ಮಧುಮೇಹ ತಡೆಗೆ ಜೀವನ ಶೈಲಿ ಬದಲಾಯಿಸಿಕೊಳ್ಳಿ

ಜನ ಅಸಾಂಕ್ರಾಮಿಕ ಕಾಯಿಲೆಗಳಿಂದ ಮರಣ ಹೊಂದುತ್ತಿದ್ದಾರೆ.

Team Udayavani, Nov 15, 2021, 5:05 PM IST

ಮಧುಮೇಹ ತಡೆಗೆ ಜೀವನ ಶೈಲಿ ಬದಲಾಯಿಸಿಕೊಳ್ಳಿ

ಗದಗ: ಮಧುಮೇಹವನ್ನು ತಡೆಗಟ್ಟುವ ನಿಟ್ಟಿನಲ್ಲಿ ನಮ್ಮ ಜೀವನ ಶೈಲಿ ಬದಲಾಯಿಸಿಕೊಳ್ಳಬೇಕು. ಉತ್ತಮ ಆಹಾರ ಸೇವನೆ ಹಾಗೂ ನಿಯಮಿತವಾಗಿ ಸರಕಾರಿ ಆಸ್ಪತ್ರೆಯಲ್ಲಿ ಉಚಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಸರಕಾರದಿಂದ ದೊರೆಯುವ ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಬೇಕೆಂದು ಜಿಲ್ಲಾ ಕಾನೂನು ಸೇವಾ ಪ್ರಾ ಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ| ಎಸ್‌.ಜಿ. ಸಲಗರೆ ಹೇಳಿದರು.

ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಯುಷ್‌ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ರೈಲ್ವೆ ಹೆಲ್ತ್‌ ಯುನಿಟ್‌, ಜಿಲ್ಲಾ ಸಮೀಕ್ಷಾ ಘಟಕ, ಜಿಲ್ಲಾ ಅಸಾಂಕ್ರಾಮಿಕ ರೋಗಗಳ ಘಟಕ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಆಶ್ರಯದಲ್ಲಿ ರೈಲ್ವೆ ಕಮ್ಯುನಿಟಿ ಹಾಲ್‌ ಆಯೋಜಿಸಿದ್ದ ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ಅಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವಲ್ಲಿ ಯೋಗಾಸನ, ಅಸಾಂಕ್ರಾಮಿಕ ರೋಗಗಳ ಉಚಿತ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಅಸಾಂಕ್ರಾಮಿಕ ರೋಗಗಳಲ್ಲಿ ಮಧುಮೇಹ ಪ್ರಮುಖವಾಗಿದ್ದು, ನಮ್ಮ ದೇಶ ಹಾಗೂ ರಾಜ್ಯದಲ್ಲಿ ಮಧುಮೇಹದಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚಿದೆ. ಪ್ರಸ್ತುತ ನಮ್ಮ ಜೀವನ ಶೈಲಿ, ಆಹಾರ ಪದ್ಧತಿ, ದೈಹಿಕ ಚಟವಟಿಕೆ ಇಲ್ಲದೇ ಇರುವುದು, ತಂಬಾಕು ಹಾಗೂ ಮಧ್ಯಪಾನ ಸೇವನೆಯಿಂದಾಗಿ ಮಧುಮೇಹ ಕಾಯಿಲೆ ಹೆಚ್ಚುತ್ತಿದೆ. ಸಾವಯವ ಹಾಗೂ ಸಿರಿಧಾನ್ಯಗಳು, ಸೊಪ್ಪು, ತರಕಾರಿಯುಕ್ತ ಆಹಾರ ಸೇವನೆಯಿಂದ ಸಕ್ಕರೆ ಕಾಯಿಲೆಯಿಂದ ದೂರವಿರಬಹುದು ಎಂದು ಸಲಹೆ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ(ಪ್ರಭಾರ) ಡಾ| ಜಗದೀಶ ನುಚ್ಚಿನ್‌ ಮಾತನಾಡಿ, ವಿಶ್ವ ಮಧುಮೇಹ ದಿನಾಚರಣೆ ಈ ವರ್ಷದ ಘೋಷವಾಖ್ಯ “ಮಧುಮೇಹ ಆರೈಕೆ ಅವಕಾಶ. ಇಗಿಲ್ಲವಾದರೆ ಮತ್ತೆ ಯಾವಾಗ’ ಆಗಿದೆ. ಬಹಳಷ್ಟು ಜನರಿಗೆ ಮಧುಮೇಹದ ಬಗ್ಗೆ ಅರಿವು ಇರದಿರುವುದರಿಂದ 30 ವರ್ಷ ಮೇಲ್ಪಟ್ಟವರು ವರ್ಷದಲ್ಲಿ ಕನಿಷ್ಟ ಒಂದು ಬಾರಿ ಕಡ್ಡಾಯವಾಗಿ ಮಧುಮೇಹ ಹಾಗೂ ರಕ್ತದೊತ್ತಡ ತಪಾಸಣೆ ಮಾಡಿಸಿಕೊಳ್ಳಬೇಕು. ಇದರಿಂದ ಅಸಾಂಕ್ರಾಮಿಕ ರೋಗಗಳನ್ನು ಪ್ರಾರಂಭಿಕ ಹಂತದಲ್ಲಿ ಪತ್ತೆಹಚ್ಚಿ ಮುಂದೆ ಆಗಬಹುದಾದ ತೊಂದರೆ (ತೊಡಕುಗಳನ್ನು) ತಡೆಗಟ್ಟಬಹುದು ಎಂದು ತಿಳಿಸಿದರು.

