ಅಪ್ಪಣ್ಣನವರ ವಚನಗಳು ಸಾರ್ವಕಾಲಿಕ
•ಜಯಂತ್ಯುತ್ಸವ ಆಚರಣೆ-ಭಾವಚಿತ್ರ ಅದ್ಧೂರಿ ಮೆರವಣಿಗೆ-ವಿಶೇಷ ಪೂಜೆ
Team Udayavani, Jul 17, 2019, 2:15 PM IST
ಗಜೇಂದ್ರಗಡ: ಹಡಪದ ಅಪ್ಪಣ್ಣನವರ ಜಯಂತಿ ಪ್ರಯುಕ್ತ ಭಾವಚಿತ್ರ ಮೆರವಣಿಗೆ ನಡೆಯಿತು.
ಗದಗ: ಹಡಪದ ಅಪ್ಪಣ್ಣನವರ ವಚನ ಸಂದೇಶಗಳು ಸಾರ್ವಕಾಲಿಕವಾಗಿದ್ದು, ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಾ.ಪಂ. ಅಧ್ಯಕ್ಷ ಮೋಹನ ದುರಗಣ್ಣವರ ಹೇಳಿದರು.
ಜಿಲ್ಲಾಡಳಿತ, ಜಿ.ಪಂ., ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನಗರದ ತೋಂಟದಾರ್ಯ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಆಯೋಜಿಸಿದ್ದ ಶರಣ ಹಡಪದ ಅಪ್ಪಣ್ಣ ಜಯಂತ್ಯುತ್ಸವ ಉದ್ಘಾಟಿಸಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿದ್ದ ತೋಂಟದಾರ್ಯ ಮಠದ ಪೀಠಾಧಿಪತಿ ಡಾ|ತೋಂಟದ ಸಿದ್ಧರಾಮ ಸ್ವಾಮೀಜಿ ಆಶೀರ್ವಚನ ನೀಡಿ, ಶಿವಶರಣ ಅಪ್ಪಣ್ಣವರು ಬಸವಣ್ಣನವರ ಸಮಕಾಲೀನರು. 12ನೇ ಶತಮಾನದಲ್ಲಿ ನಡೆದ ವಚನ ಚಳವಳಿಯು ಜಾಗತಿಕ ಇತಿಹಾಸದಲ್ಲಿಯೇ ಶ್ರೇಷ್ಠ ಚಳುವಳಿಯಾಗಿತ್ತು ಎಂದರು.
ಗದಗ ತಾಲೂಕು ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರಕಾಶ ಅಸುಂಡಿ ಅವರು ಹಡಪದ ಅಪ್ಪಣ್ಣನವರ ಜೀವನ ಸಾಧನೆ ಕುರಿತು ಉಪನ್ಯಾಸ ನೀಡಿದರು.
ಸಮಾರಂಭದಲ್ಲಿ ಹಡಪದ ಅಪ್ಪಣ್ಣ ಸಮಾಜದ ಪ್ರಮುಖರು ಹಾಗೂ ಎಸ್‌ಎಸ್‌ಎಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ತಾ.ಪಂ. ಉಪಾಧ್ಯಕ್ಷೆ ಸುಜಾತಾ ಖಂಡು, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ತಹಶೀಲ್ದಾರ್ ಶ್ರೀನಿವಾಸ ಕುಲಕರ್ಣಿ, ನಿರ್ಮಿತಿ ಕೇಂದ್ರ ಗಂಗಾಧರ ಶಿರೋಳ, ಜಿಲ್ಲಾ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘದ ಅಧ್ಯಕ್ಷ ಮೋಹನ ಚಂದಪ್ಪನವರ, ಹಡಪದ ಅಪ್ಪಣ್ಣ ಸಮಾಜ ಸೇವಾ ಹುಲಕೋಟಿ ಸಂಘದ ಅಧ್ಯಕ್ಷ ಕಲ್ಲಪ್ಪ ಹಡಪದ, ಟಿ.ವೈ. ಹಡಪದ ವೇದಿಕೆ ಮೇಲಿದ್ದರು. ಅರ್ಜುನ ಗೊಳಸಂಗಿ ಸ್ವಾಗತಿಸಿದರು. ಎ.ವಿ. ಪ್ರಭು ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!
Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ ಸಂಪುಟ
laws: ಕಠಿಣ ಕಾಯ್ದೆ ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್
Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.