸಿದರು.
ಎಪಿಎಂಸಿ ಸದಸ್ಯ ಅಂಬರೀಶ ಬಳಿಗೇರ ಮಾತನಾಡಿ, ರೈತರು ಸಮರ್ಪಣಾಭಾವದಲ್ಲಿ ತೊಡಗಿಸಿ ತಮ್ಮ ಕಾರ್ಯ ಮಾಡುತ್ತಿದ್ದು, ಕೃಷಿಯಿಂದ ನಮ್ಮ ಸಂಸ್ಕೃತಿ, ಬದುಕು, ದೇಶದ ಬೆಳವಣಿಗೆ ಸಾಧ್ಯ. ಆದ್ದರಿಂದ ರೈತರಿಗೆ ಬೆನ್ನೆಲುಬಾಗಿ ನಿಂತು ಮಾಹಿತಿ, ಸೌಲಭ್ಯ ನೀಡಲು ಸರಕಾರ ಕೃಷಿ ಅಭಿಯಾನ ಹಮ್ಮಿಕೊಂಡಿದ್ದು, ಇದರ ಸದುಪಯೋಗ ಪಡೆದುಕೊಳ್ಳಿ ಎಂದರು.
ಜಿಲ್ಲಾ ಉಪ ಕೃಷಿ ನಿರ್ದೇಶಕ ಮೋಹನದಾಸ್ ಕೆ.ಎಸ್. ಮಾತನಾಡಿ, ಈ ರಥವು ಎಲ್ಲ ಹಳ್ಳಿಗಳಲ್ಲಿಯೂ ಸಂಚರಿಸಿ ಕೃಷಿ ಉತ್ಪಾದಕತೆ ಹೆಚ್ಚಿಸುವ ನಿಟ್ಟಿನಲ್ಲಿ ಅವಶ್ಯವಿರುವ ತಂತ್ರಜ್ಞಾನವನ್ನು ರೈತರಿಗೆ ತಲುಪಿಸಲು ಏಕಗವಾಕ್ಷಿ ವಿಸ್ತರಣೆ ಪದ್ಧತಿಯಲ್ಲಿ ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ ಶೀರ್ಷಿಕೆ ಅಡಿಯಲ್ಲಿ ಹೋಬಳಿ ಮಟ್ಟದಲ್ಲಿ ಹಮ್ಮಿಕೊಳ್ಳಲಾಗಿದೆ. ಮೊದಲನೆ ಮತ್ತು ಎರಡನೆಯ ದಿನ ಪ್ರತಿಯೊಂದು ಹೋಬಳಿಯಲ್ಲಿ ಗ್ರಾಪಂವಾರು ಕಾರ್ಯತಂಡ ರಚಿಸಿ ರೈತರಿಗೆ ಮಾಹಿತಿ ನೀಡಲಾಗುವುದು. ರೈತರು ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮ ಯಶಸ್ಸಿಗೊಳಿಸಬೇಕು ಎಂದರು.
ಎಪಿಎಂಸಿ ಸದಸ್ಯ ಸುಗಿರೇಶ ಕಾಜಗಾರ, ಎಸ್.ಎಸ್. ಅರಹುಣಸಿ, ಶಂಕರ ಕಲಿಗೊಣ್ಣವರ, ಭಾಸ್ಕರ ರಾಯಬಾಗಿ, ಎಸ್.ಎಸ್. ವಾಲಿ, ಶರಣಪ್ಪ ರೇವಡಿ, ಹಿರಿಯ ತೋಟಗಾರಿಕಾ ಅಧಿಕಾರಿ ಎಂ.ಎಂ. ತಾಂಬೋಟಿ, ಸಹಾಯಕ ತೋಟಗಾರಿಕಾ ಅಧಿಕಾರಿ ಶರಣಯ್ಯ ಅಂಗಡಿ, ಚನ್ನಪ್ಪ ಅಂಗಡಿ, ಎಸ್.ಎಫ್. ತಹಶೀಲ್ದಾರ್, ಸಾವಿತ್ರಿ ಶಿವನಗೌಡರ, ಬುಡ್ಡಪ್ಪ ಮೂಲಿಮನಿ, ಶರಣಪ್ಪ ಕಂಬಳಿ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.