ಸಂಭ್ರಮದ ಈದ್‌-ಉಲ್-ಫಿತರ್‌ ಆಚರಣೆ

Celebration of the celebration of Eid-ul-Fitr

Team Udayavani, Jun 6, 2019, 9:47 AM IST

gadaga-tdy-1..

ಗದಗ: ಪವಿತ್ರ ರಂಜಾನ್‌ ಹಬ್ಬದ ನಿಮಿತ್ತ ನಗರದ ಡಂಬಳ ನಾಕಾದಲ್ಲಿರುವ ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ಗದಗ: ಗದಗ-ಬೆಟಗೇರಿ ಅವಳಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಬುಧವಾರ ಈದ್‌-ಉಲ್- ಫಿತರ್‌(ರಂಜಾನ್‌) ಹಬ್ಬದ ಅಂಗವಾಗಿ ಶ್ರದ್ಧಾ-ಭಕ್ತಿಯಿಂದ ಸಾಮೂಹಿಕವಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ನಗರದ ಡಂಬಳ ನಾಕಾ, ಮುಳಗುಂದ ನಾಕಾ ಹಾಗೂ ಬೆಟಗೇರಿಯಲ್ಲಿರುವ ಈದ್ಗಾ ಮೈದಾನಗಳಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಮುಸ್ಲಿಂ ಬಾಂಧವರು ಲೋಕ ಕಲ್ಯಾಣಾರ್ಥವಾಗಿ ಸಾಮೂಹಿಕವಾಗಿ ನಮಾಜ್‌ ಮಾಡಿದರು.

ಈ ಮೂಲಕ ರಂಜಾನ್‌ ನಿಮಿತ್ತ ಒಂದು ತಿಂಗಳ ಕಾಲ ಕೈಗೊಂಡಿದ್ದ ಉಪವಾಸ ವ್ರತಾಚರಣೆಯನ್ನು ಅಂತ್ಯಗೊಳಿಸಿದರು. ಸಾಮೂಹಿಕ ಪ್ರಾರ್ಥನೆಯಲ್ಲಿ ನೂತನ ವಸ್ತ್ರಗಳನ್ನು ಧರಿಸಿ ನೂತನ ಟೋಪಿ, ಅರಬ್‌ ರಾಷ್ಟ್ರಗಳ ಮಾದರಿಯಲ್ಲಿ ರುಮಾಲು ಸುತ್ತಿದ್ದ ಚಿಣ್ಣರು, ಯುವಕರು ಎಲ್ಲರ ಗಮನ ಸೆಳೆದರು.

ಇಲ್ಲಿನ ಡಂಬಳ ನಾಕಾದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಪ್ರೊ| ಕಿಶೋರಬಾಬು ನಾಗರಕಟ್ಟಿ, ಉಮರ್‌ಫಾರೂಕ್‌ ಹುಬ್ಬಳ್ಳಿ, ಅಬ್ದುಲ್ ನರಗುಂದ, ಸಾಧಿಕ್‌ ನರಗುಂದ, ಅ.ದ. ಕಟ್ಟಿಮನಿ, ಎನ್‌.ಐ. ಮಕಾನದಾರ, ಅಕ್ಬರಸಾಬ್‌ ಬಬರ್ಚಿ, ಜಿ.ಎಂ. ದಂಡಿನ, ಶಫಿ ನಾಗರಕಟ್ಟಿ ಪಾಲ್ಗೊಂಡಿದ್ದರು.

ಬಳಿಕ ಆಶೀರ್ವಚನ ನೀಡಿದ ಧರ್ಮಗುರುಗಳು, ದೇಶದಲ್ಲಿ ಉತ್ತಮ ಮಳೆ, ಬೆಳೆ ಆಗಬೇಕು. ವಿಶ್ವದಲ್ಲಿ ಶಾಂತಿ-ಸೌಹಾರ್ದತೆ ನೆಲೆ ನಿಲ್ಲಬೇಕು. ಈದ್‌ ಉಲ್ ಫಿತರ್‌ ಆಚರಣೆಯಿಂದ ಸಮಾಜದಲ್ಲಿ ಸೌಹಾರ್ದ, ಸಹನೆ, ಪರಸ್ಪರ ಪ್ರೀತಿ- ವಿಶ್ವಾಸ ವೃದ್ಧಿಯಾಗಬೇಕು. ಉಳ್ಳವರು ಬಡವರಿಗೆ ದಾನ, ಧರ್ಮ ಮಾಡಬೇಕು ಎಂದು ಸಲಹೆ ನೀಡಿದರು.

