ಸಿಐಟಿಯು ನೇತೃತ್ವದಲ್ಲಿ ಭಿತ್ತಿಪತ್ರ ಹಿಡಿದು ಶ್ರಮಜೀವಿಗಳ ಆಕ್ರೋಶ

ಸೂಕ್ತ ಪರಿಹಾರಕ್ಕೆ ಮನೆ ಮುಂದೆ ನಿಂತು ಪ್ರತಿಭಟನೆ

Team Udayavani, May 22, 2021, 10:54 PM IST

21gjd1a

ಗಜೇಂದ್ರಗಡ: ಉಚಿತ ಕೋವಿಡ್‌ ಲಸಿಕೆ ಪೂರೈಕೆ ಹಾಗೂ ಲಾಕ್‌ಡೌನ್‌ನಿಂದ ಸಂಕಷ್ಟಕ್ಕೀಡಾದ ಕುಟುಂಬಗಳಿಗೆ ಸೂಕ್ತ ಪರಿಹಾರ ಘೋಷಿಸುವಂತೆ ಒತ್ತಾಯಿಸಿ ಸಿಐಟಿಯು, ಕೆಪಿಆರ್‌ಎಸ್‌, ಕಟ್ಟಡ ಕಾರ್ಮಿಕರ ಸಂಘಟನೆಗಳ ನೇತೃತ್ವದಲ್ಲಿ ಕಾರ್ಮಿಕರು ಶುಕ್ರವಾರ ತಮ್ಮ ತಮ್ಮ ಮನೆ ಮುಂದೆ ನಿಂತು ಬೇಡಿಕೆಗಳ ಭಿತ್ತಿಪತ್ರ ಹಿಡಿದು ಪ್ರತಿಭಟನೆ ನಡೆಸಿದರು.

ನಂತರ ಸಹಿ ಸಂಗ್ರಹಿಸಿ ತಹಶೀಲ್ದಾರ್‌ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕಟ್ಟಡ ಕಾರ್ಮಿಕ ಸಂಘಟನೆ ಮುಖಂಡ ಪೀರು ರಾಠೊಡ ಹಾಗೂ ಸಿಪಿಎಂ ಮುಖಂಡ ಎಂ.ಎಸ್‌. ಹಡಪದ ಮಾತನಾಡಿ, ರಾಜ್ಯದಲ್ಲಿ ಕೃಷಿ ಕೂಲಿಕಾರರು ಸೇರಿದಂತೆ 3 ಕೋಟಿಗೂ ಅಧಿಕ ಅಸಂಘಟಿತ ಕಾರ್ಮಿಕರು ಕೆಲಸವಿದೆ ಸಮಸ್ಯೆಯ ಸುಳಿಯಲ್ಲಿ ಸಿಲುಕಿದ್ದಾರೆ. ಕಟ್ಟಡ ಕಾರ್ಮಿಕರು, ವಲಸೆ ಕಾರ್ಮಿಕರು, ಖಾಸಗಿ ವಾಹನ ಚಾಲಕರು, ಬೀದಿ ಬದಿ ವ್ಯಾಪಾರಿಗಳು, ಮನೆಗೆಲಸದವರು, ಹಮಾಲಿಗಳು, ಬಿಸಿಯೂಟ ನೌಕರರು, ದಿನಗೂಲಿಗಳು, ಗುತ್ತಿಗೆ-ಹೊರಗುತ್ತಿಗೆ ಕಾರ್ಮಿಕರು, ಖಾಸಗಿ ಶಿಕ್ಷಣ ಸಂಸ್ಥೆಗಳ ಶಿಕ್ಷಕರು ಮತ್ತು ಸಿಬ್ಬಂದಿ ಮುಂತಾದವರು ಆದಾಯ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಈ ಎಲ್ಲ ಕುಟುಂಬಗಳಿಗೆ ಪ್ರತಿ ತಿಂಗಳು 10 ಸಾವಿರ ರೂ.ನಂತೆ 3 ತಿಂಗಳು ನೇರ ಹಣ ವರ್ಗಾವಣೆ ಮಾಡಬೇಕೆಂದು ಆಗ್ರಹಿಸಿದರು. ಕಾರ್ಮಿಕ ಮುಖಂಡ ಮಾರುತಿ ಚಿಟಗಿ ಮಾತನಾಡಿ, ಕೋವಿಡ್‌ ಸೋಂಕಿತರನ್ನು ಪತ್ತೆ ಹಚ್ಚುವ ಕಾರ್ಯ ಹಾಗೂ ಪರೀಕ್ಷೆಯನ್ನು ಹೆಚ್ಚಿಸಬೇಕು. ಅಗತ್ಯ ಬೆಡ್‌, ಔಷ  ಧಗಳು, ಇಂಜೆಕ್ಷನ್‌, ಆಮ್ಲಜನಕ, ವೆಂಟಿಲೇಟರ್‌ಗಳನ್ನು ಸಮರೋಪಾದಿಯಲ್ಲಿ ಒದಗಿಸಬೇಕು. ಇದಕ್ಕೆ ಅಗತ್ಯವಾದ ಹಣ ಕ್ರೋಢೀಕರಿಸಲು, ತುರ್ತಲ್ಲದ ಬಂಡವಾಳ ವೆಚ್ಚದ ಯೋಜನೆಗಳನ್ನು ಮುಂದೂಡಬೇಕು. ಲಸಿಕೆಯನ್ನು ಸಾರ್ವತ್ರಿಕವಾಗಿ ಹಾಗೂ ಉಚಿತವಾಗಿ ನೀಡಬೇಕು. ಕೋವಿಡ್‌ ಆತಂಕದ ಸಂದರ್ಭಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿರುವ ಕಾಳ ಸಂತೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಮುಂಚೂಣಿಯಲ್ಲಿ ಕೆಲಸ ಮಾಡುತ್ತಿರುವ ಎಲ್ಲ ಕೋವಿಡ್‌ ಯೋಧರಿಗೂ ಕಡ್ಡಾಯ 30 ಲಕ್ಷ ರೂ. ವಿಮೆ ಖಾತ್ರಿಪಡಿಸಬೇಕೆಂದು ಒತ್ತಾಯಿಸಿದರು.

