Basavaraj Bommai ನೀತಿ ಆಯೋಗದ ಸಭೆಗೆ ಗೈರಾಗಿ ರಾಜ್ಯಕ್ಕೆ ಸಿಎಂ ಅನ್ಯಾಯ
Team Udayavani, Jul 28, 2024, 10:54 PM IST
ಗದಗ: ಸಿಎಂ ಸಿದ್ದರಾಮಯ್ಯ ರಾಜ್ಯಕ್ಕೆ ಬೇಕಾದ ಯೋಜನೆಗಳ ಕುರಿತು ಚರ್ಚಿಸುವ ನೀತಿ ಆಯೋಗದ ಸಭೆಗೆ ಗೈರು ಹಾಜರಾಗುವ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ರೈಲ್ವೆ ಸೇರಿದಂತೆ ಪ್ರಮುಖ ಯೋಜನೆಗಳಿಗೆ ರಾಜ್ಯ ಸರ್ಕಾರ ತನ್ನ ಪಾಲಿನ ಹಣ ಕೊಡದೇ ಕೇಂದ್ರ ಸರ್ಕಾರದ ವಿರುದ್ಧ ಅಸಹಕಾರ ತೋರುತ್ತಿದ್ದಾರೆ. ಕಾಂಗ್ರೆಸ್ ಪಕ್ಷದವರು ಅಪಪ್ರಚಾರದಲ್ಲಿ ನಿಸ್ಸೀಮರು.
ಕೇಂದ್ರದ ಮೇಲೆ ನಿರಂತರವಾಗಿ ಆಪಾದನೆ ಮಾಡುವುದು ಅವರಿಗೆ ಚಟವಾಗಿದೆ. ಕಾಂಗ್ರೆಸ್ ಪಕ್ಷದವರು ಅಪಪ್ರಚಾರ ಮಾಡುವ ಮೂಲಕ ರಾಜ್ಯದ ಜನರ ದಾರಿ ತಪ್ಪಿಸುತ್ತಿದ್ದಾರೆಂದು ವಾಗ್ಧಾಳಿ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.