ರಾಜ್ಯಗಳ ಜನಸಂಖ್ಯೆ ಆಧಾರದಲ್ಲಿ ನೇಮಕಾತಿ

•23,956 ಅಭ್ಯರ್ಥಿಗಳ ನೋಂದಣಿ•ಮುಂದಿನ ರ್ಯಾಲಿ ಕೊಪ್ಪಳದಲ್ಲಿ •ಸೇನೆ ಸೇರಲು ಪ್ರೋತ್ಸಾಹ

Team Udayavani, May 31, 2019, 11:48 AM IST

gadaga-tdy-2…

ಗದಗ: ನಗರದಲ್ಲಿ ಭೂ ಸೇನಾ ನೇಮಕಾತಿಯ ರಾಜ್ಯದ ಹೆಚ್ಚುವರಿ ಮಹಾನಿರ್ದೇಶಕ ಮೇಜರ್‌ ಜನರಲ್ ವಿಜಯ ಪಿಂಗಳೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಗದಗ: ರಾಜ್ಯಗಳ ಜನಸಂಖ್ಯೆ ಆಧಾರದಲ್ಲಿ ಸೇನಾ ನೇಮಕಾತಿ ನಡೆಸಲಾಗುತ್ತದೆ. ಸೇನೆಯಲ್ಲಿ ನೇಮಕಗೊಳ್ಳಲು ಓಟ ಹಾಗೂ ದೈಹಿಕ ಸದೃಢತೆ ಮುಖ್ಯವಾಗಲಿದ್ದು, ಆಸಕ್ತರು ನಿರಂತರ ಅಭ್ಯಾಸ ಮಾಡಬೇಕು. ಸದ್ಯ ಸೇನೆಯಲ್ಲಿ ಜನರಲ್ ಡ್ಯೂಟಿಗೆ ಸೇರ್ಪಡೆಗೊಂಡವರಿಗೆ ಕನಿಷ್ಠ 40 ಸಾವಿರ ರೂ. ಮಾಸಿಕ ಸಂಬಳ ದೊರೆಯುತ್ತದೆ. ಈ ಹಿನ್ನೆಲೆಯಲ್ಲಿ ತಮ್ಮ ಮಕ್ಕಳು ಭಾರತೀಯ ಸೇನೆಯಲ್ಲಿ ಭರ್ತಿಯಾಗಲು ಪೋಷಕರು ಪ್ರೋತ್ಸಾಹಿಸಬೇಕು ಎಂದು ಭೂ ಸೇನಾ ನೇಮಕಾತಿಯ ರಾಜ್ಯದ ಹೆಚ್ಚುವರಿ ಮಹಾನಿರ್ದೇಶಕ ಮೇಜರ್‌ ಜನರಲ್ ವಿಜಯ ಪಿಂಗಳೆ ಹೇಳಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗದುಗಿನಲ್ಲಿ ಮೇ 28ರಿಂದ ಜೂನ್‌ 6ರ ವರೆಗೆ ರಾಜ್ಯದ 11 ಜಿಲ್ಲೆಗಳ ನೋಂದಾಯಿತ ಅಭ್ಯರ್ಥಿಗಳ ನೇಮಕಾತಿ ಪ್ರಕ್ರಿಯೆ ನಡೆಸಲಾಗುತ್ತಿದೆ. ಈ ಭಾಗದ ತರುಣರು ದೈಹಿಕ ಸಾಮರ್ಥ್ಯ ಹೊಂದಿದ್ದರೂ ಓಟ ಹಾಗೂ ಲಿಖೀತ ಪರೀಕ್ಷೆಗೆ ಪೂರ್ವ ಸಿದ್ಧತೆ ಇಲ್ಲದೇ ನೇಮಕಾತಿ ರ್ಯಾಲಿಯಲ್ಲಿ ಭರ್ತಿಯಾಗುತ್ತಿದ್ದಾರೆ. ಇನ್ನೂ ಕೆಲವು ಪ್ರಕರಣಗಳಲ್ಲಿ ಪಾಲಕರೇ ಮಕ್ಕಳಿಗೆ ಸೇನೆಗೆ ಹೋಗುವುದು ಬೇಡ ಎನ್ನುವ ಕಾರಣಗಳಿಂದ ಕಡಿಮೆ ಸಂಖ್ಯೆಯಲ್ಲಿ ನೇಮಕಾತಿ ಆಗುತ್ತಿದೆ.

ಗದುಗಿನಲ್ಲಿ ನಡೆಯುತ್ತಿರುವ ರ್ಯಾಲಿಯಲ್ಲಿ ದಿನವೂ 2,500 ಅಭ್ಯರ್ಥಿಗಳಿಗೆ ಅವಕಾಶ ನೀಡುತ್ತಿದ್ದು, ಅವರ ದೈಹಿಕ ಸಾಮರ್ಥ್ಯ ಆರೋಗ್ಯ ಹಾಗೂ ಲಿಖೀತ ಪರೀಕ್ಷೆಗಳ ಪೂರ್ವ ಸಿದ್ಧತೆ ಕೊರತೆಯಿಂದಾಗಿ ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆ ಆಗುತ್ತಿಲ್ಲ. ಇದನ್ನು ಅಭ್ಯರ್ಥಿಗಳು ಪಾಲಕರು ಗಮನಿಸಿ ಮುಂಬರುವ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆ ಆಗುವಂತೆ ಪೂರ್ವ ಸಿದ್ಧತೆಗೆ ಮುಂದಾಗಬೇಕೆಂದು ತಿಳಿಸಿದರು. ಮುಂದಿನ ರ್ಯಾಲಿ ಕೊಪ್ಪಳದಲ್ಲಿ ನಡೆಸಲಾಗುವುದು ಎಂದರು.

ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಮಾತನಾಡಿ, ರಾಜ್ಯದ ಹಿಂದುಳಿದ ಜಿಲ್ಲೆಗಳಲ್ಲಿ ಸೇನಾ ನೇಮಕಾತಿ ಜರುಗಿಸಿ, ಈ ಭಾಗದ ಅಭ್ಯರ್ಥಿಗಳಿಗೆ ಹೆಚ್ಚಿನ ಅವಕಾಶ ನೀಡುವ ಉದ್ದೇಶದಿಂದ ಈ ಬಾರಿ ಗದುಗಿನಲ್ಲಿ ರ್ಯಾಲಿ ಆಯೋಜಿಸಿದೆ. ಗದಗ ಭೂ ಸೇನಾ ನೇಮಕಾತಿಗೆ 23,956 ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ನೋಂದಾಯಿಸಿದ್ದಾರೆ. ನೇಮಕಾತಿ ಪ್ರಕ್ರಿಯೆ ನಿರ್ವಹಿಸಲು ಜಿಲ್ಲಾ ಕ್ರೀಡಾಂಗಣ, ಅಭ್ಯರ್ಥಿಗಳಿಗೆ ವಿವಿಧ ಸಮುದಾಯ ಭವನಗಳಲ್ಲಿ ವಸತಿ ಸೌಕರ್ಯ ಒದಗಿಸಲಾಗಿದೆ ಎಂದು ತಿಳಿಸಿದರು.

ರಾಜ್ಯದ ಭೂಸೇನಾ ನೇಮಕಾತಿ ಮಹಾನಿರ್ದೇಶಕ ಬ್ರಿಗೇಡಿಯರ್‌ ದೀಪೇಂದ್ರ ರಾವತ್‌ ಮಾತನಾಡಿ, ಸೇನಾ ಭರ್ತಿ ರ್ಯಾಲಿ ಸಂಪೂರ್ಣ ಪಾರದರ್ಶಕವಾಗಿ ನಡೆಯಲಿದೆ. ನೇಮಕಾತಿಯಲ್ಲಿ ಮಧ್ಯವರ್ತಿಗಳ ಹಸ್ತಕ್ಷೇಪಕ್ಕೆ ಅವಕಾಶವಿಲ್ಲ. ಅಭ್ಯರ್ಥಿಯ ಆಯ್ಕೆಗೆ ಅಗತ್ಯದ ಓಟ, ಹೈ ಜಂಪ್‌, ಲಾಂಗ್‌ ಜಂಪ್‌, ದೈಹಿಕ ಸಾಮರ್ಥ್ಯ, ದೈಹಿಕ ಅರ್ಹತೆ, ಲಿಖೀತ ಪರೀಕ್ಷೆ ಎದುರಿಸುವ ಕುರಿತು ಪೂರ್ವ ತಯಾರಿ ಮಾಡಿಕೊಳ್ಳಬೇಕು. ಇದಕ್ಕಾಗಿ ಭಾರತೀಯ ಸೇನೆ ವೆಬ್‌ಸೈಟ್‌ನಲ್ಲಿ ಅಗತ್ಯ ಮಾಹಿತಿ ನೀಡಲಾಗಿದೆ. ಇಂಗ್ಲಿಷ್‌ ಹಾಗೂ ಹಿಂದಿ ಭಾಷೆಗಳನ್ನು ಉತ್ತಮ ಪರಿಣಿತಿಯನ್ನು ಹೊಂದಬೇಕು. ಸೇನೆ ನೇಮಕಾತಿಗೆ ಯಾವುದೇ ವ್ಯಕ್ತಿಗೆ ಲಂಚ ನೀಡುವ ಅಗತ್ಯವಿಲ್ಲ. ಈ ಕುರಿತು ಅಭ್ಯರ್ಥಿಗಳಲ್ಲಿ ಜಾಗೃತರಾಗಬೇಕು ಎಂದು ಹೇಳಿದರು.

ಮಂಗಳೂರು ಭೂ ಸೇನಾ ನೇಮಕಾತಿ ಕೇಂದ್ರದ ನಿರ್ದೇಶಕ ಕರ್ನಲ್ ಎಂ.ಎ. ರಾಜಮನ್ನಾರ್‌, ಭೂ ಸೇನೆ ಅಧಿಕಾರಿಗಳಾದ ಪಿ. ರಂಗವಾಲ್, ರೋಹಿತ ಠಾಕೂರ, ರಿತೇಶ ಸಿಂಗ್‌, ಸಮೀತ ನವಾನಿ, ರಾಣೆ, ಹಾಗೂ ಸೈನಿಕ ಕಲ್ಯಾಣ ಹಾಗೂ ಪುನರ್ವಸತಿ ಧಾರವಾಡ ಕೇಂದ್ರದ ಉಪನಿರ್ದೇಶಕ ನಿವೃತ್ತ ವಿಂಗ್‌ ಕಮಾಂಡರ್‌ ಈಶ್ವರ ಕಡೊಳ್ಳಿ ಇದ್ದರು.

ಟಾಪ್ ನ್ಯೂಸ್

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

3-gadaga

Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

CID

CID ನೂತನ ಡಿಐಜಿಪಿ ಆಗಿ ಶಾಂತನು ಸಿನ್ಹಾ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.