ಗಂಜಿ ಬಸವೇಶ್ವರ ವೃತ್ತದ ಸುತ್ತ ಕಂಟೈನ್ಮೆಂಟ್: ಜಿಲ್ಲಾಧಿಕಾರಿ
Team Udayavani, Apr 30, 2020, 5:50 PM IST
ಗದಗ: ಗದಗ-ಬೆಟಗೇರಿ ನಗರಸಭೆಯ 20ನೇ ವಾರ್ಡ್ ವ್ಯಾಪ್ತಿಯ ಗಂಜಿ ಬಸವೇಶ್ವರ ವೃತ್ತದ ಭಾಗಗಳ ಸುತ್ತಲಿನ 100 ಮೀ. ಪ್ರದೇಶವನ್ನು ಕೊವಿಡ್-19 ತಡೆಗಟ್ಟುಲು ನಿಯಂತ್ರಿತ (ಕಂಟೈನ್ಮೆಂಟ್) ಪ್ರದೇಶ ಮತ್ತು ಸುತ್ತಲಿನ 5 ಕಿ.ಮೀ ವ್ಯಾಪ್ತಿಯನ್ನು ಬಫರ್ ಝೋನ್ ಎಂದು ಘೋಷಿಸಲಾಗಿದೆ. ಗದಗ ತಹಶೀಲ್ದಾರ್ ಅವರನ್ನು ಇನ್ಸಿಂಡೆಂಟ್ ಕಮಾಂಡರ್ ಎಂದು ನೇಮಿಸಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಆದೇಶ ಹೊರಡಿಸಿದ್ದಾರೆ.
ನಿಯಂತ್ರಿತ ಪ್ರದೇಶದಿಂದ ಇತರೆ ಪ್ರದೇಶಗಳಿಗೆ ಅಥವಾ ಇತರೆ ಪ್ರದೇಶಗಳಿಂದ ನಿಯಂತ್ರಿತ ಪ್ರದೇಶಗಳಿಗೆ ಕರ್ತವ್ಯ ನಿರತ ಅಧಿಕಾರಿ, ಸಿಬ್ಬಂದಿ ಹೊರತುಪಡಿಸಿ ಜನರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಕಂಟೈನ್ಮೆಂಟ್ ಝೋನ್ ಸುತ್ತ ಘೋಷಣೆ ಮಾಡಲಾದ 5 ಕಿ.ಮೀ. ಬಫರ್ ಝೋನ್‌ನ ಮೊದಲ 1 ಕಿ.ಮೀ. ಸುತ್ತಳತೆಯ ವ್ಯಾಪ್ತಿಯಲ್ಲಿ ಮನೆ-ಮನೆಗೆ ಆರೋಗ್ಯ ಪರೀಕ್ಷೆ ಕಡ್ಡಾಯವಾಗಿ ನಡೆಸಬೇಕು. ದಿನಸಿ ಅಂಗಡಿಗಳು, ಹಾಲಿನ ಅಂಗಡಿಗಳು, ಮಾಂಸ, ಔಷಧ ಸೇರಿದಂತೆ ಎಲ್ಲ ಅಂಗಡಿಗಳನ್ನು ಕಡ್ಡಾಯವಾಗಿ ಬಂದ್ ಮಾಡಬೇ ಕು. ಅಗತ್ಯ ವಸ್ತುಗಳನ್ನು ಸಂಬಂಧಿತ ಇಲಾಖೆಗಳ ಮೂಲಕವೇ ಪಡೆಯಬೇಕು. ಖಾಸಗಿ ಮೂಲಗಳಿಗೆ ಅವಕಾಶವಿಲ್ಲ. ಈ ಪ್ರದೇಶಗಳ ಜನರು ಮನೆ ಬಿಟ್ಟು, ಹೊರಗೆ ತಿರುಗುವುದನ್ನು ನಿಷೇಧಿಸಲಾಗಿದೆ.
ಈ ಪ್ರದೇಶಗಳ ಎಲ್ಲ ಶಾಲಾ, ಕಾಲೇಜು, ಕಚೇರಿಗಳನ್ನು ಮುಚ್ಚಲು, ಜನಗುಂಪು ಸೇರವಿಕೆ, ವಾಹನ ಸಂಚಾರವನ್ನು (ಕರ್ತವ್ಯ ನಿರತ ವಾಹನ ಹೊರತುಪಡಿಸಿ) ನಿರ್ಬಂಧಿಸಿದೆ. ಕಂಟೈನ್ಮೆಂಟ್, ಬಫರ್ ಝೋನ್ ಮತ್ತು ಕ್ಲಸ್ಟರ್‌ಗಳಲ್ಲಿ ಕೊವಿಡ್-19 ವೈರಸ್ ನಿಯಂತ್ರಿಸುವ ಕುರಿತು ಕಾರ್ಯನಿರ್ವಹಿಸುವ ಅಧಿಕಾರಿಗಳಿಗೆ ಹಾಗೂ ಇಲಾಖೆಗಳಿಗೆ ಸರ್ಕಾರದ ಮಾರ್ಗಸೂಚಿಗಳನ್ವಯ ಕರ್ತವ್ಯ ನಿಗದಿಪಡಿಸಿ, ವಿಪತ್ತು ನಿರ್ವಹಣಾ ಕಾಯ್ದೆ- 2005ರ ಅನ್ವಯ ಸೂಕ್ತ ಕ್ರಮ ಜರುಗಿಸಲಾಗುವುದೆಂದು ಜಿಲ್ಲಾಧಿಕಾರಿ ಆದೇಶದಲ್ಲಿ ನಿರ್ದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಳಕಮಲ್ಲಯ್ಯ ಕ್ಷೇತ್ರ: ದಕ್ಷಿಣ ಕಾಶಿ ಪ್ರಸಿದ್ಧಿಯ ಸುಕ್ಷೇತ್ರ ಶ್ರೀಕಾಲ ಕಾಲೇಶ್ವರ…
ಆಕರ್ಷಕ ಪ್ರವಾಸಿ ತಾಣ, ಸುಂದರ ಊರು…ಸೂಡಿ ಪ್ರಾಚೀನ ಪರಂಪರೆಗೆ ಸಾಕ್ಷಿ…
Gadag; ಶಿರಹಟ್ಟಿ ಕ್ಷೇತ್ರದ ಶಾಸಕ ಚಂದ್ರು ಲಮಾಣಿ ಕಾರು ಚಾಲಕ ಆತ್ಮಹತ್ಯೆ
Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ
Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!