ಗದಗ ಜಿಲ್ಲೆಯಲ್ಲಿ ಕೋವಿಡ್‌ ನಿಯಮಕ್ಕೆ ಕ್ಯಾರೆ ಎನ್ನದ ಜನ

ಮಾಸ್ಕ್ ಬಳಕೆ, ಸಾಮಾಜಿಕ ಅಂತರ ಮಾಯ­! ಖಾಸಗಿ ವಾಹನಗಳಲ್ಲಿ ಹೆಚ್ಚು ಜನರ ಪ್ರಯಾಣ

Team Udayavani, Apr 20, 2021, 8:01 PM IST

dfgbdsfgs

ಗದಗ: ಎಲ್ಲೆಡೆ ಕೊರೊನಾ 2ನೇ ಅಲೆ ಅಬ್ಬರಿಸುತ್ತಿದ್ದು, ಜಿಲ್ಲೆಯಲ್ಲೂ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ದುಪ್ಪಟ್ಟಾಗುತ್ತಿದೆ. ಕೊರೊನಾ ತಡೆಗೆ ಮಾಸ್ಕ್ ಬಳಕೆ ಮತ್ತು ಸಾಮಾಜಿಕ ಅಂತರವೇ ಮದ್ದು ಎಂದು ಸರ್ಕಾರ ಎಷ್ಟೇ ಜಾಗೃತಿ ಮೂಡಿಸುತ್ತಿದ್ದರೂ ಜನರು ಮಾತ್ರ ತಮಗೆ ಸಂಬಂಧವೇ ಇಲ್ಲವೆಂಬಂತೆ ವರ್ತಿಸುತ್ತಿದ್ದು, ಅಪಾಯ ಆಹ್ವಾನಿಸುವಂತಿದೆ.

ಎಲ್ಲೆಡೆ ಕೋವಿಡ್‌ 2ನೇ ಅಲೆ ಆತಂಕ ಶುರುವಾಗಿದ್ದು, ದಿನೇ ದಿನೇ ಜಿಲ್ಲೆಯನ್ನೂ ಆವರಿಸುತ್ತಿದೆ. ಆದರೆ, ಬಹುತೇಕರು ಯಾವುದೇ ಮುನ್ನೆಚ್ಚರಿಕೆ ವಹಿಸದೇ ಮಾರುಕಟ್ಟೆ ಪ್ರದೇಶಗಳಲ್ಲಿ ಸೇರುತ್ತಿದ್ದಾರೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 222ಕ್ಕೆ ತಲುಪಿದ್ದರೂ, ರವಿವಾರ ಗದಗ-ಬೆಟಗೇರಿ ಅವಳಿ ನಗರ ಹಾಗೂ ಶಿರಹಟ್ಟಿ ಪಟ್ಟಣದ ಬಸ್‌ ನಿಲ್ದಾಣದಲ್ಲಿ ನಡೆಯುತ್ತಿರುವ ಮಾರುಕಟ್ಟೆಯಲ್ಲಿ ಹೆಚ್ಚಿನ ಜನಸಂದಣಿ ಕಂಡು ಬಂತು. ಈ ಮಧ್ಯೆ ಗದಗ-ಬೆಟಗೇರಿ ಅವಳಿ ನಗರ ಸೇರಿ ಜಿಲ್ಲೆಯ ನಗರ- ಪಟ್ಟಣಗಳಲ್ಲಿ ಜನ ಸುರಕ್ಷಿತ ಅಂತರ ಕಾಪಾಡಿಕೊಳ್ಳದೇ ಮಾಸ್ಕ್ ಧರಿಸುವುದನ್ನು ಮರೆತಿರುವುದು ಆತಂಕಕಾರಿ.

ಬಹುತೇಕ ಗದ್ದ, ಗಂಟಲಿಗೆ ಮಾಸ್ಕ್:

ಕೋವಿಡ್‌ ತಡೆಗೆ ಸರ್ಕಾರ ಮಾಸ್ಕ್ ಬಳಕೆ ಕಡ್ಡಾಯಗೊಳಿಸಿದೆ. ಬೆರಳೆಣಿಕೆಯಷ್ಟು ವರ್ತಕರು ಕಟ್ಟುನಿಟ್ಟಾಗಿ ಮಾಸ್ಕ್ ಧರಿಸುತ್ತಿದ್ದಾರೆ. ಬ್ಯಾಂಕ್‌ ರೋಡ್‌, ತರಕಾರಿ ಮಾರುಕಟ್ಟೆಯಲ್ಲಿ ಬಿಸಿಲಿನ ಝಳ ಹೆಚ್ಚಿದೆ ಎಂಬ ನೆಪವೊಡ್ಡುವ ಕೆಲವರು ಮಾಸ್ಕ್ಗಳನ್ನು ಗದ್ದ, ಕುತ್ತಿಗೆ ಭಾಗದಲ್ಲಿ ಎಳೆ ಬಿಡುತ್ತಿರುವುದು ಕಳವಳಕಾರಿ ಸಂಗತಿ. ಇನ್ನುಳಿದಂತೆ ಬಹುತೇಕರು ಮಾಸ್ಕ್ ಮರೆತು ಬಿಟ್ಟಿದ್ದಾರೆ ಎನ್ನುವಂತಾಗಿದೆ.

