ರಾಜ್ಯ ಸರಕಾರ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
Team Udayavani, Aug 11, 2019, 12:16 PM IST
ನರಗುಂದ: ಕೊಣ್ಣೂರಿಗೆ ಸಿಎಂ ಭೇಟಿ ವೇಳೆ ಸಂತ್ರಸ್ತರ ಮೇಲೆ ನಡೆದ ಲಘು ಲಾಠಿ ಪ್ರಹಾರ ಖಂಡಿಸಿ ಪ್ರತಿಭಟಿಸಲಾಯಿತು.
ನರಗುಂದ: ತಾಲೂಕಿನ ಕೊಣ್ಣೂರ ಗ್ರಾಮದ ಪ್ರವಾಹ ಪೀಡಿತ ಪ್ರದೇಶಕ್ಕೆ ಮುಖ್ಯಮಂತ್ರಿ ಭೇಟಿ ವೇಳೆ ಸಂತ್ರಸ್ತರ ಮೇಲೆ ಲಘು ಲಾಠಿ ಪ್ರಹಾರ ಮಾಡಿದ್ದು ಖಂಡನೀಯ ಎಂದು ಆರೋಪಿಸಿ ರಾಜ್ಯ ಸರ್ಕಾರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಶನಿವಾರ ನರಗುಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ ಯಾವಗಲ್ಲ ನೇತೃತ್ವದಲ್ಲಿ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಪಟ್ಟಣದ ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿ ಶಿವಾಜಿ ವೃತ್ತದಲ್ಲಿ ಧರಣಿ ಕುಳಿತು ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಪ್ರವೀಣ ಯಾವಗಲ್ಲ ಮಾತನಾಡಿ, ಪ್ರವಾಹ ಪೀಡಿತ ಪ್ರದೇಶಕ್ಕೆ ಆಗಮಿಸಿ ಸಂತ್ರಸ್ತರಿಗೆ ಯಾವುದೇ ಭರವಸೆ ನೀಡದೆ ಕಾಟಾಚಾರಕ್ಕೆ ಸಂತ್ರಸ್ತರ ಭೇಟಿ ಮಾಡಿದ್ದು ಖಂಡನೀಯ. ಸಂತ್ರಸ್ತರ ದುಃಖ ಆಲಿಸಲು ಮುಖ್ಯಮಂತ್ರಿಗಳಿಂದ ಆಗಲಿಲ್ಲ ಎಂಬುದನ್ನು ಖಂಡಿಸುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಪಕ್ಷದ ತಾಲೂಕು ಉಪಾಧ್ಯಕ್ಷ ವಿಠಲ ಶಿಂಧೆ, ಜಿಲ್ಲಾ ಪ್ರಧಾನಕಾರ್ಯದರ್ಶಿ ರಾಜು ಕಲಾಲ ಮಾತನಾಡಿದರು.
ತಾಲೂಕು ಪಂಚಾಯತ್ ಅಧ್ಯಕ್ಷ ಪ್ರಭುಲಿಂಗಪ್ಪ ಯಲಿಗಾರ, ಪುರಸಭೆ ಸದಸ್ಯರಾದ ಅಪ್ಪಣ್ಣ ನಾಯ್ಕರ, ರಾಜೇಶ್ವರಿ ವೀರನಗೌಡ್ರ, ಬಸವರಾಜ ಕೆಳಗೇರಿ ಮತ್ತು ಪಕ್ಷದ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುದ್ರಣ ಕಾಶಿಯಲ್ಲಿ ಕ್ಯಾಲೆಂಡರ್ ಮುದ್ರಣ ಭರಾಟೆ; ಕ್ಯಾಲೆಂಡರ್-ತೂಗು ಪಂಚಾಂಗಗಳಿಗೆ ಖ್ಯಾತಿ
Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು
Diesel theft; ಗದಗ: ಕೆ.ಎಸ್.ಆರ್.ಟಿ.ಸಿ. ಬಸ್ ಗಳ ಡೀಸೆಲ್ ಕಳ್ಳತನ
ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ
ಗದಗ: 4 ವರ್ಷವಾದರೂ ಮುಗಿಯದ ವಸತಿ ಶಾಲೆ ಕೆಲಸ! 20 ಕೋಟಿ ರೂ. ವೆಚ್ಚ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.