ಸುಸಂಸ್ಕೃತ ಸಮಾಜ ನಿರ್ಮಾಣಕ್ಕೆ ಆಧ್ಯಾತ್ಮದ ಅರಿವು ಅಗತ್ಯ

ಅಮೃತ ವಾಹಿನಿ ಶತಸಂಭ್ರಮ ಸಮಾರಂಭ

Team Udayavani, May 24, 2022, 1:05 PM IST

13

ಗದಗ: ಸುಸಂಸ್ಕೃತ ಸಮಾಜ ನಿರ್ಮಾಣಕ್ಕೆ ಆಧ್ಯಾತ್ಮದ ಅರಿವು ಮತ್ತು ಸಂಸ್ಕಾರ ಬೇಕು. ಮನುಷ್ಯ ಜೀವನದ ಶ್ರೇಯಸ್ಸಿಗೆ ಆಧ್ಯಾತ್ಮದ ಅನುಸಂಧಾನ ಅಡಿಪಾಯವಾಗಿದೆ ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ಜಗದ್ಗುರು ಡಾ| ಪ್ರಸನ್ನ ರೇಣುಕ ವೀರಸೋಮೇಶ್ವರ ಶಿವಾಚಾರ್ಯರು ಹೇಳಿದರು

ನಗರದ ಜಗದ್ಗುರು ಪಂಚಾಚಾರ್ಯ ಮಾಂಗಲ್ಯ ಮಂದಿರದಲ್ಲಿ ಜರುಗಿದ ಅಮೃತ ವಾಹಿನಿ ಶತಸಂಭ್ರಮ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದರು.

ಮನುಷ್ಯ ಜೀವನದಲ್ಲಿ ಚತುರ್ವಿಧಿ ಪುರುಷಾರ್ಥಗಳಲ್ಲಿ ಒಂದನ್ನಾದರೂ ಸಂಪಾದಿಸದೇ ಇದ್ದರೆ ಜೀವನ ವ್ಯರ್ಥ. ಭೌತಿಕ ಬದುಕು ಸದೃಢಗೊಳ್ಳಲು ಆಧ್ಯಾತ್ಮದ ಕೀಲು ಬೇಕೇ ಬೇಕು. ನಾಗರಿಕತೆಯ ನಾಗಾಲೋಟದಲ್ಲಿ ಮನುಷ್ಯ ಹಿಂದಿನವರಿಗಿಂತ ಹೆಚ್ಚು ಬೆಳೆದಿರುವುದು ಸತ್ಯ. ಆದರೆ, ಬುದ್ಧಿ ವಿಕಾಸಗೊಂಡಷ್ಟು ಭಾವನೆ ಬೆಳೆಯದಿರುವುದೇ ಇಂದಿನ ಆತಂಕಗಳಿಗೆ ಕಾರಣವೆಂದರೆ ತಪ್ಪಾಗದು. ಹುಟ್ಟು ಎಷ್ಟು ಸಹಜವೋ ಸಾವು ಅಷ್ಟೇ ನಿಶ್ಚಿತ. ಹುಟ್ಟು-ಸಾವುಗಳ ಮಧ್ಯೆಯಿರುವ ಬದುಕು ಶ್ರೀಮಂತಗೊಳ್ಳಬೇಕಾಗಿದೆ ಎಂದರು.

ಜ| ರೇಣುಕಾಚಾರ್ಯರು ಭಾವ ಶ್ರೀಮಂತಿಕೆಗಿಂತ ಹೃದಯ ಶ್ರೀಮಂತಿಕೆ ಮುಖ್ಯವೆಂದು ಬೋಧಿಸಿದ್ದಾರೆ. ಮನಸ್ಸಿದ್ದರೆ ಮಾರ್ಗ ಇದ್ದೇ ಇದೆ ಎಂಬ ಗಾದೆ ಮಾತಿನಂತೆ ಮಾನವೀಯ ಸಂಬಂಧಗಳನ್ನು ಬೆಸೆಯುವ ಕೆಲಸ ಮಾಡಬೇಕಾಗಿದೆ. ಯಾವ ಸಂಪತ್ತಿಗಾಗಿ ಜೀವ ಜಗತ್ತು ಬದುಕುತ್ತಿದೆಯೋ ಆ ಸಂಪತ್ತು ಪ್ರಾಪ್ತಿಗಾಗಿ ಶ್ರಮಿಸಬೇಕಿದೆ. ಅಮೃತ ವಾಹಿನಿ ಧರ್ಮ ಸಮಾರಂಭ ಇಂದು ಶತಸಂಭ್ರಮ ಸಮಾರಂಭ ಹಮ್ಮಿಕೊಂಡಿರುವುದು ಟ್ರಸ್ಟಿನ ಕ್ರಿಯಾಶೀಲ ಬದುಕಿಗೆ ಸಾಕ್ಷಿಯಾಗಿದೆ ಎಂದು ಹೇಳಿದರು.

