ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಕಂಕಣ ತೊಡಿ

ಕೇವಲ ದುಡ್ಡು, ಜಾತಿಯಿಂದ ಚುನಾವಣೆ ಗೆಲ್ಲುತ್ತೇವೆ ಎಂಬುದು ಭ್ರಮಯಷ್ಟೇ.

Team Udayavani, Dec 18, 2021, 5:58 PM IST

ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಕಂಕಣ ತೊಡಿ

ಗದಗ: ಈ ಬಾರಿ ನಗರಸಭೆ ಚುನಾವಣೆ ಮುಂಬರುವ ವಿಧಾನಸಭಾ ಚುನಾವಣೆಗೆ ಭದ್ರ ಬುನಾದಿಯಾಗಲಿದೆ. ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಎಲ್ಲರೂ ಶ್ರಮ ವಹಿಸಿದರೆ ಗದಗ-ಬೆಟಗೇರಿ ನಗರಸಭೆ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆಯುವಂತಹ ಫಲಿತಾಂಶ ಬರಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಭವಿಷ್ಯ ನುಡಿದರು.

ಇಲ್ಲಿನ ವಿಠಲರೂಢಾ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ನಡೆದ ನಗರಸಭೆ ಚುನಾವಣೆ ನಿಮಿತ್ತ ಬಿಜೆಪಿ ಅಭ್ಯರ್ಥಿಗಳ ಸಭೆಯನ್ನುದ್ದೇಶಿಸಿ ಸಚಿವರು ಮಾತನಾಡಿದರು. ಕಳೆದ ಬಾರಿ ನಮ್ಮ ಸ್ವಲ್ಪ ತಪ್ಪಿನಿಂದ ವಿಧಾನಸಭಾ ಚುನಾವಣೆಯಲ್ಲಿ ಗದಗ ಮತಕ್ಷೇತ್ರ ಬಿಜೆಪಿ ಕೈತಪ್ಪಿದೆ.

ಮತ್ತೂಮ್ಮೆ ಅಂತಹ ಪರಿಸ್ಥಿ ತಿ ಮರುಕಳಿಸಬಾರದು ಎಂದು ಈ ಬಾರಿ ಅಭ್ಯರ್ಥಿಗಳ ಆಯ್ಕೆಯಿಂದ ಹಿಡಿದು, ಎಲ್ಲ ಹಂತದಲ್ಲಿ ಸ್ಥಳೀಯ ಮುಖಂಡರು ಮತ್ತು ಸಾರ್ವಜನಿಕರ ಅಭಿಪ್ರಾಯಕ್ಕೆ ಮನ್ನಣೆ ನೀಡಲಾಗಿದೆ. ಅಭ್ಯರ್ಥಿಗಳ ಆಯ್ಕೆಯಲ್ಲಿ ನಮ್ಮ ಸ್ವಪ್ರತಿಷ್ಠೆ ಬದಿಗಿಟ್ಟು ಅಭ್ಯರ್ಥಿಗಳ ಆಯ್ಕೆ ಸಮಿತಿಯ ಒಕ್ಕೊರಲ ಅಭಿಪ್ರಾಯಕ್ಕೆ ತಲೆ ಬಾಗಿದ್ದೇನೆ. ಪಕ್ಷದ ಗೆಲುವಿಗಾಗಿ ಅಭ್ಯರ್ಥಿಗಳ ಗೆಲುವಿಗೆ ಪಕ್ಷದ ಎಲ್ಲ ಕಾರ್ಯಕರ್ತರು, ಮುಖಂಡರು ಶ್ರಮಿಸಬೇಕೆಂದು ಕರೆ ನೀಡಿದರು.

ಅವಳಿ ನಗರದ ಅಭಿವೃದ್ಧಿಗೆ ಆರಂಭಿಕ ಹಂತದಲ್ಲಿ ಸುಮಾರು 50 ಕೋಟಿ ರೂ. ಒದಗಿಸಿಕೊಡುವುದಾಗಿ ಭರವಸೆ ನೀಡಿದ ಅವರು, ಅಭಿವೃದ್ಧಿಯಿಂದ ವಂಚಿತವಾಗಿರುವ ಅವಳಿ ನಗರದಲ್ಲಿ ಅಭಿವೃದ್ಧಿಗೆ ಮರು ಚಾಲನೆ ನೀಡುತ್ತೇವೆ. ಜಿಡ್ಡುಗಟ್ಟಿರುವ ಆಡಳಿತವನ್ನು ಚುರುಕುಗೊಳಿಸಲಾಗುವುದು. ಪಾರದರ್ಶಕ ಆಡಳಿತಕ್ಕೆ ಒತ್ತು ನೀಡಲಾಗುವುದು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ನಾಲ್ಕೂ ಕ್ಷೇತ್ರಗಳಲ್ಲಿ ಕಮಲ ಅರಳಿಸಬೇಕು ಎಂದು ಹೇಳಿದರು.

