ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ಪ್ರತಿಭಟನೆ
Team Udayavani, Feb 21, 2022, 2:24 PM IST
ಗದಗ: ಕೆಂಪು ಕೋಟೆ ಮೇಲೆ ಕೇಸರಿ ಬಾವುಟ ಹಾರಿಸುತ್ತೇವೆ ಎಂದು ಹೇಳಿಕೆ ನೀಡಿರುವ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಧಿಕ್ಕಾರ ಕೂಗಿದರು.
ದೇಶದ ಸಾರ್ವಭೌಮತ್ವಕ್ಕೆ ವಿರುದ್ಧವಾಗಿ ಮಾತನಾಡಿದ್ದಾರೆ. ಸಚಿವರ ಹೇಳಿಕೆಯನ್ನು ಖಂಡಿಸಿ ಸದನದಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ನಾಯಕರ ಬಗ್ಗೆಯೂ ಈಶ್ವರಪ್ಪ ಅವಹೇಳನಕಾರಿಯಾಗಿ ಏಕ ವಚನದಲ್ಲಿ ಮಾತನಾಡಿದ್ದಾರೆ ಎಂದು ಪ್ರತಿಭಟನಾಕಾರರು ಘೋಷಣೆ ಕೂಗಿ, ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ:ಶಿವಮೊಗ್ಗ ಹರ್ಷ ಹತ್ಯೆ ಕೇಸ್: ಇಬ್ಬರು ಆರೋಪಿಗಳು ವಶಕ್ಕೆ; ಎಡಿಜಿಪಿ ಮುರುಗನ್
ಬೇಜವಾಬ್ದಾರಿ ಹೇಳಿಕೆ ನೀಡುತ್ತಿರುವ ಕೆ.ಎಸ್.ಈಶ್ವರಪ್ಪ ಅವರನ್ನು ತಕ್ಷಣ ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಪ್ರತಿಭಟನಾಕರರು ಆಗ್ರಹಿಸಿದರು.
ಬಳಿಕ ತಹಶಿಲ್ದಾರರ ಕಚೇರಿಗೆ ತೆರೆಳಿ, ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gajendragad: ಮನೆಯಲ್ಲೇ ಮುಖ್ಯ ಶಿಕ್ಷಕಿಯ ಹ*ತ್ಯೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.