3 ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ಮಾತ್ರೆ ವಿತರಿಸುವ ಗುರಿ
Team Udayavani, Jul 31, 2019, 12:13 PM IST
ಗದಗ: ಡಿಸಿ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ಅಧ್ಯಕ್ಷತೆಯಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆ ಸಮನ್ವಯ ಸಮಿತಿ ಸಭೆ ನಡೆಯಿತು.
ಗದಗ: ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಇನ್ನಿತರ ಇಲಾಖೆಗಳ ಸಹಯೋಗದೊಂದಿಗೆ ಆರೋಗ್ಯ ಇಲಾಖೆಯ ಅನುಷ್ಠಾನ ಅಧಿಕಾರಿಗಳು ಸೆ. 25ರಂದು ಜರುಗುವ ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನಾಚರಣೆಯನ್ನು ಯಶಸ್ವಿಗೊಳಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ತಿಳಿಸಿದರು.
ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆ ಸಮನ್ವಯ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲಾ ಆರೋಗ್ಯ ಅಧಿಕಾರಿ ಡಾ| ವಿರೂಪಾಕ್ಷರೆಡ್ಡಿ ಮಾದಿನೂರ ಮಾತನಾಡಿ, ಸೆ. 25ರಂದು ಜರುಗಲಿರುವ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಬಗ್ಗೆ ಮಾಹಿತಿ ನೀಡಿ ಜಿಲ್ಲೆಯಲ್ಲಿ 1 ರಿಂದ 19 ವರ್ಷದೊಳಗೆ ಇರುವ ಸುಮಾರು 3,67,412 ಮಕ್ಕಳಿಗೆ ಜಂತುಹುಳು ನಿವಾರಣಾ ಮಾತ್ರೆ ವಿತರಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ| ಬಿ.ಎಂ. ಗೊಜನೂರ ಮಾತನಾಡಿ, ಜಂತು ಹುಳುವಿನಿಂದ ಮಗುವಿನ ಮಾನಸಿಕ ಹಾಗೂ ದೈಹಿಕ ಬೆಳವಣಿಗೆ ಕುಂಠಿತಗೊಳ್ಳುತ್ತದೆ. ಸ್ವಚ್ಛ ವಾತಾವರಣ ನಿರ್ಮಾಣ, ಬಯಲು ಮಲವಿಸರ್ಜನೆ ತಡೆಗಟ್ಟುವುದು ಮತ್ತು ಮಕ್ಕಳು, ಪಾಲಕರಿಗೆ ಸ್ವಚ್ಛತೆ ಕುರಿತು ತಿಳಿವಳಿಕೆ ನೀಡಲಾಗುತ್ತದೆ. ಅದರೊಂದಿಗೆ ಜಂತುಹುಳು ನಿವಾರಣಾ ಮಾತ್ರೆ ವಿತರಿಸುವ ಮೂಲಕ ಜಂತು ಹುಳುವಿನ ಬಾಧೆ ತಡೆಗಟ್ಟಲು ಪ್ರಯತ್ನಿಸಲಾಗುತ್ತದೆ ಎಂದು ತಿಳಿಸಿದರು.
ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ| ಅರುಂಧತಿ ಕೆ., ತಾಲೂಕು ಆರೋಗ್ಯಾಧಿಕಾರಿಗಳಾದ ಡಾ| ಎಸ್.ಎಸ್. ನೀಲಗುಂದ, ಡಾ| ರೇಣುಕಾ ಕೋರನವರ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಸುರೇಶ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ
Gadaga: ಪಂಚಮಸಾಲಿ ಮೀಸಲಾತಿ ಹೋರಾಟಗಾರರು ಪೊಲೀಸ್ ವಶಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.