ಬಿಜೆಪಿ ಯುವ ಮುಖಂಡರಾದ ಅನಿಲ್‌ ಮೆಣಸಿನಕಾಯಿ ಮಾತನಾಡಿ, ಈಗಾಗಲೇ ಗದಗ-ಬೆಟಗೇರಿಯ ಎಲ್ಲ 35 ವಾರ್ಡ್‌ಗಳಲ್ಲಿ ಬಿಜೆಪಿ ಅಲೆ ಶುರುವಾಗಿದೆ. ಈಗಾಗಲೇ ಕೆಲ ವಾರ್ಡ್‌ಗಳಲ್ಲಿ ಕಾಂಗ್ರೆಸ್‌ಗೆ ಅಭ್ಯರ್ಥಿಗಳು ದೊರಕಿಲ್ಲ. ಕೆಲವೆಡೆ ನಮ್ಮವರನ್ನೇ ಕರೆದೊಯ್ದು ಸ್ಪರ್ಧೆಗಿಳಿಸಿದ್ದಾರೆ. ಆದರೂ, ಈ ಬಾರಿ ಬಿಜೆಪಿಯಿಂದ ಕನಿಷ್ಟ 25 ಜನ ಅಭ್ಯರ್ಥಿಗಳು ಜಯ ಸಾ ಧಿಸುವರು ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ಸರಕಾರದಲ್ಲಿ ಮಂಜೂರಾಗಿದ್ದ ತುಂಗಭದ್ರಾ 2ನೇ ಹಂತದ ಕುಡಿಯುವ ನೀರಿನ ಯೋಜನೆ(24*7)ಯನ್ನು ಉದ್ಘಾಟಿಸಿರುವ ಶಾಸಕ ಎಚ್‌.ಕೆ.ಪಾಟೀಲ, ಯೋಜನೆಯನ್ನು ತಮ್ಮದೆಂದು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ನಗರದ ಒಳಚರಂಡಿ ಮತ್ತು ರಸ್ತೆಗಳು ಹಾಳಾಗಿದ್ದು, ಕಾಂಗ್ರೆಸ್‌ ಆಡಳಿತದಿಂದ ಜನ ರೋಸಿ ಹೋಗಿದ್ದಾರೆ ಎಂದು ಹೇಳಿದರು.

ಶಾಸಕ ಕಳಕಪ್ಪ ಬಂಡಿ ಮಾತನಾಡಿ, ಕೇವಲ ದುಡ್ಡು, ಜಾತಿಯಿಂದ ಚುನಾವಣೆ ಗೆಲ್ಲುತ್ತೇವೆ ಎಂಬುದು ಭ್ರಮಯಷ್ಟೇ. ಮತದಾರರೊಂದಿಗಿನ ಸ್ನೇಹ, ಬಾಂಧವ್ಯವೇ ಕೈಹಿಡಿಯಲಿದೆ. ಎಲ್ಲ ಅಭ್ಯರ್ಥಿ ಗಳು ಕನಿಷ್ಟ 4-5 ಬಾರಿ ಮತದಾರರ ಮನೆ ಬಾಗಿಲಿಗೆ ತೆರಳಬೇಕು. ತಮ್ಮ ಅಭಿವೃದ್ಧಿಯ ದೃಷ್ಟಿಕೋನ ವಿವರಿಸಿ ಮತ ಪಡೆದುಕೊಳ್ಳಬೇಕು. ಇದೇ ಮೊದಲ ಬಾರಿಗೆ ಚುನಾವಣಾ ಕಣಕ್ಕಿಳಿದವರಿಗೆ ಹಿರಿಯರು ಮಾರ್ಗದರ್ಶನ ಮಾಡಬೇಕು. ಪಕ್ಷದ ಕಾರ್ಯಕರ್ತರು
ತಾವೇ ಅಭ್ಯರ್ಥಿ ಎಂದು ಭಾವಿಸಿ ಚುನಾವಣೆಯಲ್ಲಿ ಕೆಲಸ ಮಾಡಬೇಕೆಂದು ಸಲಹೆ ನೀಡಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಮೋಹನ್‌ ಮಾಳಶೆಟ್ಟಿ ಮಾತನಾಡಿ, ಕಳೆದ ಚುನಾವಣೆಯಲ್ಲಿ ಬಿಜೆಪಿಯು ಮೂರು ಭಾಗಗಳಾಗಿ ಹಂಚಿಹೋಗಿತ್ತು. ಇದರ ಲಾಭ ಪಡೆದುಕೊಂಡು ಕಾಂಗ್ರೆಸ್‌ ಅಧಿಕಾರಕ್ಕೆ ಏರಿತ್ತು. ಆದರೆ, ಈ ಬಾರಿ ಬಿಜೆಪಿಯ ಎಲ್ಲ ನಾಯಕರು ಒಂದಾಗಿದ್ದು, ಕಾಂಗ್ರೆಸ್‌ ಪಕ್ಷದಲ್ಲಿ ನಡುಕ ಹುಟ್ಟಿದೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಬಿಜೆಪಿ ಟಿಕೆಟ್‌ ಸಿಗದೇ ಪಕ್ಷೇತರರಾಗಿ ಸ್ಪ ರ್ಧಿಸಿದ್ದ ಶಿವಲೀಲಾ ಓದುಮಠ ಅವರು ಕಣದಿಂದ ಹಿಂದೆ ಸರಿದು, ಬಿಜೆಪಿ ಗೆಲುವಿಗೆ
ಶ್ರಮಿಸುವುದಾಗಿ ಘೋಷಿಸಿದರು.

