ತಂಬಾಕು ಮುಕ್ತ ವಾತಾವರಣ ನಿರ್ಮಿಸಿ
Team Udayavani, Sep 25, 2022, 4:35 PM IST
ಗದಗ: ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಶಾಲೆಯಿಂದ ಹೊರಗುಳಿಯುವ ಹಾಗೂ ಗೈರು ಹಾಜರಾಗುವುದಕ್ಕೆ ತಂಬಾಕು ವ್ಯಸನ ಕಾರಣವಾಗಿದ್ದಲ್ಲಿ, ಆ ಕುರಿತು ಸೂಕ್ತ ಆಪ್ತ ಸಮಾಲೋಚನೆ ನಡೆಸುವುದರ ಮೂಲಕ ಕಾಳಜಿ ವಹಿಸಿ, ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ತಂಬಾಕು ನಿಷೇಧ ಕೋಶದ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಮೀಕ್ಷೆ ಪ್ರಕಾರ ವಿದ್ಯಾರ್ಥಿಗಳು ತಂಬಾಕು ಉತ್ಪನ್ನಗಳಿಗೆ ಪ್ರಚೋದಿತರಾಗಿ ಚಟಕ್ಕೆ ಬಲಿಯಾಗುತ್ತಿರುವುದು ಕಂಡುಬಂದ ಕಾರಣ ಕೋಟಾ³-2003 ಸೆಕ್ಷನ್ 6ಬಿ ಪ್ರಕಾರ ಶಾಲಾ-ಕಾಲೇಜು ಹಾಗೂ ಶಿಕ್ಷಣ ಸಂಸ್ಥೆಗಳ ಆವರಣದಿಂದ 100 ಗಜದವರೆಗೆ ತಂಬಾಕು ಮಾರಾಟ ಮಾಡುವ ಅಂಗಡಿಗಳ ವಿರುದ್ಧ ಕಠಿಣ ಕಾನೂನು ಕ್ರಮ ವಹಿಸಬೇಕೆಂದು ಹೇಳಿದರು.
ಶಾಲಾ-ಕಾಲೇಜು ಸುತ್ತಮುತ್ತ ಬಾರ್ ಆಂಡ್ ರೆಸ್ಟೋರೆಂಟ್‌ಗಳು, ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧದ ಕುರಿತು ಸಂಬಂಧಪಟ್ಟ ಇಲಾಖೆಯವರು ಕ್ರಮ ವಹಿಸಬೇಕು. ಪೌರಾಡಳಿತ ಇಲಾಖೆಯ ಸ್ಥಳೀಯ ಸಂಸ್ಥೆಗಳು ಎಲ್ಲಾ ಅಂಗಡಿ, ಮುಂಗಟ್ಟುಗಳ ಮುಂದೆ ಧೂಮಪಾನ ನಿಷೇಧ ಹಾಗೂ 18 ವರ್ಷದೊಳಗಿನ ತಂಬಾಕು ನಿಷೇಧ ಕುರಿತ ನಾಮಫಲಕ ಬಿತ್ತರಿಸುವಂತೆ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.
ಇತರೆ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಜಗಿದು ಉಗಿಯುವವರ ಹಾಗೂ ಧೂಮಪಾನ ಮಾಡುವವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು. ಹಾಗೂ ಸೆಕ್ಷನ್ 5 ತಂಬಾಕು ಉತ್ಪನ್ನಗಳ ಕುರಿತು ನೇರ ಪರೋಕ್ಷ ಜಾಹಿರಾತು ಹಾಗೂ ತಂಬಾಕು ಉತ್ಪನ್ನಗಳ ಪ್ಯಾಕ್ ಮೇಲೆ ಶೇ. 85ರಷ್ಟು ಆರೋಗ್ಯ ಎಚ್ಚರಿಕೆ ಚಿಹ್ನೆ ಇಲ್ಲದಿರುವ ಕುರಿತು ಎಫ್ ಐಆರ್ ದಾಖಲಿಸಿ ಕಾನೂನು ರೀತಿ ಕ್ರಮ ಕೈಗೊಳ್ಳಬೇಕೆಂದರು.
