ಸಿಸಿ ರಸ್ತೆ ಕಾಮಗಾರಿಗೆ ಚಾಲನೆ
Team Udayavani, Jan 20, 2020, 3:59 PM IST
ಶಿರಹಟ್ಟಿ: ಶಿರಹಟ್ಟಿ ಮತ ಕ್ಷೇತ್ರದಾದ್ಯಂತವಾಗಿ ಅತಿವೃಷ್ಟಿಯಿಂದಾಗಿ ರಸ್ತೆಗಳ ಸುಧಾರಣೆಗೆ ಕ್ರಮ ಜರುಗಿಸುವುದ ಅವಶ್ಯವಿದ್ದು, ಈಗಾಗಲೇ ಮುಂಡರಗಿ ಮತ್ತು ಲಕ್ಷ್ಮೇಶ್ವರ ಭಾಗದಲ್ಲಿನ ರಸ್ತೆಗಳ ಸುಧಾರಣೆಗಾಗಿ ಅನುದಾನ ಬಿಡಗಡೆಯಾಗಿದೆ. ಮುಂದಿನ ದಿನಗಳಲ್ಲಿ ಮತಕ್ಷೇತ್ರದ ಎಲ್ಲ ರಸ್ತೆಗಳನ್ನು ಸುಧಾರಣೆ ಮಾಡಲಾಗುವುದು ಎಂದು ಶಾಸಕ ರಾಮಣ್ಣ ಲಮಾಣಿ ಹೇಳಿದರು.
ತಾಲೂಕಿನ ಕಡಕೋಳ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯ ವತಿಯಿಂದ ಕಡಕೋಳದಿಂದ 14.50 ಕಿ.ಮೀ ರಸ್ತೆ ವರೆಗೆ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ರಸ್ತೆಗಳ ಗುಣಮಟ್ಟವನ್ನು ಗುತ್ತಿಗೆದಾರರು ಕಾಯ್ದುಕೊಳ್ಳಬೇಕು. ಜೊತೆಗೆ ಕಡಕೋಳ ಗ್ರಾಮಸ್ಥರು ಗುತ್ತಿಗೆದಾರರಿಗೆ ಸಹಕಾರವನ್ನು ನೀಡಿದರೆ ಅವರು ಉತ್ತಮವಾದ ರಸ್ತೆಯನ್ನು ನಿರ್ಮಿಸಲು ಅನುಕೂಲವಾಗುತ್ತದೆ.ಕೃಷಿಕರಿಗೆ ಅನುಕೂಲ ಕಲ್ಪಿಸುವುದಕ್ಕಾಗಿ ತುಂಗಭದ್ರ ನದಿಯನ್ನು ಸಮರ್ಪಕವಾಗಿಬಳೆಕ ಮಾಡಿಕೊಳ್ಳಲು ಉತ್ತಮವಾದ ಯೋಜನೆಯನ್ನು ರೂಪಿಸಲುಕಾರ್ಯಪ್ರವೃತ್ತರಾಗಿದ್ದು, ಮುಂದಿನ ದಿನಮಾನದಲ್ಲಿ ಹಂತ ಹಂತವಾಗಿ ಅಬಿವೃದ್ಧಿ ಕಾಮಗಾರಿಯನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ತಿಪ್ಪಣ್ಣ ಕೊಂಚಿಗೇರಿ, ಗ್ರಾಪಂ ಅಧ್ಯಕ್ಷ ವಿರುಪಾಕ್ಷಪ್ಪ ಗೌಳಿ, ಅಂದಪ್ಪ ಕೋರಿ, ಮಲ್ಲಿಕಾರ್ಜುನ ಅಂಗಡಿ, ಬಸವರಾಜ ಪೂಜಾರ, ಶರಣಪ್ಪ ಹೂಗಾರ, ಅಪ್ಪಣ್ಣ ಹರಿಜನ, ಶರಣಪ್ಪ ಹರ್ಲಾಪೂರ, ಮಹದೇವಪ್ಪ ಅಡವಿ ಅಧಿಕಾರಿಗಳಾದ ಎಚ್.ಬಿ. ಹೊಸಮನಿ, ಶಂಭು ಕಾಳಗಿ ಮುಂತಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.