ವೇದಿಕೆ ಮೇಲೆ ವಿಧಾನಪರಿಷತ್‌ ಸದಸ್ಯ ಎಸ್‌.ವಿ. ಸಂಕನೂರ್‌, ಬಿಜೆಪಿ ಶಹರ ಅಧ್ಯಕ್ಷ ಮಹಾಂತೇಶ್‌ ನಾಲವಾಡ್‌, ನಗರಾಭಿವೃದ್ಧಿ ಪ್ರಾಧಿ ಕಾರದ ಅಧ್ಯಕ್ಷ ಸಂಗಮೇಶ್‌ ದುಂದೂರ, ಮಾಜಿ ಜಿಲ್ಲಾಧ್ಯಕ್ಷ ಎಂ.ಎಸ್‌. ಕರಿಗೌಡ್ರ, ವಿಜಯಲಕ್ಷ್ಮೀ ಮಾನ್ವಿ, ಕಾಂತಿಲಾಲ್‌ ಬನಸಾಲಿ, ಶಾರದಾ ಹಿರೇಮಠ, ಕಾಂತಿಲಾಲ್‌ ಬನ್ಸಾಲಿ ಉಪಸ್ಥಿತರಿದ್ದರು.

ಅವಳಿ ನಗರದ 35 ವಾರ್ಡ್‌ಗಳಲ್ಲೂ ಬಿಜೆಪಿ ಟಿಕೆಟ್‌ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿತ್ತು. ಅವರೆಲ್ಲರೂ ಸ್ಪರ್ಧೆಗೆ ಅರ್ಹರಾಗಿದ್ದರೂ, ಅಳೆದೂ ತೂಗಿ ಟಿಕೆಟ್‌ ನೀಡಲಾಗಿದೆ. ಆದರೆ, ಪಕ್ಷದ ಟಿಕೆಟ್‌ ದೊರೆಯದ ಕಾರಣ ಅಸಮಾಧಾನಗೊಂಡು ಕೆಲವೊಬ್ಬರು ಬಂಡಾಯ ಅಭ್ಯರ್ಥಿಗಳಾಗಿದ್ದಾರೆ. ಅವರು ತಮ್ಮ ವಾರ್ಡ್‌ನಲ್ಲಿ ಕಾಂಗ್ರೆಸ್‌ ಬರಬೇಕೆಂದರೆ, ಸ್ವತಂತ್ರ ಅಭ್ಯರ್ಥಿಯಾಗಿ ಮುಂದುವರಿಯಲಿ. ಬಿಜೆಪಿಗೆ ಗೆಲುವಾಗಲಿ ಎನ್ನುವುದಾದರೆ ನಾಳೆ ನಾಮಪತ್ರ ಹಿಂಪಡೆಯಬೇಕು. ತಮ್ಮಲ್ಲಿರುವ ಭಿನ್ನಮತ, ಅಸಮಾಧಾನ ಬದಿಗೊತ್ತಿ ಪಕ್ಷದ ಗೆಲುವಿಗೆ ಪ್ರಾಮಾಣಿಕವಾಗಿ ಶ್ರಮಿಸಬೇಕೆಂದು ಮನವಿ ಮಾಡಿಕೊಳ್ಳುತ್ತೇನೆ.
ಸಿ.ಸಿ.ಪಾಟೀಲ, ಜಿಲ್ಲಾ ಉಸ್ತುವಾರಿ ಸಚಿವ

ಟಾಪ್ ನ್ಯೂಸ್

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.