ಬಗರ್‌ಹುಕುಂ ಸಾಗುವಳಿದಾರರ ಧರಣಿ ಅಂತ್ಯ

ರೈತರು ಯಾವುದೇ ಹಂತದಲ್ಲಿ ಆತಂಕಗೊಳ್ಳುವ ಅಗತ್ಯವಿಲ್ಲ

Team Udayavani, Sep 17, 2022, 6:32 PM IST

ಬಗರ್‌ಹುಕುಂ ಸಾಗುವಳಿದಾರರ ಧರಣಿ ಅಂತ್ಯ

ಶಿರಹಟ್ಟಿ: ಬಗರ್‌ಹುಕುಂ ಸಾಗುವಳಿದಾರರು ಕಳೆದ 5 ದಿನಗಳಿಂದ ನಡೆಸುತ್ತಿದ್ದ ಅಹೋರಾತ್ರಿ ಧರಣಿ ಸತ್ಯಾಗ್ರಹ ಜಿಲ್ಲಾಡಳಿತದ ಸಕಾರಾತ್ಮಕ ಭರವಸೆ ಹಿನ್ನೆಲೆಯಲ್ಲಿ ಅಂತ್ಯಗೊಂಡಿದೆ. ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಪ್ರಶಾಂತ ವರಗಪ್ಪನವರ, ತಹಶೀಲ್ದಾರ್‌ ಕಲಗೌಡ ಪಾಟೀಲ, ಸಿಪಿಐ ವಿಕಾಸ ಲಮಾಣಿ ಅವರು ಧರಣಿನಿರತರಿಗೆ ಎಳನೀರು ಕುಡಿಸುವ ಮೂಲಕ ಸತ್ಯಾಗ್ರಹಕ್ಕೆ ತೆರೆ ಎಳೆದರು.

ಈ ವೇಳೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಸತ್ಯಾಗ್ರಹ ಸ್ಥಳಕ್ಕೆ ಆಗಮಿಸಿ ಧರಣಿ ನಿರತರನ್ನು ಉದ್ದೇಶಿಸಿ ಮಾತನಾಡಿ, ಈಗಾಗಲೇ ತಿರಸ್ಕೃತಗೊಂಡಿರುವ 802 ಅರ್ಜಿಗಳನ್ನು ನ. 15ರ ನಂತರ ಪುನರ್‌ ಪರಶೀಲನೆ ಮಾಡಿ ಮತ್ತೆ ಸೂಕ್ತ ದಾಖಲೆ ಪಡೆದು ಯಾರಿಗೆ ಭೂಮಿ ಇಲ್ಲವೋ ಅವರಿಗೆ ಮೊದಲ ಅವಕಾಶ ಕಲ್ಪಿಸಿಕೊಡುವ ಕುರಿತು ಮೇಲಧಿಕಾರಿಗಳು ಭರವಸೆ ನೀಡಿದ್ದಾರೆ ಎಂದು ಹೇಳಿದರು.

ಈಗಾಗಲೇ ಸಾಗುವಳಿ ಮಾಡುತ್ತಿರುವ ರೈತರಿಗೆ ಯಾವುದೇ ತೊಂದರೆ ಆಗದಂತೆ ಅರಣ್ಯ ಇಲಾಖೆ ಅಧಿ ಕಾರಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿದ್ದು, ಯಥಾಸ್ಥಿತಿ ಕಾಯ್ದುಕೊಂಡು ಹೋಗುವಂತೆ ಸೂಚನೆ ನೀಡಲಾಗಿದೆ. ರೈತರು ಯಾವುದೇ ಹಂತದಲ್ಲಿ ಆತಂಕಗೊಳ್ಳುವ ಅಗತ್ಯವಿಲ್ಲ ಎಂದು ತಿಳಿಸಿದರು.

ಸಂಘಟನೆಯ ಮುಖಂಡ ರವಿಕಾಂತ ಅಂಗಡಿ ಮಾತನಾಡಿ, ನಮ್ಮ ಧರಣಿ ಸತ್ಯಾಗ್ರಹ ಬಹುತೇಕ ಯಶಸ್ವಿಯಾಗಿದ್ದು, ಬಹುತೇಕ ಬೇಡಿಕೆಗಳಿಗೆ ಜಿಲ್ಲಾಧಿಕಾರಿಗಳು ಸ್ಪಂದಿಸಿದ್ದಾರೆ. ಕಂದಾಯ, ಗೋಮಾಳ, ಹುಲ್ಲುಗಾವಲು ಪ್ರದೇಶಗಳಲ್ಲಿ ಭೂಮಿ ಸಾಗುವಳಿ ಮಾಡುತ್ತಿರುವ ರೈತರು ಯಾವುದೇ ಆತಂಕ ಪಡಬಾರದು ಎಂದು ಹೇಳಿದರು. ನ.15ರ ನಂತರ ತಿರಸ್ಕೃತಗೊಂಡಿರುವ 802 ಅರ್ಜಿಗಳ ಪುನರ್‌ ಪರಿಶೀಲನೆ ನಡೆಸಿ, ಕಾನೂನಿನಡಿ ಹಕ್ಕುಪತ್ರ ವಿತರಿಸುವ ಕಾರ್ಯ ನಡೆಯಲಿದೆ.

ಕೆಲೂರಿನಲ್ಲಿ ಹುತಾತ್ಮರಾದ ರೈತ ಮಹಿಳೆಗೂ ಸರ್ಕಾರದಿಂದ ಪರಿಹಾರ ಕೊಡಿಸುವ ಭರವಸೆ ನೀಡಿದರು. ದೇವಪ್ಪ ಲಮಾಣಿ, ಶಿವು ಲಮಾಣಿ, ಈರಣ್ಣ ಲಮಾಣಿ, ಶ್ರೀನಿವಾಸ ಬಾರಬಾರ, ಮಂಜುನಾಥ ಅರೆಪಲ್ಲೆ, ಎನ್‌.ಟಿ.ಪೂಜಾರ, ಪುಂಡಲೀಕ ಲಮಾಣಿ, ಶಿವು ಲಮಾಣಿ, ಹನುಮಂತ ನಾದಿಗಟ್ಟಿ, ರೂಪಾ ನಾಯಕ, ಧನಸಿಂಗಪ್ಪ ಲಮಾಣಿ, ಚಂದ್ರಕಾಂತ ಚವ್ಹಾಣ, ರಮೇಶ ಪವಾರ, ನಾಮದೇವ ಮಾಂಡ್ರೆ, ನೀಲು ರಾಠೊಡ, ಸಿಪಿಐ ವಿಕಾಸ ಲಮಾಣಿ ಮತ್ತು ಪಿಎಸ್‌ಐ ಪ್ರವೀಣ ಗಂಗೋಳ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು.

ಟಾಪ್ ನ್ಯೂಸ್

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

3-gadaga

Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.