ತಾಲೂಕಾ ವೈದ್ಯಾಧಿಕಾರಿಗೆ ಕೋವಿಡ್ ಸೋಂಕಿಗೆ ಬಲಿ
Team Udayavani, Sep 3, 2020, 1:57 AM IST
ಮುಂಡರಗಿ (ಗದಗ): ಕೋವಿಡ್ 19 ಸೋಂಕಿಗೆ ಒಳಗಾಗಿದ್ದ ತಾಲೂಕು ವೈದ್ಯಾಧಿಕಾರಿ ಡಾ| ಬಸವರಾಜ ಕೆ. (45) ಅವರು ಚಿಕಿತ್ಸೆ ಫಲಿಸದೇ ಬುಧವಾರ ನಿಧನರಾಗಿದ್ದಾರೆ.
ಮೃತರು ಪತ್ನಿ, ಇಬ್ಬರು ಪುತ್ರರು, ತಂದೆ-ತಾಯಿ ಹಾಗೂ ಸಹೋದರರನ್ನು ಅಗಲಿದ್ದಾರೆ.
ಕಳೆದ ಕೆಲ ದಿನಗಳಿಂದ ಕೋವಿಡ್ 19 ಸೋಂಕಿನಿಂದ ನಿಂದ ಬಳಲುತ್ತಿದ್ದ ಡಾ| ಬಸವರಾಜ ಅವರು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಕಳೆದ ಮಾರ್ಚ್ ಮಾರ್ಚ್‌ನಿಂದ ತಾಲೂಕಿನಲ್ಲಿ ಕೋವಿಡ್ 19 ಸೋಂಕು ತಡೆಯುವಲ್ಲಿ ಅಪ್ಪಟ ಯೋಧರಂತೆ ಹಗಲಿರುಳು ಶ್ರಮಿಸಿದ್ದರು.
ತಾಲೂಕಿನಲ್ಲಿ ವೈದ್ಯಕೀಯ ಸಿಬ್ಬಂದಿಗಳ ಕೊರತೆ ಮಧ್ಯೆಯೂ ಸಾರ್ವಜನಿಕರಿಗೆ ಅತ್ಯತ್ತಮವಾಗಿ ವೈದ್ಯಕೀಯ ಸೇವೆ ಒದಗಿಸುತ್ತಿದ್ದರು.
ಈ ನಡುವೆ, ಆಗಸ್ಟ್ 2ರಂದು ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಡಾ| ಬಸವರಾಜ್ ಅವರಿಗೆ ಆ.9ರಂದು ಕೋವಿಡ್ ಸೋಂಕು ದೃಢ ಪಟ್ಟಿತ್ತು.
ಹುಬ್ಬಳ್ಳಿಯ ಕಿಮ್ಸ್‌ಗೆ ದಾಖಲಾಗಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.
ಆದರೆ, ಚಿಕಿತ್ಸೆ ಫಲಿಸದೇ, ಬುಧವಾರ ಸಂಜೆ ಮೃತಪಟ್ಟಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಡಾ|ಬಸವರಾಜ ಅವರು ಮೂಲತಃ ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಯಡ್ರಾಮಿ ಗ್ರಾಮದವರಾಗಿದ್ದು, ಕೆಲ ವರ್ಷಗಳಿಂದ ಮುಂಡರಗಿ ತಾಲೂಕು ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಳಕಮಲ್ಲಯ್ಯ ಕ್ಷೇತ್ರ: ದಕ್ಷಿಣ ಕಾಶಿ ಪ್ರಸಿದ್ಧಿಯ ಸುಕ್ಷೇತ್ರ ಶ್ರೀಕಾಲ ಕಾಲೇಶ್ವರ…
ಆಕರ್ಷಕ ಪ್ರವಾಸಿ ತಾಣ, ಸುಂದರ ಊರು…ಸೂಡಿ ಪ್ರಾಚೀನ ಪರಂಪರೆಗೆ ಸಾಕ್ಷಿ…
Gadag; ಶಿರಹಟ್ಟಿ ಕ್ಷೇತ್ರದ ಶಾಸಕ ಚಂದ್ರು ಲಮಾಣಿ ಕಾರು ಚಾಲಕ ಆತ್ಮಹತ್ಯೆ
Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ
Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.