ಅನುದಾನ ಕಡಿತ ವಿರೋಧಿಸಿ ಪ್ರತಿಭಟನೆ
Team Udayavani, Mar 16, 2021, 4:50 PM IST
ಗದಗ: ರಾಜ್ಯ ಸರ್ಕಾರದ ಬಜೆಟ್‌ನಲ್ಲಿ ಐಸಿಡಿಎಸ್ ಯೋಜನೆಯಲ್ಲಿ ಶೇ.30 ರಷ್ಟು ಅನುದಾನ ಕಡಿತ ಮಾಡಿದ್ದನ್ನು ಖಂಡಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಹಾಗೂ ಜಿಲ್ಲೆಯ ಆಯಾ ತಾಲೂಕಿನ ತಹಶೀಲ್ದಾರ್ ಕಚೇರಿ ಎದುರು ಅಂಗನವಾಡಿ ನೌಕರರ ಸಂಘ(ಸಿಐಟಿಯು)ದ ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆರು ಹಾಗೂ ಸಹಾಯಕಿಯರು ಉಪವಾಸ ಸತ್ಯಾಗ್ರಹ ನಡೆಸಿದರು.
ನಗರದ ಜಿಲ್ಲಾಡಳಿತ ಭವನದ ಎದುರು ನಡೆದ ಸತ್ಯಾಗ್ರಹದಲ್ಲಿ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾರುತಿ ಚಿಟಗಿ ಮಾತನಾಡಿ, ಈ ಬಾರಿ ಬಜೆಟ್‌ನಲ್ಲಿ ಅಂಗನವಾಡಿ ನೌಕರರ ಸೇವೆ ಕಾಯಂಗೊಳಿಸುವಿಕೆ, ನಿವೃತ್ತಿ ಮತ್ತು ಪಿಂಚಣಿ ಸೌಲಭ್ಯ, ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಗೌರವಧನ ಹೆಚ್ಚಳ, ಸೇವಾ ಜೇಷ್ಠತೆ ಆಧಾರದಲ್ಲಿ ಗೌರವ ಧನ ಬಿಡುಗಡೆ ಮಾಡಬೇಕು. ಮಿನಿ ಅಂಗನವಾಡಿ ಕೇಂದ್ರಗಳಿಗೆ ಸಹಾಯಕಿ ನೀಡಬೇಕು ಎಂಬುದು ಸೇರಿದಂತೆ ಇನ್ನಿತರೆ ಬೇಡಿಕೆಗಳನ್ನು ಸರಕಾರ ಕಡೆಗಣಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಐಸಿಡಿಎಸ್ ಕಾರ್ಯಗಳನ್ನು ಹೊರತಾಗಿ ಇನ್ನಿತರರೆ ಸಮೀಕ್ಷೆಗಳಿಗೆ ಅಂಗನವಾಡಿ ಕಾರ್ಯಕರ್ತರನ್ನು ಬಳಸಿಕೊಳ್ಳಬಾರದು. ಕೊರೊನಾ ವಾರಿಯರ್ಗಳಾಗಿ ದುಡಿದ ಮೃತಪಟ್ಟಿರುವ 38 ಜನ ಅಂಗನವಾಡಿ ಕಾಯಕರ್ತೆಯರಿಗೆ ಪರಿಹಾರ ವಿತರಿಸಬೇಕು ಎಂದು ಆಗ್ರಹಿಸಿದರು. ಅಧ್ಯಕ್ಷೆ ಸಾವಿತ್ರಿ ಸಬನಿಸ್, ವಿಜಯಾ ಪಾಟೀಲ್, ಡಿ.ಎಚ್.ರಡ್ಡೇರ, ಶಂಕ್ರಮ್ಮ ಕೋಳಿವಾಡ ಮತ್ತಿತರರು ಪಾಲ್ಗೊಂಡಿದ್ದರು.
