5ಕ್ಕೆ “ಮಕ್ಕಳ ಚಿತ್ರ ಕಲೋತ್ಸವ’ ಬಹುಮಾನ ವಿತರಣೆ
ಬಣ್ಣದ ಮನೆ ಸಾಂಸ್ಕೃತಿಕ ವೇದಿಕೆ ಗೌರವಾಧ್ಯಕ್ಷ-ಮೇಲ್ಮನೆ ಸದಸ್ಯ ಎಸ್.ವಿ. ಸಂಕನೂರ ಮಾಹಿತಿ
Team Udayavani, Nov 23, 2022, 3:36 PM IST
ಗದಗ: ಸ್ಥಳೀಯ ಬಣ್ಣದ ಮನೆ ಸಾಂಸ್ಕೃತಿಕ ವೇದಿಕೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿಯ ಧಾರವಾಡದ ಬಾಲವಿಕಾಸ ಅಕಾಡೆಮಿ ಮತ್ತು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಆಶ್ರಯದಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ಬಾರಿಗೆ ನಡೆಸಿದ ರಾಜ್ಯಮಟ್ಟದ “ಮಕ್ಕಳ ಚಿತ್ರ ಕಲೋತ್ಸವ’ (ಚಿಣ್ಣರ ಚಿತ್ರ ಚಿತ್ತಾರ)ದಲ್ಲಿ ವಿಜೇತ ಮಕ್ಕಳಿಗೆ ಬಹುಮಾನ ವಿತರಣೆ ಸಮಾರಂಭ ಡಿ. 5ರಂದು ನಗರದಲ್ಲಿ ನಡೆಯಲಿದೆ ಎಂದು ಸಮಿತಿ ಗೌರವ ಅಧ್ಯಕ್ಷರೂ ಆದ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಹೇಳಿದರು.
ಮಂಗಳವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಎಪಿಎಂಸಿ ಆವರಣದಲ್ಲಿರುವ ಸ್ವಾಮಿ ವಿವೇಕಾನಂದ ಸಭಾಂಗಣದಲ್ಲಿ ಸಮಾರಂಭ ನಡೆಯಲಿದೆ. ಸ್ವಾತಂತ್ರ್ಯ ಅಮೃತ ಮಹೋತ್ಸವದ ನಿಮಿತ್ತ ಕಳೆದ ಅ.14ರಂದು ರಾಜ್ಯದ 34 ಶೈಕ್ಷಣಿಕ ಜಿಲ್ಲೆಗಳಲ್ಲಿ ಆಯಾ ಶಾಲಾ ಮಟ್ಟ, ತಾಲೂಕು ಹಾಗೂ ಜಿಲ್ಲಾಮಟ್ಟದಲ್ಲಿ ಈ ಚಿತ್ರ ಸ್ಪರ್ಧೆ ನಡೆಸಲಾಗಿದ್ದು, ಇದೀಗ ಅವುಗಳ ಮೌಲ್ಯಮಾಪನ ನಡೆಯುತ್ತಿದೆ ಎಂದರು.
ಎಲ್.ಕೆ.ಜಿ.ಯಿಂದ 2ನೇ ತರಗತಿ, ಮೂರರಿಂದ 5ನೇ ತರಗತಿ, 6ರಿಂದ 8ನೇ ತರಗತಿ ಮತ್ತು 9ರಿಂದ 12ನೇ ತರಗತಿ ಹೀಗೆ ಒಟ್ಟು ನಾಲ್ಕು ವಿಭಾಗಗಳಲ್ಲಿ ಸ್ಪರ್ಧೆ ನಡೆಸಲಾಗಿದೆ. ಪ್ರತಿ ವಿಭಾಗದಲ್ಲೂ 75 ಬಹುಮಾನಗಳಂತೆ ಒಟ್ಟು 300 ಮಕ್ಕಳಿಗೆ ಪ್ರಶಸ್ತಿ ಸಿಗಲಿದೆ. ಪ್ರತಿ ಪ್ರಶಸ್ತಿಯು 3 ಸಾವಿರ ರೂ. ನಗದು, 3 ಸಾವಿರ ರೂ. ಮೌಲ್ಯದ ವಿಶಿಷ್ಟ ಸ್ಮರಣಿಕೆ ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿದೆ. ಅಷ್ಟೇ ಅಲ್ಲ, ಈ ಸ್ಪರ್ಧೆಯಲ್ಲಿ ಭಾಗವಹಿಸಿದ ಪ್ರತಿ ಮಗುವಿಗೂ ಭಾಗವಹಿಸಿದ ಪ್ರಮಾಣ ಪತ್ರ ಹಾಗೂ ಒಂದು ಸ್ಮರಣಿಕೆ ಸಿಗಲಿದೆ ಎಂದು ವಿವರಿಸಿದರು.