ಸೂಡಿ ಜುಕ್ತಿ ಹಿರೇಮಠದ ಡಾ| ಕೊಟ್ಟೂರು ಬಸವೇಶ್ವರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಯೋಗ್ಯ ಗುರಿ ಮತ್ತು ಗುರಿ ಸಾಧನೆಗೆ ಗುರುವಿನ ಕಾರುಣ್ಯ ಇದ್ದರೆ ಏನೆಲ್ಲವನ್ನು ಸಾಧಿಸಲು ಸಾಧ್ಯ. ಅಮೃತ ವಾಹಿನಿ ಸಮಾರಂಭದ ಮೂಲಕ ಜನ ಸಮುದಾಯದಲ್ಲಿ ಧಾರ್ಮಿಕ ಪ್ರಜ್ಞೆ-ಧರ್ಮದ ಆದರ್ಶ ಚಿಂತನೆಗಳನ್ನು ಬೆಳೆಸುತ್ತಿರುವುದು ಎಲ್ಲರ ಮೆಚ್ಚುಗೆ ಗಳಿಸಿಕೊಂಡಿದೆ ಎಂದರು.

ಮುಕ್ತಿಮಂದಿರದ ವಿಮಲ ರೇಣುಕ ಮುಕ್ತಿಮುನಿ ಶಿವಾಚಾರ್ಯರು, ನರೇಗಲ್‌ ಮಲ್ಲಿಕಾರ್ಜುನ ಶಿವಾಚಾರ್ಯರು, ಬನ್ನಿಕೊಪ್ಪದ ಡಾ| ಸುಜ್ಞಾನದೇವ ಶಿವಾಚಾರ್ಯರು, ಮಳಲಿ ಡಾ| ನಾಗಭೂಷಣ ಶಿವಾಚಾರ್ಯರು, ಕಳಸಾಪುರ ಫಕ್ಕೀರೇಶ್ವರ ಶಿವಾಚಾರ್ಯರು, ಅಟ್ನೂರಿನ ಅಭಿನವ ಪಂಚಾಕ್ಷರ ಶಿವಾಚಾರ್ಯರು, ರೇಣುಕ ಮಂದಿರದ ಚಂದ್ರಶೇಖರ ದೇವರು ಇದ್ದರು.

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿವೇಕಾನಂದ ಪಾಟೀಲ “ಅಮೃತ ವಾಹಿನಿ ಜ್ಞಾನ ಸಂಪದ’ ಗ್ರಂಥ ಬಿಡುಗಡೆ ಮಾಡಿ ಮಾತನಾಡಿದರು. ಚಂದ್ರು ಬಾಳಿಹಳ್ಳಿಮಠ ಮಾತನಾಡಿದರು. ಮಂಜುನಾಥ ಅಬ್ಬಿಗೇರಿ ಸಮಾರಂಭ ಉದ್ಘಾಟಿಸಿದರು.

ಅಬ್ದುಲ್‌ ಖಾದರ ನಡುಕಟ್ಟಿನ, ಸುನಂದಾ ಬಾಕಳೆ, ರಾಜಗುರು ಗುರುಸ್ವಾಮಿ ಕಲಕೇರಿ, ಮಂಜುನಾಥ ಬೇಲೇರಿ, ಸೋಮಣ್ಣ ಮಲ್ಲಾಡದ ಭಾಗವಹಿಸಿದ್ದರು. ಗಾನಭೂಷಣ ವೀರೇಶ ಕಿತ್ತೂರ ಅವರಿಂದ ಭಕ್ತಿಗೀತೆ ಜರುಗಿತು. ಟ್ರಸ್ಟಿನ ಅಧ್ಯಕ್ಷ ಮಲ್ಲಿಕಾರ್ಜುನ ಶಿಗ್ಲಿ ಸ್ವಾಗತಿಸಿದರು. ಸವಣೂರಿನ ಡಾ| ಗುರುಪಾದಯ್ಯ ಸಾಲಿಮಠ ನಿರೂಪಿಸಿದರು. ಕಾರ್ಯದರ್ಶಿ ಶಿವಾನಂದ ಹಿರೇಮಠ ವಂದಿಸಿದರು.

ಟಾಪ್ ನ್ಯೂಸ್

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime (2)

Gajendragad: ಮನೆಯಲ್ಲೇ ಮುಖ್ಯ ಶಿಕ್ಷಕಿಯ ಹ*ತ್ಯೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadag-CM-Dcm

Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ

8

CM Siddaramaiah: ಗ್ಯಾರಂಟಿಗಳನ್ನು‌ ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮ‌‌ದು

7

Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.