ಜ್ಯೇಷ್ಠತೆ ಆಧಾರದಲ್ಲಿ ಗೌರವ ಧನ ನೀಡಿ :
ರೋಣ: ಮಹಿಳಾ ವಿರೋಧಿ ನೀತಿಯನ್ನು ವಿರೋಧಿಸಿ ಹಾಗೂ ಮಹಿಳಾ ಮತ್ತು ಮಕ್ಕಳ ಇಲಾಖೆಯ ಶಿಪಾರಸ್ಸುಗಳನ್ನು ಬಜೆಟ್ ಅಂತಿಮಗೊಳಿಸುವ ಸಂದರ್ಭದಲ್ಲಿ ಸೇರ್ಪಡೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆರು ರೋಣ ತಹಶೀಲ್ದಾರ್ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಿಐಟಿಯು ಮುಖಂಡ ಮಹೇಶ ಹಿರೇಮಠ ಮಾತನಾಡಿ, ಅಂಗನವಾಡಿ ನೌಕರರು ಕಡಿಮೆ ಸೌಲಭ್ಯಗಳು ಇದ್ದರೂ ಕೂಡ ಕೊರೊನಾ ಸಂದರ್ಭದಲ್ಲಿ ಸರ್ಕಾರ ಸೂಚನೆ ಕೊಟ್ಟ ಕೂಡಲೇ ಷರತ್ತುಗಳಿಲ್ಲದೆ ಕೊರೊನಾ ಕಾರ್ಯಪಾಲಕರಾಗಿ ಕೆಲಸ ನಿರ್ವಹಿಸಿದ್ದೇವೆ. ಈ ವೇಳೆ ಕೆಲಸದ ಒತ್ತಡದಿಂದ 35 ಜನ, ಕೊರೊನಾಗೆ 21 ಜನರು ಬಲಿಯಾಗಿದ್ದಾರೆ. 173 ಜನರಿಗೆ ಕೊರೊನಾ ಬಂದು ಆ ದಿನಗಳಲ್ಲಿ ತಮ್ಮ ಕುಟುಂಬದ ಆದಾಯ ಕಳೆದುಕೊಂಡಿದ್ದಾರೆ. ರಾಜ್ಯ ಹೈಕೋರ್ಟ್ ಕೊರೊನಾ ಸಂದರ್ಭದಲ್ಲಿ ಮಕ್ಕಳಿಗೆ ಮತ್ತು ಮಹಿಳೆಯರಿಗೆ ಅಪೌಷ್ಟಿಕತೆ ತಡೆಯಲು ಪೌಷ್ಟಿಕ ಆಹಾರವನ್ನು ವಿತರಿಸಿದ ಬಗ್ಗೆ ಖಾತರಿ ಪಡಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿತ್ತು. ಆದರೆ ಆ ಎಲ್ಲ ದೂರ ದೂರುಗಳಿಂದ ರಾಜ್ಯ ಸರ್ಕಾರದ ಕಾಪಾಡಿದ್ದು, ಅಂಗನವಾಡಿ ಕಾರ್ಯಕರ್ತೆಯರು ಎಂಬುವುದನ್ನು ಸರ್ಕಾರ ಮರೆಯಬಾರದು ಎಂದರು.
ಗಂಗಮ್ಮ ದೇವರಡ್ಡಿ ಮಾತನಾಡಿದರು. ಗಂಗಮ್ಮ ದೇವರೆಡ್ಡಿ, ಶೋಭಾ ಅಂಕಲಿ, ಸಾವಿತ್ರೀ ಪಾಟೀಲ, ಚಂದ್ರಕಲಾ ಕರವಳಿ, ಗೀತಾ ಪಾಟೀಲ, ಜಯದೇವಿ ಕಳಕಾಪುರ, ಗಂಗಮ್ಮ ಪಾಟೀಲ, ವಿಜಯಲಕ್ಷ್ಮೀ ದಿಂಡೂರ, ಶಾರದಾ ಸುಂಕದ, ಗಂಗಮ್ಮ ಹಡಪದ, ಗೀತಾ ಕುಲಕರ್ಣಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ಭೀಷ್ಮ ಕೆರೆಗೆ ಸಚಿವ ಎಚ್.ಕೆ. ಪಾಟೀಲ ಬಾಗಿನ ಅರ್ಪಣೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf Issue: ಐದು ವರ್ಷ ಹಿಂದೆ ವಕ್ಫ್ ಆಸ್ತಿ ವಿರುದ್ಧ ಹೋರಾಡಿ ಗೆದ್ದಿದ್ದ 315 ರೈತರು
Gadaga: ಐತಿಹಾಸಿಕ ವೀರನಾರಾಯಣ ದೇವಸ್ಥಾನ ಪುನರುತ್ಥಾನ ಕಾರ್ಯಕ್ಕೆ ಚಾಲನೆ
ಕುಂಬಾರರ ಬದುಕಿನಲ್ಲಿಲ್ಲ ದೀಪಾವಳಿ ಬೆಳಕು: ಮಾರುಕಟ್ಟೆಗೆ ಲಗ್ಗೆ ಇಟ್ಟ ಪಿಂಗಾಣಿ ಹಣತೆ
MUST WATCH
ಹೊಸ ಸೇರ್ಪಡೆ
By Election: ಚನ್ನಪಟ್ಟಣದಲ್ಲಿ ಧರ್ಮ-ಅಧರ್ಮದ ನಡುವೆ ಚುನಾವಣೆ: ಎಚ್.ಡಿ.ಕುಮಾರಸ್ವಾಮಿ
By Poll: ರಣರಂಗವೂ ಇಲ್ಲ, ಚದುರಂಗವೂ ಇಲ್ಲ, ಜನರೇ ಪಟ್ಟಿ ಮಾಡಿ, ಅಂಕ ನೀಡ್ತಾರೆ: ಡಿಕೆಶಿ
Janapada Academy: ಚಿನ್ನಪ್ಪ ಗೌಡಗೆ ಜೀಶಂಪ, ಬೇವಿನಕಟ್ಟಿಗೆ ಗದ್ದಗಿಮಠ ತಜ್ಞ ಪ್ರಶಸ್ತಿ
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.