ಜಾನುವಾರು ಸಂತೆಯಲ್ಲಿಲ್ಲ ಜಾಗೃತಿ:

ದಿನಸಿ ಹಾಗೂ ತರಕಾರಿ ಮಾರುಕಟ್ಟೆ ಮಾತ್ರವಲ್ಲ ಜಾನುವಾರು ಸಂತೆಯಲ್ಲೂ ಕೊರೊನಾ ತಡೆ ಕುರಿತು ಜಾಗೃತಿ ಇಲ್ಲ. ನಗರದ ಎಪಿಎಂಸಿ ಪ್ರಾಂಗಣದಲ್ಲಿ ಶನಿವಾರ ನಡೆದ ಸಂತೆಯಲ್ಲೂ ಬಹುತೇಕ ರೈತರ ಮುಖದಲ್ಲೂ ಮಾಸ್ಕ್ ಕಂಡು ಬರಲಿಲ್ಲ. ಜಾನುವಾರುಗಳ ಹಲ್ಲು ನೋಡುವಾಗಲೂ ಯಾರೊಬ್ಬರೂ ಕೈಗವಸು ಧರಿಸದೇ, ಒಬ್ಬರಾದ ನಂತರ ಮತ್ತೂಬ್ಬರು ಪರೀಕ್ಷಿಸುತ್ತಿದ್ದರು. ಇದರಿಂದ ಜಾನುವಾರುಗಳಿಗೂ ಸೋಂಕು ಹರಡುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಸಾರಿಗೆ, ಖಾಸಗಿ ವಾಹನಗಳಲ್ಲಿಲ್ಲ ಅಂತರ:

ಸಾರಿಗೆ ನೌಕರರ ಮುಷ್ಕರ ಮುಂದುವರಿಯುತ್ತಿದ್ದು, ಪ್ರಯಾಣಿಕರು ಖಾಸಗಿ ಬಸ್‌ಗಳಲ್ಲಿ ಸಂಚರಿಸುವಂತಾಗಿದೆ. ಖಾಸಗಿ ವಾಹನದಲ್ಲಿ ನಿಗದಿಗಿಂತ ದುಪ್ಪಟ್ಟು ಪ್ರಯಾಣಿಕರನ್ನು ಹೇರಿಕೊಳ್ಳಲಾಗುತ್ತಿದೆ. ಇನ್ನು ಮುಷ್ಕರ ಹಿನ್ನೆಲೆಯಲ್ಲಿ ಬೆರಳೆಣಿಕೆಯಷ್ಟು ಸಾರಿಗೆ ಬಸ್‌ ಗಳು ಸಂಚರಿಸುತ್ತಿದ್ದು, ಜನರು ಸಾಮಾಜಿಕ ಅಂತರವಿಲ್ಲದೇ ಪ್ರಯಾಣಿಸುತ್ತಿದ್ದಾರೆ ಎಂಬುದು ಗಮನಾರ್ಹ.

ಎಚ್ಚೆತ್ತುಕೊಳ್ಳಬೇಕಿದೆ ಜಿಲ್ಲಾಡಳಿತ:

ಕಳೆದ ವರ್ಷ ಕೊರೊನಾ ಆರಂಭಿಕ ದಿನಗಳಲ್ಲಿ ಮಾಸ್ಕ್ ಇಲ್ಲದೇ, ಹೊರ ಬರುವವರಿಗೆ ನಗರಸಭೆ, ಪೊಲೀಸ್‌ ಇಲಾಖೆಯಿಂದ 100 ರೂ. ದಂಡ ವಿಧಿ ಸಿ, ಮಾಸ್ಕ್ ವಿತರಿಸುವ ಮೂಲಕ ಸಾರ್ವಜನಿಕರಿಗೆ ಬಿಸಿ ಮುಟ್ಟಿಸುತ್ತಿತ್ತು. ಅದರಂತೆ ಕೋವಿಡ್‌ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸುರಕ್ಷತಾ ಕ್ರಮ ವಹಿಸಲು ಮಾ.28ರಂದು ಜಿಲ್ಲಾ ಪೊಲೀಸ್‌ ಇಲಾಖೆ ನಗರದಲ್ಲಿ ಪಥ ಸಂಚಲನ ನಡೆಸಿ, ಜಾಗೃತಿ ಮೂಡಿಸಲಾಗಿದೆ. ಆದರೂ ಜನರು ಎಚ್ಚೆತ್ತುಕೊಳ್ಳುತ್ತಿಲ್ಲ. ಸದ್ಯ ಜಿಲ್ಲೆಯಲ್ಲಿ ರವಿವಾರ ಸೋಂಕಿತರ ಸಂಖ್ಯೆ 222ಕ್ಕೆ ತಲುಪಿದೆ. ಇನ್ನಾದರೂ, ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಳ್ಳಬೇಕಿದೆ.

ಟಾಪ್ ನ್ಯೂಸ್

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Consumer-Court

Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ

16-digital-arrest

Digital Arrest: ಡಿಜಿಟಲ್‌ ಅರೆಸ್ಟ್‌ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು

20-belagavi-2

Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-belagavi-2

Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ

1-edd

Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು

Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆದ ದರ್ಶನ್‌

Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆದ ದರ್ಶನ್‌

GV-

New Bill: ಇನ್ನು ಪಂಚಾಯತ್‌ರಾಜ್‌ ವಿಶ್ವವಿದ್ಯಾನಿಲಯಕ್ಕೆ ಮುಖ್ಯಮಂತ್ರಿ ಕುಲಾಧಿಪತಿ

BYV-yathnal

BYV vs Yatnal: ರಾಜ್ಯ ಬಿಜೆಪಿಯಲ್ಲಿ ಬಣ ಕದನ ಮತ್ತಷ್ಟು ಉಲ್ಬಣ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Consumer-Court

Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.