ಜಿಲ್ಲಾ ಆರೊಗ್ಯ ಮತು ಕುಟುಂಬ ಕಲ್ಯಾಣಾಧಿಕಾರಿ ಡಾ| ಜಗದೀಶ ನುಚ್ಚಿನ ಮಾತನಾಡಿ, ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಜಿಲ್ಲಾ ತಂಬಾಕು ನಿಯಂತ್ರಣ ಕೋಶದಿಂದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಒಟ್ಟು 39 ಕಾಲೇಜಿಗಳಲ್ಲಿ ತಂಬಾಕು ವ್ಯಸನದಿಂದಾಗುವ ದುಷ್ಪರಿಣಾಮ ಹಾಗೂ ಕೋಟಾ³ ಕಾಯ್ದೆ ಕುರಿತು ಶಿಕ್ಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಆರೋಗ್ಯ ಅರಿವು ಕಾರ್ಯಕ್ರಮ ಹಮ್ಮಿಕೊಂಡು, ಮುಖ್ಯಸ್ಥರ ಅಧ್ಯಕ್ಷತೆಯಲ್ಲಿ ತಂಬಾಕು ನಿಯಂತ್ರಣ ಸಮಿತಿ ರಚನೆ ಮಾಡಲಾಗಿದೆ ಎಂದರು.
ಕೋಟ್ಪಾ ದಾಳಿ ಹಮ್ಮಿಕೊಳ್ಳುವುದರ ಮೂಲಕ ವ್ಯಾಪಾರಸ್ಥರು, ತಂಬಾಕು ಬಳಕೆದಾರರು ಹಾಗೂ ಸಾರ್ವಜನಿಕರಲ್ಲಿ ಕೋಟ್ಪಾ ಕಾಯ್ದೆ ಕುರಿತು ಜಾಗೃತಿ ಮೂಡಿಸಲಾಗಿದೆ. ಕೋಟ್ಪಾ ಕಾಯ್ದೆ ಉಲ್ಲಂಘನೆ ವಿರುದ್ಧ ಕ್ರಮ ಕೈಗೊಂಡಿದ್ದು, ಈವರೆಗೆ 33 ಕೋಟ್ಪಾ ದಾಳಿ ನಡೆಸಿ 356 ಪ್ರಕರಣಗಳನ್ನು ದಾಖಲಿಸಿ, 45,600 ರೂ. ದಂಡ ಸಂಗ್ರಹಿಸಲಾಗಿದೆ. ಜಿಲ್ಲಾ ತಂಬಾಕು ವ್ಯಸನ ಮುಕ್ತ ಕೇಂದ್ರದ ಮೂಲಕ ಈ ವರ್ಷ ಒಟ್ಟು 883 ಮಂದಿಗೆ ಆಪ್ತ ಸಮಾಲೋಚನೆ ನಡೆಸಿ 221ಮಂದಿಗೆ ಚಿಕಿತ್ಸೆ ನೀಡಲಾಗಿದೆ. ಸಮುದಾಯ ಮಟ್ಟದಲ್ಲಿ ಗುಂಪು ಚರ್ಚೆ ಮೂಲಕ ಒಟ್ಟು 22 ಎಫ್‌ಜಿಡಿ ಕಾರ್ಯಕ್ರಮ ನಡೆಸಲಾಗಿದೆ ಎಂದು ತಿಳಿಸಿದರು.
ಜಿಮ್ಸ್ ವೈದ್ಯಕೀಯ ಅಧೀಕ್ಷಕ ಡಾ|ರಾಜಶೇಖರ ಮ್ಯಾಗೇರಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ| ಜಿಎಸ್. ಪಲ್ಲೇದ, ಡಿಎಚ್‌ಒ ಡಾ|ವೈ.ಕೆ. ಭಜಂತ್ರಿ, ಡಾ|ಎಸ್.ಎಸ್. ನೀಲಗುಂದ, ಡಾ|ಅರುಂಧತಿ ಕುಲಕರ್ಣಿ, ಡಾ|ಆರ್.ಸಿ. ಬಸರೀಗಿಡದ, ವಿಭಾಗೀಯ ಸಂಯೋಜಕ ಡಾ|ರಾಜೇಶ ಬೈಂದೂರ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಗೋಪಾಲ ಸುರಪುರ, ಅಧಿಕಾರಿಗಳು, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.