ಮಹಿಳೆಯರಿಗೆ ಶೌಚಾಲಯ ವ್ಯವಸ್ಥೆ ಕಲ್ಪಿಸಿ
ಬಯಲು ಶೌಚಾಲಯ ತೆರವಿಗೆ ಆಕ್ರೋಶ! ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳಲು ಜಾಗದ ಕೊರತೆ! ಗೋಡೆ ಕಟ್ಟಲು ಮನವಿ
Team Udayavani, Apr 29, 2021, 7:11 PM IST
ಗಜೇಂದ್ರಗಡ: ಹಿಂದುಳಿದ ಸಮುದಾಯ ವಾಸಿಸುವ ಬಡಾವಣೆಯಲ್ಲಿನ ಮಹಿಳೆಯರಿಗೆ ಶೌಚಾಲಯ ವ್ಯವಸ್ಥೆ ಕಲ್ಪಿಸಬೇಕೆಂದು ಆಗ್ರಹಿಸಿ ನಿವಾಸಿಗಳು ಪುರಸಭೆ ಮುಂಭಾಗದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು. ಪಟ್ಟಣದ 18 ಮತ್ತು 21ನೇ ವಾರ್ಡ್‌ಗೆ ಹೊಂದಿಕೊಂಡ ಸಾರ್ವಜನಿಕ ಬಯಲು ಶೌಚಾಲಯವನ್ನು ಪುರಸಭೆಯವರು ಏಕಾಏಕಿ ತೆರವುಗೊಳಿಸಿದ್ದಾರೆ.
ಇದೇ ಶೌಚಾಲಯವನ್ನು ಸುತ್ತಲಿನ ನಾಲ್ಕು ವಾರ್ಡ್‌ನ ಮಹಿಳೆಯರು ಅವಲಂಬಿಸಿದ್ದಾರೆ. ಇಲ್ಲಿನ ನಿವಾಸಿಗಳು ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳಲು ಜಾಗದ ಕೊರತೆಯಿದೆ ಎಂದರು. ಮಹಿಳೆಯರ ಮಾನ ಕಾಪಾಡಬೇಕಾದ ಆಡಳಿತವೇ ಇಂತಹ ಕೆಲಸ ಮಾಡಿರುವುದು ಸಮಂಜಸವಲ್ಲ. ಹಿಂದುಳಿದ ಸಮುದಾಯ ವಾಸಿಸುವ ಬಡಾವಣೆ ನಿವಾಸಿಗಳಿಗೆ ತೊಂದರೆಯಾದರೂ ಪುರಸಭೆ ಆಡಳಿತ ಸ್ಪಂದಿಸುತ್ತಿಲ್ಲ. ಕೂಡಲೇ ತೆರವುಗೊಳಿಸಿದ ಗೋಡೆ ಪುನಃ ನಿರ್ಮಾಣಕ್ಕೆ ಮುಂದಾಗಬೇಕು. ಇಲ್ಲದಿದ್ದರೆ ಪುರಸಭೆಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು.
ಇದೇ ವೇಳೆ ಪ್ರತಿಭಟನಾ ಸ್ಥಳಕ್ಕೆ ಪುರಸಭೆ ಅಧ್ಯಕ್ಷ ವೀರಣ್ಣ ಪಟ್ಟಣಶೆಟ್ಟಿ, ಮುಖ್ಯಾಧಿಕಾರಿ ಮಹಾಂತೇಶ ಬೀಳಗಿ ಆಗಮಿಸಿ, ಮಹಿಳೆಯರ ಅಹವಾಲು ಆಲಿಸಿ ಮಾತನಾಡಿದರು.
ಕಾನೂನಿನಲ್ಲಿ ಬಯಲು ಶೌಚ ನಿಷೇಧಿಸಲಾಗಿದೆ. ಹಾಗಿದ್ದಾಗ್ಯೂ ಇಷ್ಟು ವರ್ಷ ಜಾರಿಯಲ್ಲಿರುವುದು ಕಾನೂನು ಬಾಹೀರ ಕೃತ್ಯವಾಗಿದೆ. ವೈಯಕ್ತಿಕ ಶೌಚ ನಿರ್ಮಾಣಕ್ಕೆ ಮುಂದಾಗಿ, ಇಲ್ಲವಾದರೆ ಸಾರ್ವಜನಿಕ ಸುಲಭ ಶೌಚಾಲಯ ಬಳಕೆ ಮಾಡಿಕೊಳ್ಳಿ ಎಂದರು. ಇದಕ್ಕೊಪ್ಪದ ಪ್ರತಿಭಟನಾಕಾರರು ತೆರವುಗೊಳಿಸಿದ ಗೋಡೆ ನಿರ್ಮಿಸಬೇಕು. ಇಲ್ಲವೇ ಶೌಚಾಲಯ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಪಟ್ಟುಹಿಡಿದರು. ನಂತರ ಆಡಳಿತ ಮಂಡಳಿ ಜೊತೆ ಚರ್ಚಿಸಿ ಕ್ರಮ ಜರುಗಿಸಲಾಗುವುದು ಎಂದು ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.