ಹಾತಲಗೇರಿ- ಲಕ್ಕುಂಡಿ ಮಾರ್ಗದಲ್ಲಿ ಮತ್ತೂಂದು ಸೇತುವೆ ನಿರ್ಮಾಣ
Team Udayavani, Sep 2, 2019, 12:31 PM IST
ಗದಗ: ಹಾತಲಗೇರಿಯಲ್ಲಿ ಹಳ್ಳದ ಸೇತುವೆ ನಿರ್ಮಾಣ ಕಾಮಗಾರಿಗೆ ಸಚಿವ ಸಿ.ಸಿ. ಪಾಟೀಲ ಭೂಮಿಪೂಜೆ ನೆರವೇರಿಸಿದರು.
ಗದಗ: ತಾಲೂಕಿನ ಹಾತಲಗೇರಿ- ಲಕ್ಕುಂಡಿ ಮಾರ್ಗದಲ್ಲಿ ಈಗಾಗಲೇ ಒಂದು ಸೇತುವೆ ನಿರ್ಮಾಣ ಮಾಡಿದ್ದು, ಈಗ 70 ಲಕ್ಷ ರೂ. ವೆಚ್ಚದಲ್ಲಿ 2ನೇ ಸೇತುವೆ ನಿರ್ಮಾಣಕ್ಕೆ ಭೂಮಿ ಪೂಜೆ ಮಾಡುವ ಮೂಲಕ ಸರ್ವ ಋತು ಸಂಪರ್ಕ ಒದಗಿಸುವ ತಮ್ಮ ಆಶಯ ನೆರವೇರುತ್ತಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಖಾತೆ ಸಚಿವ ಸಿ.ಸಿ.ಪಾಟೀಲ ಹೇಳಿದರು.
ತಾಲೂಕಿನ ಹಾತಲಗೇರಿ ಸಮೀಪದ ಹಳ್ಳಕ್ಕೆ ಸೇತುವೆ ನಿರ್ಮಾಣ ಕಾಮಗಾರಿಗೆ ರವಿವಾರ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಗ್ರಾಮಗಳಿಗೆ ಹಾಗೂ ಸಮೀಪದ ನಗರಗಳಿಗೆ ಸಂಪರ್ಕ ರಸ್ತೆಗಳು ಸರಿಯಾಗಿದ್ದರೆ ರೈತರು ಹಾಗೂ ಗ್ರಾಮಸ್ಥರಿಗೆ ಎಲ್ಲ ರೀತಿಯಿಂದ ಅನುಕೂಲವಾಗಲಿದೆ. ಈ ಹಿನ್ನೆಲೆಯಲ್ಲಿ ಸೇತುವೆಗಳ ಕಾಮಗಾರಿ ಒಳ್ಳೆಯ ಗುಣಮಟ್ಟದ್ದಾಗಿರಬೇಕು. ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಗುತ್ತಿಗೆದಾದರರು ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಹಾತಲಗೇರಿ ಗ್ರಾಮಸ್ಥರ ಬಹು ವರ್ಷಗಳ ಬೇಡಿಕೆಯಾದ ಸೇತುವೆ ಕಾರ್ಯ ಪ್ರಾರಂಭವಾಗಿದೆ. ಗ್ರಾಮಸ್ಥರ ಇನ್ನೊಂದು ಬೇಡಿಕೆಯಾದ ರೈತರ ಹೊಲಗಳಿಗೆ ದಾರಿ ಕುರಿತ ಸಮಸ್ಯೆಗೆ ರೈತರು, ಊರಿನ ಹಿರಿಯರು ಹಾಗೂ ಸಂಬಂಧಿಸಿದ ಜಮೀನುಗಳು ಮಾಲೀಕರೊಂದಿಗೆ ಶೀಘ್ರದಲ್ಲಿಯೇ ಮಾತುಕತೆ ನಡೆಸಿ ಅದಕ್ಕೆ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.
ತಹಶೀಲ್ದಾರ್ ಶ್ರೀನಿವಾಸಮೂರ್ತಿ ಕುಲಕರ್ಣಿ, ತಾಪಂ ಇಒ ಡಾ|ಜನಗಿ, ಗ್ರಾಪಂ ಅಧ್ಯಕ್ಷ ಮೈಲಾರಪ್ಪ ಜಾಲಮ್ಮನವರ, ಕಂದಾಯ ಇಲಾಖೆ ಅಧಿಕಾರಿಗಳು, ಗ್ರಾಮಸ್ಥರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.