ಬಿಜೆಪಿ ದೇಶಪ್ರೇಮದ ಪಾಠ ಹಾಸ್ಯಾಸ್ಪದ
ಮಾಜಿ ಶಾಸಕ ಜಿ.ಎಸ್. ಪಾಟೀಲ ಲೇವಡಿ; ಕಾಂಗ್ರೆಸ್ ಸ್ವಾಭಿಮಾನಿ ಪಾದಯಾತ್ರೆಗೆ ಅದ್ಧೂರಿ ಸ್ವಾಗತ
Team Udayavani, Aug 11, 2022, 3:09 PM IST
ಗಜೇಂದ್ರಗಡ: ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ದೇಶಾದ್ಯಂತ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ಸ್ವಾಭಿಮಾನಿ ಪಾದಯಾತ್ರೆ ಬುಧವಾರ ಪಟ್ಟಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಅದ್ಧೂರಿಯಾಗಿ ಬರಮಾಡಿಕೊಂಡರು.
ಈ ವೇಳೆ ಮಾಜಿ ಶಾಸಕ ಜಿ. ಎಸ್. ಪಾಟೀಲ ಮಾತನಾಡಿ, ಬ್ರಿಟಿಷರ ದಬ್ಟಾಳಿಕೆ, ದೌರ್ಜನ್ಯದಿಂದ ದೇಶದ ಜನತೆ ಬೇಸತ್ತಿದ್ದರು. ನಿತ್ಯ ಕಿರುಕುಳಗಳನ್ನು ಸಹಿಸಿಕೊಂಡು ಬದುಕು ಸಾಗಿಸುತ್ತಿದ್ದ ದೇಶವಾಸಿಗಳಿಗೆ ಸ್ವಾತಂತ್ರ್ಯ ದೊರಕಿಸಿಕೊಡುವಲ್ಲಿ ಕಾಂಗ್ರೆಸ್ ಪಕ್ಷ ಆಂಗ್ಲರ ವಿರುದ್ಧ ಹೋರಾಡಿದೆ. ಬ್ರಿಟಿಷರ ಗುಂಡೇಟಿಗೆ ಹಲವಾರು ಹೋರಾಟಗಾರರು ಅಸುನೀಗಿದ್ದಾರೆ. ಅಂತಹ ಇತಿಹಾಸವುಳ್ಳ ಕಾಂಗ್ರೆಸ್ ಪಕ್ಷಕ್ಕೆ ದೇಶಪ್ರೇಮದ ಪಾಠ ಹೇಳಿಕೊಡಲು ಹೊರಟಿರುವ ಬಿಜೆಪಿ ನಡೆ ಹಸ್ಯಾಸ್ಪದವಾಗಿದೆ ಎಂದರು.
ರಾಷ್ಟ್ರಪ್ರೇಮ, ರಾಷ್ಟ್ರೀಯತೆ, ಭಾತೃತ್ವತೆ ಏನೆಂಬುದು ಬಿಜೆಪಿಯವರಿಗೇನು ಗೊತ್ತು. ದೇಶದ ಸಂವಿಧಾನದ ಮೇಲೆ ನಂಬಿಕೆ ಇಲ್ಲದೇ ಆಡಳಿತ ನಡೆಸುತ್ತಿರುವವರು ರಾಷ್ಟ್ರಭಕ್ತಿ ಮೆರೆಯುವರೇ? ಸ್ವಾರ್ಥ ರಾಜಕಾರಣಕ್ಕಾಗಿ ಭಾವನಾತ್ಮಕ ವಿಷಯಗಳನ್ನು ಮುಂದಿಟ್ಟುಕೊಂಡು ದೇಶದ ಜನರ ದಿಕ್ಕು ತಪ್ಪಿಸುವ ಪೊಳ್ಳು ರಾಷ್ಟ್ರಪ್ರೇಮ ಅವರದ್ದಾಗಿದೆ ಎಂದು ಕಿಡಿಕಾರಿದರು.
