ದಲಿತರ ಮೇಲೆ ದೌರ್ಜನ್ಯ ಎಸಗಿದವರ ಬಂಧನಕ್ಕೆ ಆಗ್ರಹ


Team Udayavani, Jun 29, 2019, 1:18 PM IST

gadaga-tdy-4..

ಗದಗ: ಅಬ್ಬಿಗೇರಿ ಗ್ರಾಮದಲ್ಲಿ ದಲಿತರ ಮೇಲೆ ದೌರ್ಜನ್ಯ ನಡೆಸಿದ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ದಲಿತ ಬಹುಜನ ಚಳವಳಿ ಕರ್ನಾಟಕ ಸಂಘಟನೆಯಿಂದ ಗಾಂಧಿ ವೃತ್ತದಲ್ಲಿ ಧರಣಿ ನಡೆಸಲಾಯಿತು.

ಗದಗ: ಸ್ವಚ್ಛ ಭಾರತ ಯೋಜನೆಯಡಿ ಮನೆ ಮುಂದೆ ಶೌಚಾಲಯ ನಿರ್ಮಾಣಕ್ಕೆ ಅಡ್ಡಿಪಡಿಸಿದ್ದಲ್ಲದೇ, ಜಾತಿ ನಿಂದನೆ ಮಾಡಿ ದೌರ್ಜನ್ಯ ಎಸಗಿರುವ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ದಲಿತ ಬಹುಜನ ಚಳವಳಿ ಕರ್ನಾಟಕ ಸಂಘಟನೆ ನೇತೃತ್ವದಲ್ಲಿ ನಗರದ ಮಹಾತ್ಮಗಾಂಧಿ ವೃತ್ತದಲ್ಲಿ ಶುಕ್ರವಾರ ಧರಣಿ ನಡೆಸಲಾಯಿತು.

ಈ ಕುರಿತು ಗದಗ ತಹಶೀಲ್ದಾರ್‌ ಶ್ರೀನಿವಾಸ ಮೂರ್ತಿ ಕುಲಕರ್ಣಿ ಅವರಿಗೆ ಮನವಿ ಸಲ್ಲಿಸಿ, ರೋಣ ತಾಲೂಕು ಅಬ್ಬಿಗೇರಿ ಗ್ರಾಮದಲ್ಲಿ ಮಂಜುನಾಥ ಚಿ. ಹಾದಿಮನಿ ಹಾಗೂ ಶಿವಾನಂದ ಹಾದಿಮನಿ ಅವರು ಕುಟುಂಬ ಸ್ವಚ್ಛ ಭಾರತ ಅಭಿಯಾನದ ಅಡಿಯಲ್ಲಿ ಶೌಚಾಲಯ ಕಟ್ಟುತ್ತಿದ್ದು, ಈ ಕುರಿತು 11-06-2019ರಂದು ಶಮಶಾದಬೇಗಂ ದಾವಲಸಾಬ ತಹಶೀಲ್ದಾರ, ದಾವಲಸಾಬ ಕಾಶೀಂಸಾಬ ತಹಶೀಲ್ದಾರ, ಮಮತಾ ಬೇಗಂ ಮೋದಿನಸಾಬ ಹುಡೇದ, ದಾವಲ ಸಾಬ ಮೋದಿನಸಾಬ ಹುಡೇದ, ಮೋಲಾಸಾಬ ಇಮಾಮಸಾಬ ತಹಶೀಲ್ದಾರ, ಶಿವನಗೌಡ ಮೆಣಸಗಿ(ಪಿಡಿಒ) ಎಲ್ಲರೂ ಸೇರಿ ದಲಿತ ಕುಟುಂಬದ ಮೇಲೆ ದೌರ್ಜನ್ಯ ಎಸಗಿ, ಹಲ್ಲೆ ಮಾಡಿದ್ದಾರೆ.

ಘಟನೆ ಬಗ್ಗೆ ಎಫ್‌ಐಆರ್‌ ಮಾಡಿರಿ ಎಂದು ನರೇಗಲ್ ಪೊಲೀಸ್‌ ಠಾಣೆಗೆ ಹೋಗಿದ್ದಾಗ ಪೊಲೀಸರು ದೂರನ್ನು ತಿರಸ್ಕರಿಸಿದ್ದಾರೆ. ಪಿಡಿಒ ಸಹಾಯದಿಂದ ಸವರ್ಣಿಯರಿಂದ ಸುಳ್ಳು ದೂರು ದಾಖಲಿಸಿಕೊಂಡಿದ್ದಾರೆ. ನಂತರ ದಲಿತರಿಂದ ದೂರನ್ನು ಸ್ವೀಕರಿಸಿದ್ದಾರೆ. ಆದರೆ ಈವರೆಗೆ ಯಾವುದೇ ಒಬ್ಬ ಆರೋಪಿಯನ್ನೂ ನರೆಗಲ್ಲ ಪೊಲೀಸರು ಬಂಧಿಸಿಲ್ಲ. ದಲಿತ ಕುಟುಂಬಕ್ಕೆ ರಕ್ಷಣೆ ಒದಗಿಸಿಲ್ಲ. ಹೀಗಾಗಿ ಪೊಲೀಸರ ಕ್ರಮ ಸಂಶಯಕ್ಕೆ ಕಾರಣವಾಗಿದೆ ಎಂದು ತಿಳಿಸಿದರು.