ವಿಶ್ವದಲ್ಲಿ ಒಂದು ವರ್ಷದಲ್ಲಿ ಸುಮಾರು 6 ಕೋಟಿ ಜನರು ಮರಣ ಹೊಂದುತ್ತಿದ್ದು, ಇದರಲ್ಲಿ 4 ಕೋಟಿ ಜನ ಅಸಾಂಕ್ರಾಮಿಕ ಕಾಯಿಲೆಗಳಿಂದಲೇ ಮರಣ ಹೊಂದುತ್ತಿದ್ದಾರೆ. ಅದೇ ರೀತಿ ಭಾರತದಲ್ಲಿ ಒಂದು ವರ್ಷದಲ್ಲಿ 1 ಕೋಟಿ ಮರಣ ಹೊಂದುತ್ತಿದ್ದು, ಈ ಪೈಕಿ 67 ಲಕ್ಷ ಜನ ಅಸಾಂಕ್ರಾಮಿಕ ಕಾಯಿಲೆಗಳಿಂದ ಮರಣ ಹೊಂದುತ್ತಿದ್ದಾರೆ. ನಮ್ಮ ದೇಶದಲ್ಲಿ ಒಂದು ಸಾವಿರ ಜನಸಂಖ್ಯೆಯಲ್ಲಿ ಸುಮಾರು 67 ಜನರು ಮಧುಮೇಹದಿಂದ ಬಳಲುತ್ತಿದ್ದಾರೆ. ಭಾರತ ದೇಶವು ಈಗ ಮಧುಮೇಹದ ರಾಜಧಾನಿಯಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ಅಸಾಂಕ್ರಾಮಿಕ ಕಾಯಿಲೆಗಳ ಪ್ರಾಥಮಿಕ ಹಂತದ ತಪಾಸಣೆ ಪ್ರತಿ ಗ್ರಾಮಗಳಲ್ಲಿ ಕೈಗೊಳ್ಳಲಾಗುತ್ತಿದ್ದು, ಒಟ್ಟು 7 ಎನ್‌ಸಿಡಿ ಕ್ಲಿನಿಕ್‌ ಗಳು ಕಾರ್ಯನಿರ್ವಹಿಸುತ್ತಿವೆ. ಪ್ರತಿ ಆರೋಗ್ಯ ಕೇಂದ್ರಗಳಲ್ಲಿ ಅಸಾಂಕ್ರಾಮಿಕ ಕಾಯಿಲೆಗಳಿಗೆ ಉಚಿತ ತಪಾಸಣೆ ಔಷಧ ವಿತರಿಸಲಾಗುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆಯು 2025ರೊಳಗಾಗಿ ಸುಮಾರು ಶೇ. 25ರಷ್ಟು ಅಸಾಂಕ್ರಾಮಿಕ ಕಾಯಿಲೆಗಳಿಂದ ಮರಣ ಹೊಂದುವುದನ್ನು ತಡೆಯುವ ಗುರಿಯನ್ನು ಹೊಂದಿದೆ ಎಂದು ತಿಳಿಸಿದರು.

ಜಿಲ್ಲಾ ಆಯುಷ್‌ ಅಧಿಕಾರಿ ಡಾ| ಮಲ್ಲಿಕಾರ್ಜುನ ಎಸ್‌. ಉಪ್ಪಿನ ಮಾತನಾಡಿದರು. ರೈಲ್ವೇ ಇಲಾಖೆ ವಿಭಾಗೀಯ ಮುಖ್ಯ ವೈದ್ಯಾದಿಕಾರಿ ಡಾ| ಕವಿರಾಜ ಕೊಟ್ಟೂರ, ರೈಲ್ವೆ ಸಹಾಯಕ ವಿಭಾಗೀಯ ಅಭಿಯಂತರ ಬಶೀರ ಅಡೇನ, ಆಯುಷ್‌ ಇಲಾಖೆಯ ಡಾ| ಅಶೋಕ ಮತ್ತಿಗಟ್ಟಿ, ಡಾ| ರಾಜೇಂದ್ರ ಬಸರೀಗಿಡದ, ಡಾ| ರವಿ ಕಡಗಾವಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ಮಾವು ಬಂಪರ್‌ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ

ಗದಗ: ಮಾವು ಬಂಪರ್‌ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ

Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ

Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ

ಗದಗ: ನೀರು ಸೋರಿಕೆ- ನದಿಯಲ್ಲಿ ನೀರಿದ್ದರೂ ತಪ್ಪದ ಹಾಹಾಕಾರ!

ಗದಗ: ನೀರು ಸೋರಿಕೆ- ನದಿಯಲ್ಲಿ ನೀರಿದ್ದರೂ ತಪ್ಪದ ಹಾಹಾಕಾರ!

ಮುದ್ರಣ ಕಾಶಿಯಲ್ಲಿ ಕ್ಯಾಲೆಂಡರ್‌ ಮುದ್ರಣ ಭರಾಟೆ; ಕ್ಯಾಲೆಂಡರ್‌-ತೂಗು ಪಂಚಾಂಗಗಳಿಗೆ ಖ್ಯಾತಿ

ಮುದ್ರಣ ಕಾಶಿಯಲ್ಲಿ ಕ್ಯಾಲೆಂಡರ್‌ ಮುದ್ರಣ ಭರಾಟೆ; ಕ್ಯಾಲೆಂಡರ್‌-ತೂಗು ಪಂಚಾಂಗಗಳಿಗೆ ಖ್ಯಾತಿ

Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು

Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.