ಬಸವೇಶ್ವರ ಜಯಂತಿ ಸರಳ ಆಚರಣೆ
Team Udayavani, Apr 27, 2020, 5:32 PM IST
ಗದಗ: ಕೋವಿಡ್ 19 ತಡೆಯುವ ನಿಟ್ಟಿನಲ್ಲಿ ಲಾಕ್‌ಡೌನ್ ಜಾರಿಗೊಳಿಸಿದ ಹಿನ್ನೆಲೆಯಲ್ಲಿ ಜಗಜ್ಯೋತಿ ಬಸವೇಶ್ವರ ಜಯಂತಿಯನ್ನು ಅವಳಿ ನಗರ ಸೇರಿದಂತೆ ಜಿಲ್ಲಾದ್ಯಂತ ಸರಳವಾಗಿ ಆಚರಿಸಲಾಯಿತು.
ಜಿಲ್ಲಾಡಳಿತ ಭವನದ ಮುಖ್ಯ ಸಭಾಂಗಣದಲ್ಲಿಜಗಜ್ಯೋತಿ ಬಸವೇಶ್ವರ ಜಯಂತಿ ನಿಮಿತ್ತ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಬಸವೇಶ್ವರರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಗೌರವ ಸಮರ್ಪಿಸಿದರು. ಅಪರ ಜಿಲ್ಲಾಧಿಕಾರಿ ಸತೀಶಕುಮಾರ ಎಂ., ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಹಿರೇಮಠ ಉಪಸ್ಥಿತರಿದ್ದರು.
ಸಂಸದರಿಂದ ಮಾಲಾರ್ಪಣೆ: ಬಸವ ಜಯಂತಿ ನಿಮಿತ್ತ ಇಲ್ಲಿನ ಹತ್ತಿಕಾಳಕೂಟದಲ್ಲಿರುವ ಬಸವೇಶ್ವರ ಪುತ್ಥಳಿಗೆ ಸಂಸದ ಶಿವಕುಮಾರ ಉದಾಸಿ, ಬಿಜೆಪಿ ಜಿಲ್ಲಾಧ್ಯಕ್ಷ ಮೊಹನ ಮಾಳಶೆಟ್ಟಿ ಹಾಗೂ ಮುಖಂಡ ಅನಿಲ್ ಮೆಣಸಿನಕಾಯಿ ಮಾಲಾರ್ಪಣೆ ಮಾಡಿ, ಗೌರವ ನಮನ ಸಲ್ಲಿಸಿದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಪತಿ ಉಡುಪಿ, ರಾಜು ಕುರಡಗಿ, ಕಾಂತಿಲಾಲ್ ಬನ್ಸಾಲಿ ಮತ್ತಿತರರು ಇದ್ದರು. ವಾಣಿಜ್ಯೋದ್ಯಮ ಸಂಸ್ಥೆಯಲ್ಲಿ ಬಸವ ಜಯಂತಿ ಆಚರಿಸಲಾಯಿತು. ಈ ವೇಳೆ ಸಂಸ್ಥೆಯ ಅಧ್ಯಕ್ಷ ಶರಣಬಸಪ್ಪ ಕೆ. ಕುರಡಗಿ ಅವರು ಮಾತನಾಡಿ, ಬಸವಣ್ಣನ ವಚನಗಳಂತೆ ದೇಶದ ಪ್ರತಿಯೊಬ್ಬರೂ ನಡೆದುಕೊಳ್ಳಬೇಕು. 12ನೇ ಶತಮಾನದಲ್ಲಿ ಸಮಾನತೆ ತತ್ವ ಸಾರಿದ ವಚನ ಸಂದೇಶಗಳನ್ನು ಪ್ರತಿಯೊಬ್ಬರೂ ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಶರಣರು ಕಂಡ ಕನಿಸಿನ ಸಮ ಸಮಾಜ ನಿರ್ಮಾಣ ಮಾಡಬೇಕು ಎಂದು ಅಭಿಪ್ರಾಯಪಟ್ಟರು. ಸಂಸ್ಥೆಯ ಉಪಾಧ್ಯಕ್ಷ ಆರ್.ಬಿ. ದಾನಪ್ಪಗೌಡ್ರ, ಅರವಿಂದ ಪಟೇಲ್, ಜಯದೇವ ಮೆಣಸಗಿ, ಮಾಜಿ ಅಧ್ಯಕ್ಷ ಎಸ್.ಪಿ. ಸಂಶಿಮಠ, ಸಂಸ್ಥೆಯ ಗೌರವ ಕಾರ್ಯದರ್ಶಿ ತಾತನಗೌಡ ಪಾಟೀಲ ಹಾಗೂ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag; ಶಿರಹಟ್ಟಿ ಕ್ಷೇತ್ರದ ಶಾಸಕ ಚಂದ್ರು ಲಮಾಣಿ ಕಾರು ಚಾಲಕ ಆತ್ಮಹತ್ಯೆ
Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ
Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
MUST WATCH
ಹೊಸ ಸೇರ್ಪಡೆ
Hubballi: ವರೂರಿನ ನವಗ್ರಹ ತೀರ್ಥಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕಕ್ಕೆ ವಿಧ್ಯುಕ್ತ ಚಾಲನೆ
Chikkaballapura: “ಈಶ’ದಲ್ಲಿ 54 ಅಡಿ ಎತ್ತರದ ತ್ರಿಶೂಲ ಲೋಕಾರ್ಪಣೆ
Chamarajpete: ಕೆಚ್ಚಲು ಕೊಯ್ದ ಕೇಸ್; 3 ಲಕ್ಷ ರೂ.ಮೌಲ್ಯದ 3 ಹಸು ಕೊಡಿಸಿದ ಸಚಿವ ಜಮೀರ್
Udupi: ಗೀತಾರ್ಥ ಚಿಂತನೆ-157: ಸೂಕ್ಷ್ಮ ಜಗತ್ತೂ, ಸ್ಥೂಲ ಜಗತ್ತೂ ಅನಂತ
Manjeshwar: ಟಿಪ್ಪರ್‌ನೊಳಗೆ ಯುವಕನ ನಿಗೂಢ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.