ಮಗುವಿಗೆ ಜನ್ಮ ನೀಡಿದ ಕೋವಿಡ್ ಸೋಂಕಿತೆ
Team Udayavani, Jul 5, 2020, 1:47 PM IST
ಗದಗ: ಕೋವಿಡ್-19 ಸೋಂಕಿತೆ ಗರ್ಭಿಣಿ ನಗರದ ಕೋವಿಡ್ ಆಸ್ಪತ್ರೆಯಲ್ಲಿ ಶನಿವಾರ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಮಧ್ಯೆ ಇಲ್ಲಿನ ಕೆ.ಸಿ. ರಾಣಿ ರಸ್ತೆಯಲ್ಲಿರುವ ದಂಡಪ್ಪ ಮಾನ್ವಿ ಹೆರಿಗೆ ಮತ್ತು ಮಗು ಆಸ್ಪತ್ರೆಗೆ ಭೇಟಿ ನೀಡಿದ್ದ ಮಹಿಳೆಯೊಬ್ಬರಿಗೆ ಕೋವಿಡ್ -19 ಸೋಂಕು ದೃಢ ಪಟ್ಟಿರುವ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಆಸ್ಪತ್ರೆಯನ್ನು ಮುಚ್ಚಲಾಗಿದೆ.
ಜು. 3ರಂದು ಸೋಂಕಿಗೆ ಒಳಗಾಗಿದ್ದ ಶಿರಹಟ್ಟಿ ತಾಲೂಕಿನ ಗೋಜನೂರು ಗ್ರಾಮದ 23 ವರ್ಷದ ಸೋಂಕಿತ ಗರ್ಭಿಣಿ(ಪಿ.18282) ಶನಿವಾರ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಮಗುವಿಗೆ ಉಸಿರಾಟದ ತೊಂದರೆ ಕಂಡುಬಂದ ಹಿನ್ನೆಲೆಯಲ್ಲಿ ಎನ್ ಐಸಿಯು ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಗುವಿನ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ. ಹರ್ತಿ ಗ್ರಾಮದ ಈರಣ್ಣ ದೇವಸ್ಥಾನ ಹತ್ತಿರದ ನಿವಾಸಿ 22 ವರ್ಷದ ಗರ್ಭಿಣಿ(ಪಿ.18287) ಜು. 2ರಂದು ನಗರದ ಮಾನ್ವಿ ಆಸ್ಪತ್ರೆಗೆ ಭೇಟಿ ನೀಡಿದ್ದರು. ಈ ವೇಳೆ ಕೆಮ್ಮಿನಿಂದ ಬಳಲುತ್ತಿದ್ದರಿಂದ ಗಂಟಲಿನ ಮಾದರಿ ಸಂಗ್ರಹಿಸಿ, ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಜು. 3ರಂದು ಬಂದ ವರದಿಯಲ್ಲಿ ಗರ್ಭಿಣಿಗೆ ಸೋಂಕು ಇರುವುದು ಖಚಿತವಾಗಿದೆ.
ಅವರನ್ನು ನಿಗದಿತ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಿದ್ದು, ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ. ಅವರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ 11 ಜನರನ್ನು ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದ 15 ಜನರನ್ನು ಪತ್ತೆ ಹಚ್ಚಲಾಗಿದೆ. ಆರೋಗ್ಯ ಇಲಾಖೆ ಮಾರ್ಗಸೂಚಿಗಳನ್ವಯ ಮಹಿಳಾ ಆಸ್ಪತ್ರೆಯನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದ್ದು, ಸೋಂಕು ನಿವಾರಕ ದ್ರಾವಣ ಸಿಂಪಡಣೆ ಸೇರಿದಂತೆ ಅಗತ್ಯದ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gajendragad: ಮನೆಯಲ್ಲೇ ಮುಖ್ಯ ಶಿಕ್ಷಕಿಯ ಹ*ತ್ಯೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.