ಬಣ್ಣದ ಮನೆ ಸಾಂಸ್ಕೃತಿಕ ವೇದಿಕೆ ಸಂಸ್ಥಾಪಕ ಅಧ್ಯಕ್ಷ ವಿಜಯ ಕಿರೇಸೂರ ಮಾತನಾಡಿ, ಸ್ಪರ್ಧೆಯಲ್ಲಿ ರಾಜ್ಯಾದ್ಯಂತ 41,436 ಜನ ಮಕ್ಕಳು ಭಾಗವಹಿಸಿದ್ದರು.
ಸ್ಪರ್ಧೆ ವಿಜೇತ 300 ಜನ ಮಕ್ಕಳಿಗೆ ಖ್ಯಾತ ಕಲಾವಿದರಾದ ಮೈಕೆಲ್ ಎಂಜಿಲೋ, ರವಿವರ್ಮ, ಎಸ್.ಕೆ. ಚಟ್ಟಿ, ಟಿ.ಪಿ. ಅಕ್ಕಿ ಸೇರಿದಂತೆ ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಕಲಾವಿದರ ಹೆಸರಿನಲ್ಲಿ ಪ್ರಶಸ್ತಿ ನೀಡುತ್ತಿರುವುದು ಇದರ ಮತ್ತೂಂದು ವಿಶೇಷ ಎಂದರು.
ಡಿ. 5ರಂದು ನಡೆಯುವ ಸಮಾರಂಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಹಾಲಪ್ಪ ಆಚಾರ್, ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ, ಗದಗ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ, ಶಾಸಕ ಎಚ್.ಕೆ. ಪಾಟೀಲ ಸೇರಿ ಹಲವರು ಆಗಮಿಸಲಿದ್ದಾರೆ. ಅಂದು ಬೆಳಿಗ್ಗೆ 10ರಿಂದ ಸಂಜೆ 6ರ ವರೆಗೂ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದರು.
ಮಕ್ಕಳ ಕಲಿಕೆ ಆರಂಭವಾಗುವುದೇ ಚಿತ್ರಗಳ ಮೂಲಕ. ಮಕ್ಕಳಲ್ಲಿ ಚಿತ್ರಕಲೆ ಪ್ರೋತ್ಸಾಹಿಸುವ ಉದ್ದೇಶದಿಂದ ಬಣ್ಣದ ಮನೆ ಸಾಂಸ್ಕೃತಿಕ ವೇದಿಕೆಯ ಈ ಯತ್ನ ಇತರರಿಗೂ ಮಾದರಿ. -ಎಸ್.ವಿ. ಸಂಕನೂರ, ವಿಪ ಸದಸ್ಯರು
“ಮಕ್ಕಳ ಚಿತ್ರ ಕಲೋತ್ಸವ’ ಸ್ಪರ್ಧೆಯಲ್ಲಿ ವಿಜೇತ 300 ಮಕ್ಕಳ ಕಲಾಕೃತಿಗಳನ್ನು ಮಳಿಗೆಗಳಲ್ಲಿ ಪ್ರದರ್ಶನ ಮಾಡಲಾಗುತ್ತದೆ. ಅಷ್ಟೇ ಅಲ್ಲ, ಅವರ ಪರಿಚಯ ಕೂಡ ಅದರಲ್ಲಿ ಒಳಗೊಂಡಿರುತ್ತದೆ. –ವಿಜಯ ಕಿರೇಸೂರ, ಸಂಸ್ಥಾಪಕ ಅಧ್ಯಕ್ಷ, ಬಣ್ಣದ ಮನೆ ಸಾಂಸ್ಕೃತಿಕ ವೇದಿಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gajendragad: ಮನೆಯಲ್ಲೇ ಮುಖ್ಯ ಶಿಕ್ಷಕಿಯ ಹ*ತ್ಯೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.