ವೃದ್ಧೆಗೆ ಕೋವಿಡ್: 17 ಜನರಿಗೆ ಕ್ವಾರಂಟೈನ್
Team Udayavani, Jun 21, 2020, 6:26 AM IST
ಗಜೇಂದ್ರಗಡ: ಮದುವೆಗಾಗಿ ಹುಬ್ಬಳ್ಳಿಯಿಂದ ಪಟ್ಟಣಕ್ಕೆ ಆಗಮಿಸಿದ್ದ ಬಾಗಲಕೋಟೆ ಜಿಲ್ಲೆಯ ಗುಡೂರ ಮೂಲದ ವೃದ್ಧೆಗೆ ಕೋವಿಡ್ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದ ಸ್ಥಳೀಯ 17 ಜನರನ್ನು ಶನಿವಾರ ಕ್ವಾರಂಟೈನ್‌ಗೆ ಕಳುಹಿಸಲಾಯಿತು.
ಪಟ್ಟಣದ ಜನತಾ ಪ್ಲಾಟ್‌ನಲ್ಲಿ ಜೂ. 15ರಂದು ನಡೆದ ಮದುವೆಗೆ ವರನ ಸಂಬಂಧಿಯಾಗಿ ಹುಬ್ಬಳ್ಳಿಯಿಂದ ಆಗಮಿಸಿದ್ದ 50 ವರ್ಷದ ವೃದ್ಧೆಗೆ ಜೂ. 17ರಂದು ಮೈ, ಕೈ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಆ ಸಂದರ್ಭದಲ್ಲಿ ವೃದ್ಧೆಯ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಜೂ. 18ರಂದು ವೃದ್ಧೆಗೆ ಸೊಂಕು ಇರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಬಾಗಲಕೋಟೆಯ ಕೋವಿಡ್-19 ಆಸ್ಪತ್ರೆಗೆ ದಾಖಲಿಸಲಾಗಿದೆ.
ಪಟ್ಟಣದ ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಪುರಸಭೆ ಅಧಿಕಾರಿಗಳು ಜನತಾ ಪ್ಲಾಟ್‌ಗೆ ತೆರಳಿ ಪ್ರಾಥಮಿಕ ಸಂಪರ್ಕದಲ್ಲಿದ್ದ 17 ಜನರನ್ನು ಸಮೀಪದ ಕಿತ್ತೂರ ರಾಣಿ ಚನ್ನಮ್ಮ ವಸತಿ ನಿಲಯದಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಇನ್ನು ದ್ವಿತಿಯ ಸಂಪರ್ಕದಲ್ಲಿರುವ 80 ಜನರನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಪತ್ತೆ ಹಚ್ಚುವ ಕಾರ್ಯದಲ್ಲಿದ್ದಾರೆ. ಕೋವಿಡ್ ಸೋಂಕಿನ ಭೀತಿ ಕೋಟೆ ನಾಡಿನ ಜನತೆಯನ್ನು ತಲ್ಲಣಗೊಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ವಂಚನೆಗೆ ಯತ್ನ
Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು
MUST WATCH
ಹೊಸ ಸೇರ್ಪಡೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.