ಗಜೇಂದ್ರಗಡ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವರಾಜ ಘೋರ್ಪಡೆ ಮಾತನಾಡಿ, ಸ್ವತಂತ್ರ ಭಾರತಕ್ಕೆ ತನ್ನದೇ ಆದ ಇತಿಹಾಸವಿದೆ. ವಿಶ್ವದಲ್ಲಿಯೇ ಭಾರತವನ್ನು ಸಾಂಸ್ಕೃತಿಕ ರಾಯಭಾರಿಯನ್ನಾಗಿ ನೋಡಲಾಗುತ್ತಿದೆ. ಇಂತಹ ಭಾರತದ ಪರಂಪರೆಯನ್ನು ಕದಡಿಸುವ ನಿಟ್ಟಿನಲ್ಲಿ ಬಿಜೆಪಿ ಆಡಳಿತ ನಡೆಸುತ್ತಿರುವುದು ಖಂಡನೀಯ. ದೇಶದ ಸರ್ವಧರ್ಮೀಯರೂ ಅನ್ಯೋನ್ಯದಿಂದ ಬದುಕುವ ಸಂದರ್ಭದಲ್ಲಿ ಪದೇ, ಪದೆ ಜಾತೀಯತೆಯ ಕಂದಕ ಸೃಷ್ಟಿ ಮಾಡುತ್ತಿರುವುದು ಸರಿಯಾದ ಬೆಳವಣಿಗೆಯಲ್ಲ. ಭಾರತ ಸರ್ಕಾರ ಭಾವೈಕ್ಯತೆಯ ವಿರುದ್ಧವಾಗಿ ನಡೆದುಕೊಳ್ಳಿತ್ತಿದೆ ಎಂದು ವಿಶ್ವ ಮಟ್ಟದಲ್ಲಿ ದೊಡ್ಡ ಪ್ರಮಾಣದಲ್ಲಿ ಚರ್ಚೆಗಳಾಗುತ್ತಿವೆ. ಇದಕ್ಕೆ ಆಸ್ಪದ ನೀಡಬಾರದು. ನಾವೆಲ್ಲರೂ ಒಂದೇ ಎಂಬ ಸದಾಶಯ ವ್ಯಕ್ತಪಡಿಸಲು ಬಿಜೆಪಿ ಸರ್ಕಾರ ತೊಲಗಬೇಕು. ಅಂದಾಗ ಮಾತ್ರ ಸಹೋದರತ್ವ ಉಳಿಯಲು ಸಾಧ್ಯ ಎಂದರು.
ಇದಕ್ಕೂ ಮುನ್ನ ಸ್ಥಳೀಯ ಮೈಸೂರ ಮಠದಿಂದ ಆರಂಭವಾದ ಪಾದಯಾತ್ರೆ ಮೆರವಣಿಗೆ ದುರ್ಗಾ ವೃತ್ತ, ಜೋಡು ರಸ್ತೆ, ಶ್ರೀ ಕಾಲಕಾಲೇಶ್ವರ ವೃತ್ತ, ರೋಣ ರಸ್ತೆ ಮಾರ್ಗವಾಗಿ ಪುರ್ತಗೇರಿ ಗ್ರಾಮಕ್ಕೆ ತೆರಳಿತು. ಪುರಸಭೆ ವಿಪಕ್ಷ ನಾಯಕ ಮುರ್ತುಜಾ ಡಾಲಾಯತ್, ವೀರಣ್ಣ ಶೆಟ್ಟರ, ಮಿಥುನ ಪಾಟೀಲ, ಮಂಜುಳಾ ರೇವಡಿ, ರಾಜು ಸಾಂಗ್ಲಿಕಾರ, ವೆಂಕಟೇಶ ಮುದಗಲ್ಲ, ಶ್ರೀಧರ ಬಿದರಳ್ಳಿ, ಸುಮಂಗಲಾ ಇಟಗಿ, ಶಾರದಾ ರಾಠೊಡ, ಬಸವರಾಜ ಚನ್ನಿ, ಅಪ್ಪು ಮತ್ತಿಕಟ್ಟಿ, ಪ್ರಶಾಂತ್ ರಾಠೊಡ, ಅಬ್ದುಲ್ ರೆಹಮಾನ ನದೀಮುಲ್ಲಾ, ಬಿ.ಎಸ್. ಶೀಲವಂತರ, ಮುತ್ತಣ್ಣ ಮ್ಯಾಗೇರಿ, ಹಸನ ತಟಗಾರ, ಶರಣು ಪೂಜಾರ, ಮಾಸುಮಲಿ ಮದಗಾರ, ಯಲ್ಲಪ್ಪ ಬಂಕದ, ಅರ್ಜುನ್ ರಾಠೊಡ, ಅಶ್ರಫಲಿ ಗೊಡೇಕಾರ ಸೇರಿದಂತೆ ಹಲವಾರು ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gajendragad: ಮನೆಯಲ್ಲೇ ಮುಖ್ಯ ಶಿಕ್ಷಕಿಯ ಹ*ತ್ಯೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.