ರೈತ ಕಾರ್ಮಿಕ ಮುಖಂಡ ಬಾಲು ರಾಠೊಡ ಮಾತನಾಡಿ, ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೃಷಿ ಕೂಲಿಕಾರರಿಗೆ ಕನಿಷ್ಟ 200 ದಿನಗಳ ಉದ್ಯೋಗ ಹೆಚ್ಚಿಸಬೇಕು. ತಿಂಗಳಿಗೆ ಪ್ರತಿ ವ್ಯಕ್ತಿಗೆ 10 ಕೆಜಿ ಆಹಾರ ಧಾನ್ಯಗಳನ್ನು 6 ತಿಂಗಳ ಕಾಲ ಪಡಿತರ ವ್ಯವಸ್ಥೆ ಮೂಲಕ ಉಚಿತವಾಗಿ ನೀಡಬೇಕು. ಕೋವಿಡ್‌ ಪರಿಹಾರ ಸಾಮಗ್ರಿ ಖರೀದಿಯಲ್ಲಿ ವ್ಯಾಪಕ ಭ್ರಷ್ಟಚಾರ ನಡೆಯುತ್ತಿದ್ದು, ಈ ಬಗ್ಗೆ ಸೂಕ್ತ ತನಿಖೆ ಕೈಗೊಳ್ಳುವಂತೆ ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಕಟ್ಟಡ ಕಾರ್ಮಿಕರು, ಹಡಪದ ಸಮುದಾಯ, ನೇಕಾರರು, ಮಡಿವಾಳರು, ಖಾಸಗಿ ವಾಹನ ಚಾಲಕರು, ಎಲೆಕ್ಟ್ರಿಷಿಯನ್‌, ಬೀದಿ ಬದಿ ವ್ಯಾಪಾರಸ್ಥರು ತಮ್ಮ ತಮ್ಮ ಮನೆ ಮುಂದೆ ನಿಂತು ಬೇಡಿಕೆಗಳ ಭಿತ್ತಿಪತ್ರ ಹಿಡಿದು ಪ್ರತಿಭಟನೆ ನಡೆಸಿದರು.

ಟಾಪ್ ನ್ಯೂಸ್

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

om-prakash

Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

egg

Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadag-CM-Dcm

Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ

8

CM Siddaramaiah: ಗ್ಯಾರಂಟಿಗಳನ್ನು‌ ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮ‌‌ದು

7

Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ

24-

Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

7(1

Lalbagh: ಆಸ್ತಿ ತೆರಿಗೆ ಇಳಿಕೆಗೆ ಪಾಲಿಕೆ ಅವಳಿ ಪ್ರಸ್ತಾವನೆ

om-prakash

Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ

6

Gangolli-ಕುಂದಾಪುರ ಬಾರ್ಜ್‌ ಕನಸಿಗೆ ತಣ್ಣೀರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.