ಅದರೊಂದಿಗೆ ಅವಳಿ ನಗರದ ವಿವಿಧ ಬಡಾವಣೆಗಳಲ್ಲಿರುವ ಮಸೀದಿಗಳಲ್ಲೂ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಸಾಮೂಹಿಕ ಪ್ರರ್ಥನೆ ಬಳಿಕ ಪರಸ್ಪರ ಆಲಂಗಿಸಿಕೊಂಡು ‘ಈದ್‌ ಮುಬಾರಕ್‌’ ಎಂದು ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು. ನಂತರ ಸ್ನೇಹಿತರು ಹಾಗೂ ಸಂಬಂಧಿಕರ ಮನೆಗಳಿಗೆ ತೆರಳಿ, ರಂಜಾನ್‌ ಹಬ್ಬದ ಶುಭಶಯ ವಿನಿಮಯ ಮಾಡಿಕೊಂಡರು.

ಹಬ್ಬದ ನಿಮಿತ್ತ ಮನೆಗಳಲ್ಲಿ ಗೋಡಂಬಿ, ಪಿಸ್ತಾ, ಬಾದಾಮ, ಕೇರಬೀಜ ಮತ್ತಿತರ ಪದಾರ್ಥಗಳೊಂದಿಗೆ ತಯಾರಿಸಿದ ಸುರಕುಂಬ(ಪಾಯಸ) ಸವಿದರು. ಅಕ್ಕ ಪಕ್ಕದ ಮನೆಯವರಿಗೂ ಸುರಕುಂಬ ನೀಡಿ, ಸೌಹಾರ್ದತೆ ಮೆರೆದರು. ಸಂಬಂಧಿಕರು ಹಾಗೂ ನೆರೆಹೊರೆಯರಿಗೆ ಹಬ್ಬದ ಔತಣ ನೀಡಿ, ಸಂಭ್ರಮಿಸಿದರು. ಹಿರಿಯರಿಂದ ‘ಈದಿ’ (ಹಬ್ಬದ ಸಂದರ್ಭ ಮಕ್ಕಳಿಗೆ ನೀಡುವ ಉಡುಗೊರೆ) ಪಡೆದು ಖುಷಿ ಪಟ್ಟರು.

ಟಾಪ್ ನ್ಯೂಸ್

mamata

West Bengal bypolls; ಟಿಎಂಸಿ ಕ್ಲೀನ್ ಸ್ವೀಪ್: ಪ್ರತಿಭಟನೆಗಳು ಬಿಜೆಪಿಗೆ ಸಹಕಾರಿಯಾಗಲಿಲ್ಲ

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ

Maharashtra Polls: Who will be the next Chief Minister? Fadnavis gives a hint

Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್‌

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

Dhanashree Verma: ಯಶ್‌ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್

Dhanashree Verma: ಯಶ್‌ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್

Re-Release: ಈ ವರ್ಷ ರೀ ರಿಲೀಸ್‌ ಆದ ಬಾಲಿವುಡ್‌ ಸಿನಿಮಾಗಳ ಬಾಕ್ಸ್‌ ಆಫೀಸ್‌ ಗಳಿಕೆ ಎಷ್ಟು?

Re-Release: ಈ ವರ್ಷ ರೀ ರಿಲೀಸ್‌ ಆದ ಬಾಲಿವುಡ್‌ ಸಿನಿಮಾಗಳ ಬಾಕ್ಸ್‌ ಆಫೀಸ್‌ ಗಳಿಕೆ ಎಷ್ಟು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

mamata

West Bengal bypolls; ಟಿಎಂಸಿ ಕ್ಲೀನ್ ಸ್ವೀಪ್: ಪ್ರತಿಭಟನೆಗಳು ಬಿಜೆಪಿಗೆ ಸಹಕಾರಿಯಾಗಲಿಲ್ಲ

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ

ಮುಂಡಗೋಡ: ಮಂಗನಬಾವು ಉಲ್ಬ‌ಣ-ಮೂರು ದಿನ ಶಾಲೆಗೆ ರಜೆ

ಮುಂಡಗೋಡ: ಮಂಗನಬಾವು ಉಲ್ಬ‌ಣ-ಮೂರು ದಿನ ಶಾಲೆಗೆ ರಜೆ

Maharashtra Polls: Who will be the next Chief Minister? Fadnavis gives a hint

Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.