ಗೋವಾದಿಂದ ಬಂದ ಮಹಿಳೆಗೆ ಸೋಂಕು
Team Udayavani, Jul 15, 2020, 10:06 AM IST
ಗಜೇಂದ್ರಗಡ: ಗೋವಾದಿಂದ ಪಟ್ಟಣಕ್ಕೆ ಆಗಮಿಸಿದ್ದ ಸ್ಥಳೀಯ 65 ವರ್ಷದ ಮಹಿಳೆಗೆ ಕೋವಿಡ್ -19 ದೃಢಪಟ್ಟಿದೆ. ಆದರೆ ಸೋಂಕಿತ ಮಹಿಳೆ ಅಫಜಲಪುರ ತಾಲೂಕಿನ ಗಾಣಗಾಪುರಕ್ಕೆ ತೆರಳಿದ್ದು ಎರಡೂ ಕಡೆ ಆತಂಕವನ್ನುಂಟು ಮಾಡಿದೆ.
ಸ್ಥಳೀಯ ಗೌಳಿ ಗಲ್ಲಿಯ 65 ವರ್ಷದ ಮಹಿಳೆ ಜು. 11ರಂದು ಗೋವಾದಿಂದ ಗಜೇಂದ್ರಗಡಕ್ಕೆ ಆಗಮಿಸಿದ್ದರು. ಇದನ್ನರಿತ ಪಟ್ಟಣದ ಆರೋಗ್ಯ ಇಲಾಖೆ ಅಧಿಕಾರಿಗಳು ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ದು ಗಂಟಲು ದ್ರವ ಪರೀಕ್ಷೆ ನಡೆಸಿ ವರದಿ ಬರುವವರೆಗೂ ಹೋಂ ಕ್ವಾರಂಟೈನ್‌ಗೆ ಸೂಚಿಸಿದ್ದರು. ಆದರೆ ಮಹಿಳೆ ತನ್ನ ಮೊಮ್ಮಗಳೊಂದಿಗೆ ಜು. 12ರಂದು ಅಫಜಲಪುರ ತಾಲೂಕಿನ ಗಾಣಗಾಪುರಕ್ಕೆ ಸಂಬಂಧಿ ಕರ ಊರಿಗೆ ತೆರಳಿದ್ದು ಜನರಲ್ಲಿ ಆತಂಕ ಹೆಚ್ಚಿಸಿದೆ.
ಮಂಗಳವಾರ ಮಹಿಳೆಗೆ ಕೋವಿಡ್ ಸೊಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಗೌಳಿ ಗಲ್ಲಿಗೆ ತೆರಳಿದಾಗ ಬಡಾವಣೆ ನಿವಾಸಿಗಳು ಮಹಿಳೆ ಊರಿಗೆ ಹೋಗಿರುವುದಾಗಿ ತಿಳಿಸಿದ್ದಾರೆ. ಹೀಗಾಗಿ ಆರೋಗ್ಯ ಇಲಾಖೆ ಅಧಿಕಾರಿಗಳು, ಪೊಲೀಸ್ ಇಲಾಖೆ ಮತ್ತು ತಹಶೀಲ್ದಾರ್ ಸಭೆ ನಡೆಸಿ ಸೋಂಕಿತೆ ಇರುವ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಾಡಳಿತ ಮತ್ತು ಅಲ್ಲಿನ ಪೊಲೀಸರಿಗೆ ಮಾಹಿತಿ ನೀಡಿ ಮಹಿಳೆಯನ್ನು ಕೋವಿಡ್ ಚಿಕಿತ್ಸಾ ಕೇಂದ್ರಕ್ಕೆ ಕರೆದೊಯ್ಯಲು ಸೂಚಿಸಿದ್ದಾರೆ.
ಪಟ್ಟಣದ ಗೌಳಿಗಲ್ಲಿನ ಸೋಂಕಿತೆ ನಿವಾಸ ಸೇರಿ ಸುತ್ತಲಿನ ಪ್ರದೇಶಕ್ಕೆ ಸ್ಯಾನಿಟೈಸರ್ ಸಿಂಪಡಿಸಿ ಬಡಾವಣೆ ಸೀಲ್‌ಡೌನ್ ಮಾಡಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ
Gadaga: ಪಂಚಮಸಾಲಿ ಮೀಸಲಾತಿ ಹೋರಾಟಗಾರರು ಪೊಲೀಸ್ ವಶಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.