ಬಿಪಿಎಲ್ ಕುಟುಂಬಗಳಿಗೆ ಬಯೋಮೆಟ್ರಿಕ್‌ಗೆ ಆಕ್ರೋಶ
ಜಿಲ್ಲಾ ಸ್ಲಂ ನಿವಾಸಿಗಳ ಹಿತರಕ್ಷಣಾ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ
Team Udayavani, Aug 18, 2021, 3:52 PM IST
ಗದಗ: ಆಹಾರ ಇಲಾಖೆಯಿಂದ ಬಿಪಿಎಲ್ ಪಡಿತರ ಕುಟುಂಬಗಳಿಗೆ ಬಯೋಮೆಟ್ರಿಕ್ ಪದ್ಧತಿ ಮತ್ತು ವಿದ್ಯುತ್ ಖಾಸಗೀಕರಣ ಕಾಯ್ದೆ ವಿರೋಧಿಸಿ ಜಿಲ್ಲಾ ಸ್ಲಂ ನಿವಾಸಿಗಳ ಹಿತರಕ್ಷಣಾ ಸಮಿತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
ಈ ವೇಳೆ ಮಾತನಾಡಿದ ಮುಖಂಡರು, ಕೇಂದ್ರ ಸರಕಾರ ಕಾರ್ಪೋರೇಟ್ ಕಂಪನಿಗಳ ಕೈಗೊಂಬೆಯಂತೆ ವರ್ತಿಸುತ್ತಿದೆ. ದೇಶದ ಎಲ್ಲಾ ಸೇವಾವಲಯಗಳನ್ನು ಖಾಸಗಿಕರಣಗೊಳಿಸುವ ಮೂಲಕ ಬಂಡವಾಳಶಾಹಿಗಳಿಗೆ ದೇಶದ ಸೇವಾ ವಲಯಗಳನ್ನು ಮಾರಾಟ ಮಾಡಲಾಗುತ್ತಿದೆ. ಸರಕಾರದ ಈ ನಡೆಯಿಂದ ದೇಶದ ಬಡ ಜನರಿಗೆ ರೈತರು ಮತ್ತು ಕೂಲಿ ಕಾರ್ಮಿಕರಿಗೆ ಅನ್ಯಾಯ ಮಾಡಲಾಗುತ್ತಿದೆ ಎಂದು ತರಾಟೆಗೆ ತೆಗೆದುಕೊಂಡರು. ಇತ್ತೀಚೆಗೆ ರಾಜ್ಯ ಸರಕಾರ ಆಹಾರ ಇಲಾಖೆಯಿಂದ ಬಿಪಿಎಲ್ ಪಡಿತರ ಕುಟುಂಬಗಳು ತಮ್ಮ ಬೆರಳಚ್ಚು ಗುರುತು ಕಡ್ಡಾಯ ಗೊಳಿಸಿರುವುದರಿಂದ ಆಹಾರ ಧಾನ್ಯ ಪಡೆಯಲು ಹರಸಾಹಸ ಪಡುವಂತಾಗಿದೆ. ಬಳಿಕ ಜನರ ಆಕ್ರೋಶಕ್ಕೆ ಮಣಿದು ಬಯೋಮೆಟ್ರಿಕ್ ಪದ್ಧತಿಯನ್ನು ಸರಕಾರ ಹಿಂಪಡೆಯಿತು. ಮತ್ತೆ ರಾಜ್ಯದಲ್ಲಿ ಬಿಪಿಎಲ್ ಕುಟುಂಬಗಳು ತಮ್ಮ ಬೆರಳಚ್ಚು ಗುರುತುಗಳನ್ನು (ಬಯೋಮೆಟ್ರಿಕ್) ಮಾಡುವುದು ಕಡ್ಡಾಯವೆಂದು ಹೇಳುತ್ತಿದೆ. ಅನ್ಯ ಜಿಲ್ಲೆ ಮತ್ತು ರಾಜ್ಯಗಳಿಗೆ ಗುಳೆ ಹೋಗಿರುವ ಕಾರ್ಮಿಕರು ಪಡಿತರದಿಂದ ವಂಚಿತಗೊಳ್ಳಲಿವೆ. ರಾಜ್ಯ ಸರಕಾರ ಕೂಡಲೇ ಜನವಿರೋಧಿ ಬಯೋಮೆಟ್ರಿಕ್ ಪದ್ಧತಿ ಕೈಬಿಡಬೇಕು ಎಂದು ಮನವಿ ಮಾಡಿದರು.
