ಕಾಂಗ್ರೆಸ್‌ನಲ್ಲಿ ಅರ್ಧ ಡಜನ್ ಸಿಎಂ ಸ್ಥಾನ ಆಕಾಂಕ್ಷಿಗಳು: ಪಾಟೀಲ್
Team Udayavani, Jul 8, 2021, 9:01 PM IST
ಗದಗ: ಕಾಂಗ್ರೆಸ್ ಪಕ್ಷದಲ್ಲಿ ಅರ್ಧ ಡಜನ್‌ಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳಿದ್ದಾರೆ. ಯಾರು ಏನೇ ಹೇಳಿದರೂ ಚುನಾವಣೆ ಬಳಿಕ ಸೇರುವ ಶಾಸಕಾಂಗ ಪಕ್ಷದದಲ್ಲಿ ಮುಖ್ಯಮಂತ್ರಿ ತೀರ್ಮಾನವಾಗುತ್ತದೆ. ಮುಂಬರುವ ವಿಧಾನಸಭಾ ಚುನಾವಣೆಯನ್ನು ಸಾಮೂಹಿಕ ನಾಯಕತ್ವದಲ್ಲಿ ಎದುರಿಸಲಾಗುತ್ತದೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್. ಪಾಟೀಲ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ಸಮುದಾಯದವರು ತಮ್ಮ ನಾಯಕರು ಮುಖ್ಯಮಂತ್ರಿಯಾಗಬೇಕು ಎಂದು ಬಯಸುವುದು ಸಹಜ. ಉತ್ತರ ಕರ್ನಾಟಕದ ಪ್ರಬಲ ಲಿಂಗಾಯತ ಸಮುದಾಯದವರು, ದಲಿತರು, ಪರಿಶಿಷ್ಟ ಪಂಗಡದವರೂ ತಮ್ಮ ನಾಯಕನನ್ನು ಮುಂದಿನ ಮುಖ್ಯಮಂತ್ರಿಯನ್ನಾಗಿ ಘೋಷಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಅದು ಅವರ ಅಭಿಮಾನದ ಮಾತುಗಳು ಅಷ್ಟೇ. ಆದರೆ, ಮುಖ್ಯಮಂತ್ರಿಯನ್ನು ಹಾದಿ ಬೀದಿಯಲ್ಲಿ ನಿರ್ಣಯಿಸಲಾಗದು.
ಮುಖ್ಯಮಂತ್ರಿ ಆಯ್ಕೆ ಬಗ್ಗೆ ಯಾರೂ ಒತ್ತಾಯ ಮಾಡಬಾರದು ಎಂದು ಪಕ್ಷದ ಹೈಕಮಾಂಡ್ ಕೂಡಾ ಸೂಚನೆ ನೀಡಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಬಹುಮತ ಗಳಿಸಿದ ಬಳಿಕ ಶಾಸಕಾಂಗ ಪಕ್ಷದ ಸಭೆಯಲ್ಲಿ ಪಕ್ಷದ ಹೈಕಮಾಂಡ್ ಸೂಚನೆಯಂತೆ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲಾಗುತ್ತದೆ. ಈ ನಿಟ್ಟಿನಲ್ಲಿ ಪಕ್ಷ ಸಂಘಟನೆ ನಮ್ಮ ಮೊದಲ ಆದ್ಯತೆಯಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
MUST WATCH
ಹೊಸ ಸೇರ್ಪಡೆ
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.