ದಲಿತರ ಮೇಲೆ ದೌರ್ಜನ್ಯ ನಡೆಸಿದ್ದಲ್ಲದೇ, ಪ್ರಕರಣವನ್ನು ಮುಚ್ಚಿಹಾಕುವ ಪ್ರಯತ್ನ ನಡೆಸಿದ ಆರೋಪದ ಮೇಲೆ ನರೇಗಲ್ಲ ಪಿಎಸ್‌ಐ ಹಾಗೂ ಹವಾಲ್ದಾರ, ಅಬ್ಬಿಗೇರಿ ಗ್ರಾಮದ ಪಿ.ಡಿ.ಒ. ಅವರನ್ನು ಅಮಾನತು ಮಾಡಬೇಕು. ಪ್ರಕರಣದ ಎಲ್ಲ ಆರೋಪಿಗಳನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು.

ದಲಿತ ಮುಖಂಡರಾದ ಎಲ್. ನಾರಾಯಣಸ್ವಾಮಿ, ನಾಗಮ್ಮ ಎಂ. ಹಾಲಿನವರ, ಮಾರುತಿ ಅಂಗಡಿ, ಮಾಬುಬಿ, ಮಲ್ಲಮ್ಮ, ನೀಲಮ್ಮ, ಎ.ಸಿ. ಹಾದಿಮನಿ, ವಿ.ಎ. ಹಾದಿಮನಿ, ಮೀನಾಕ್ಷಿ, ಪಿ.ಎಸ್‌. ಹಾದಿಮನಿ, ಪುಷ್ಪಾ ಹಾದಿಮನಿ, ಶಾಂತಮ್ಮ ಚಳಗೇರಿ, ಶಶಿಕಲಾ ಶಿ. ಹಾದಿಮನಿ, ಚಂದ್ರಶೇಖರ ಚ. ಚಳಗೇರಿ, ಗಿರಜವ್ವ, ಕಾಳವ್ವ, ಜುಬೇದಾ, ಪಾರವ್ವ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

vijayaendra

ಹಿಂದೂ ಕಾರ್ಯಕರ್ತರ ಪರ ಕಾನೂನು ಪ್ರಕೋಷ್ಠ ಹೋರಾಟ: ಬಿ.ವೈ.ವಿಜಯೇಂದ್ರ

Citizen-annamali

ಇಂದಿರಾ ಗಾಂಧಿ ಸಂವಿಧಾನ ತಿದ್ದುಪಡಿ ಮಾಡಿದ್ದರಿಂದ ದೇಶಕ್ಕೆ ಭಾರೀ ಹಿನ್ನಡೆ: ಕೆ.ಅಣ್ಣಾಮಲೈ

Tulu-Nataka-KM

ಕೆಮ್ತೂರು ತುಳು ನಾಟಕ ಸ್ಪರ್ಧೆ: “ಈದಿ’ ಪ್ರಥಮ, “ದಿ ಫೈಯರ್‌’ ದ್ವಿತೀಯ

DH-Heggade

Dharmasthala: ಜನಜಾಗೃತಿ ವೇದಿಕೆ ನೂರಾರು ಕವಲಿರುವ ವೃಕ್ಷ: ಡಾ.ಹೇಮಾವತಿ ಹೆಗ್ಗಡೆ

1-kamb

ತುಳುವಿಗೆ ರಾಜ್ಯಭಾಷೆ ಗೌರವ ಪರಿಗಣನೆ; ನರಿಂಗಾನ ಕಂಬಳೋತ್ಸವದಲ್ಲಿ ಸಿಎಂ ಭರವಸೆ

1-a-mahe-bg

ದೇಶಾಭಿವೃದ್ಧಿಗೆ ಪ್ರತಿಯೊಬ್ಬರ ಕೊಡುಗೆ ಅಗತ್ಯ : ನ್ಯಾ| ವಿಶ್ವನಾಥ ಶೆಟ್ಟಿ ಕರೆ

siddanna-2

ಅಣ್ಣಾಮಲೈರಿಂದ ಬೇರೇನು ನಿರೀಕ್ಷಿಸಬಹುದು: ಸಿಎಂ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag; Shirahatti Constituency MLA Chandru Lamani car driver ends his life

Gadag; ಶಿರಹಟ್ಟಿ ಕ್ಷೇತ್ರದ ಶಾಸಕ ಚಂದ್ರು ಲಮಾಣಿ ಕಾರು ಚಾಲಕ ಆತ್ಮಹತ್ಯೆ

Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ

Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ

1-lokk

Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

vijayaendra

ಹಿಂದೂ ಕಾರ್ಯಕರ್ತರ ಪರ ಕಾನೂನು ಪ್ರಕೋಷ್ಠ ಹೋರಾಟ: ಬಿ.ವೈ.ವಿಜಯೇಂದ್ರ

Citizen-annamali

ಇಂದಿರಾ ಗಾಂಧಿ ಸಂವಿಧಾನ ತಿದ್ದುಪಡಿ ಮಾಡಿದ್ದರಿಂದ ದೇಶಕ್ಕೆ ಭಾರೀ ಹಿನ್ನಡೆ: ಕೆ.ಅಣ್ಣಾಮಲೈ

Tulu-Nataka-KM

ಕೆಮ್ತೂರು ತುಳು ನಾಟಕ ಸ್ಪರ್ಧೆ: “ಈದಿ’ ಪ್ರಥಮ, “ದಿ ಫೈಯರ್‌’ ದ್ವಿತೀಯ

DH-Heggade

Dharmasthala: ಜನಜಾಗೃತಿ ವೇದಿಕೆ ನೂರಾರು ಕವಲಿರುವ ವೃಕ್ಷ: ಡಾ.ಹೇಮಾವತಿ ಹೆಗ್ಗಡೆ

1-kamb

ತುಳುವಿಗೆ ರಾಜ್ಯಭಾಷೆ ಗೌರವ ಪರಿಗಣನೆ; ನರಿಂಗಾನ ಕಂಬಳೋತ್ಸವದಲ್ಲಿ ಸಿಎಂ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.