ಇದನ್ನೂ ಓದಿ:ಸರಕಾರಿ ದೇವಸ್ಥಾನಗಳ ಆಸ್ತಿ ಸಮೀಕ್ಷೆ ನಡೆಸಿ : ಅಧಿಕಾರಿಗಳಿಗೆ ಸಚಿವೆ ಜೊಲ್ಲೆ ಸೂಚನೆ
ಕೇಂದ್ರ ಸರಕಾರ ವಿದ್ಯುತ್ ಕಾಯ್ದೆ 2020ಕ್ಕೆ ತಿದ್ದುಪಡಿ ತಂದಿದ್ದು, ಈ ಕಾಯ್ದೆಯ ಪ್ರಕಾರ ವಿದ್ಯುತ್ ಸೌಲಭ್ಯ ಬಂಡವಾಳ ಶಾಹಿಗಳ ಅಧೀನ ಕ್ಕೊಳಪಡಲಿದೆ. ಅವರು ನಿಗದಿಪಡಿಸುವ ದರವನ್ನು ಗ್ರಾಹಕರು ಒಪ್ಪಿಕೊಳ್ಳುವ ಅನಿವಾರ್ಯತೆ ಸೃಷ್ಟಿಯಾಗಲಿದೆ.
ರೈತರಿಗೆ ಹಾಗೂ ಬಡವರಿಗೆ ನೀಡುತ್ತಿರುವ ಭಾಗ್ಯಜೋತಿ ಸ್ಥಗಿತಗೊಳ್ಳಲಿದೆ. ವಿದ್ಯುತ್ ದರ ಏರಿಕೆಯಿಂದ ದೇಶದ ಜನ ತತ್ತರಿಸಲಿದ್ದು, ಈ ಉದ್ಯೋಗವನ್ನೇ ನಂಬಿರುವ ಲಕ್ಷಾಂತರ ನೌಕರರು ನಿರುದ್ಯೋಗಿಗಳಾಗುವ ಆತಂಕ ವ್ಯಕ್ತಪಡಿಸಿದರು. ಈಗಾಗಲೇ ಕೇಂದ್ರ ಸರಕಾರ ವಿಮಾನ, ರೇಲ್ವೆ ಸೇರಿದಂತೆ ಸಾರ್ವಜನಿಕ ವಲಯಗಳನ್ನು ಖಾಸಗಿಕರಣಗೊಳಿಸಿದ ಪರಿಣಾಮ ದೇಶದ ಜನರು ತತ್ತರಿಸಿ ಹೋಗಿದ್ದಾರೆ.
ಈಗಿರುವ ವಿದ್ಯುತ್ ಕಂಪನಿಗಳು ಅನುಭವಿಸುತ್ತಿರುವ ಲಕ್ಷಾಂತರ ಕೋಟಿ ರೂ. ನಷ್ಟ ಸರಿದುಗಿಸುವ ನೆಪದಲ್ಲಿ ಸರಕಾರ ವಿದ್ಯುತ್ ನಿಗಮ ಖಾಸಗಿಕರಣಕ್ಕೆ ಮುಂದಾಗಿರುವುದು ಸರಿಯಲ್ಲ ಎಂದು ಟೀಕಿಸಿದರು.
ಧರಣಿಯಲ್ಲಿ ಜಿಲ್ಲಾ ಸ್ಲಂ ಸಮಿತಿ ಅಧ್ಯಕ್ಷ ಇಮಿ¤ಯಾಜ ಮಾನ್ವಿ, ಉಪಾಧ್ಯಕ್ಷ ರವಿಕುಮಾರ ಬೆಳಮಕರ, ಮಹಿಳಾ ಸಮಿತಿ ಸಂಚಾಲಕಿ ಪರವೀನಬಾನು ಹವಾಲ್ದಾರ, ಮೆಹರುನಿಸಾ ಢಾಲಾಯತ, ಇಬ್ರಾಹಿಂ ಮುಲ್ಲಾ, ಶರಣಪ್ಪ ಸೂಡಿ, ಸುರೇಶ ಸಿಂಗಾಡಿ, ಚಾಂದಸಾಬ ಬದಾಮಿ, ದಾವಲಸಾಬ ಹಾಳಕೇರಿ, ಬಸವರಾಜ ಅಡನೂರ, ಲಕ್ಷ್ಮಣ ಗೋಕಾವಿ, ರಾಜೇಸಾಬ ತೆಹಶೀಲ್ದಾರ್, ಇಮಾಮಸಾಬ ಉಮಚಗಿ ಹಾಗೂ ಸ್ಲಂ ನಿವಾಸಿಗಳು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gajendragad: ಮನೆಯಲ್ಲೇ ಮುಖ್ಯ ಶಿಕ್ಷಕಿಯ ಹ*ತ್ಯೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.