ದೇಶಕ್ಕೆ ಬಾಬೂಜಿ ಕೊಡುಗೆ ಅಪಾರ: ಕೆಂಗೇರಿ
ಆಹಾರದ ಕೊರತೆ ಉಂಟಾದ ಸಮಯದಲ್ಲಿ ಜಾರಿಗೊಳಿಸಿದ ಯೋಜನೆಗಳು ಹಸಿರು ಕ್ರಾಂತಿಗೆ ಕಾರಣವಾದವು
Team Udayavani, Apr 6, 2022, 5:45 PM IST
ಗಜೇಂದ್ರಗಡ: ಸಮಾಜದಲ್ಲಿ ತುಳಿತಕ್ಕೊಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ಬಾಬು ಜಗಜೀವನ ರಾಂ ಅವರು, ದೇಶದ ಉಪ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಜಾರಿಗೆ ತಂದ ಹಲವಾರು ಕಾರ್ಯಕ್ರಮಗಳು ಇಂದಿಗೂ ಜನಪರವಾಗಿವೆ ಎಂದು ತಹಶೀಲ್ದಾರ್ ರಜನಿಕಾಂತ್ ಕೆಂಗೇರಿ ಹೇಳಿದರು.
ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಹಸಿರು ಕ್ರಾಂತಿಯ ಹರಿಕಾರ ಡಾ|ಬಾಬು ಜಗಜೀವನರಾಂ ಅವರ 115ನೇ ಜನ್ಮದಿನೋತ್ಸವದಲ್ಲಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು.
ಡಾ|ಬಾಬು ಜಗಜೀವನರಾಂ ಅವರು ಕೇವಲ ಒಂದು ಜಾತಿಯ ಉನ್ನತಿಗೆ ಸೀಮಿತರಾಗದೆ ಬಡವರ, ರೈತರ, ಕಾರ್ಮಿಕರ ಅಭಿವೃದ್ಧಿಗಾಗಿ ದುಡಿದ ಮಹಾನ್ ವ್ಯಕ್ತಿಯಾಗಿದ್ದರು. ಜೊತೆಗೆ ದೇಶದಲ್ಲಿ ಆಹಾರದ ಕೊರತೆ ಉಂಟಾದ ಸಮಯದಲ್ಲಿ ಜಾರಿಗೊಳಿಸಿದ ಯೋಜನೆಗಳು ಹಸಿರು ಕ್ರಾಂತಿಗೆ ಕಾರಣವಾದವು. ಅವರ ಸಾಮಾಜಿಕ ಕಳಕಳಿ ಹಾಗೂ ರಾಜಕೀಯ ವಿಚಾರಧಾರೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದರು.
ದಲಿತ ಸಂಘಟನೆ ಮುಖಂಡ ಶರಣು ಪೂಜಾರ ಮಾತನಾಡಿ, ಬಸವಣ್ಣ, ಬುದ್ಧರ ಅನುಯಾಯಿಗಳಾಗಿದ್ದ ಬಾಬೂಜಿ ಸತತ 45 ವರ್ಷಗಳ ಕಾಲ ರಾಜಕೀಯದಲ್ಲಿ
ಹಲವು ಇಲಾಖೆಗಳ ಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ದೇಶದ ಬೇಸಾಯದಲ್ಲಿ ವೈಜ್ಞಾನಿಕ ಬದಲಾವಣೆಗೆ ಆದ್ಯತೆ ನೀಡಿದ್ದರು. ಬಾಬೂಜಿ ಅವರು ಕೇವಲ ರಾಜಕಾರಣಿಗಳಷ್ಟೇ ಅಲ್ಲ. ವಿದ್ಯಾರ್ಥಿ ದಿಸೆಯಿಂದಲೂ ತಮ್ಮನ್ನು ಎಲ್ಲ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದರು. ರಾಷ್ಟ್ರಕ್ಕೆ ಬಾಬೂಜಿ ಕೊಡುಗೆ ಅಪಾರ ಎಂದರು.
ಡಿ.ಜಿ.ಕಟ್ಟಿಮನಿ, ಉಮೇಶ ರಾಠೊಡ, ದುರುಗಪ್ಪ ಸಂದಿಮನಿ, ಕನಕಪ್ಪ ಅರಳಿಗಿಡದ, ರವಿ ಮಾದರ, ಶಿವು ಚವ್ಹಾಣ, ಮಾರುತಿ ಹಾದಿಮನಿ, ಅಲ್ಲಾಭಕ್ಷಿ ಮುಚ್ಚಾಲಿ, ನಿಂಗಪ್ಪ ಗುಡಿಮನಿ, ಭರತ್ ಹಾದಿಮನಿ, ವೀರಣ್ಣ ಅಡಗತ್ತಿ, ಎ.ಎಫ್. ಪಾಟೀಲ, ಎಂ.ಆರ್. ಷಣ್ಮಖ, ಉಮೇಶ ಅರಳಿಗಿಡದ, ಎಸ್.ಕೆ.ಗೌಡರ, ಗಣೇಶ ಕೊಡಕೇರಿ, ಶಾಹೀನ ಗುರಿಕಾರ, ಸಾವಿತ್ರಿ ಕುಂದಗೋಳ, ರಾಜೇಶ್ವರಿ ಶೆಟ್ಟಿ ಇನ್ನಿತರರಿದ್ದರು.
ಎಸ್.ಎಂ. ಭೂಮರಡ್ಡಿ: ಪಟ್ಟಣದ ಎಸ್.ಎಣಂ. ಭೂಮರಡ್ಡಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಡಾ|ಬಾಬು ಜಗಜೀವನ್ ರಾಂ ಅವರ 115ನೇ ಜಯಂತಿ ಆಚರಿಸಲಾಯಿತು. ಪ್ರಾಚಾರ್ಯ ಜೆ.ಜಿ. ಕುದರಿ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕರಾದ ಜಿ.ಬಿ. ಗುಡಿಮನಿ, ಅರವಿಂದ ವಡ್ಡರ, ಎಸ್.ಎಸ್. ವಾಲಿಕಾರ, ಜ್ಯೋತಿ ಗದಗ, ವೈ.ಆರ್. ಸಕ್ರೋಜಿ, ಕವಿತಾ ಕವಲೂರ, ಎಂ.ಎಸ್. ನಾಗರಾಳ, ಮಂಜುಳಾ ಬುವಾನವರ, ಸುನಿಲ್ ಬಂಡಿವಡ್ಡರ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gajendragad: ಮನೆಯಲ್ಲೇ ಮುಖ್ಯ ಶಿಕ್ಷಕಿಯ ಹ*ತ್ಯೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.