ಲಕ್ಷ್ಮೇಶ್ವರ ಮಾರುಕಟ್ಟೆ ಪರಿಶೀಲಿಸಿದ ಡಿಸಿ
Team Udayavani, Apr 16, 2020, 4:34 PM IST
ಲಕ್ಷ್ಮೇಶ್ವರ: ಕೋವಿಡ್ 19 ವೈರಸ್ ತಡೆಗಟ್ಟಲು ಲಾಕ್‌ಡೌನ್ ಘೋಷಣೆಯ ಅವ ಧಿಯಲ್ಲಿಸರ್ಕಾರದ ಆದೇಶ-ಸೂಚನೆಗಳನ್ನು ಜಿಲ್ಲೆಯ ಎಲ್ಲ ಇಲಾಖೆ ಅಧಿ ಕಾರಿಗಳು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಕೊರೊನಾ ವಿರುದ್ಧದ ಹೋರಾಟದಲ್ಲಿ ಸಾಕಷ್ಟು ಶ್ರಮಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಪ್ರಶಂಸೆ ವ್ಯಕ್ತಪಡಿಸಿದರು.
ಅವರು ಬುಧವಾರ ಪಟ್ಟಣಕ್ಕೆ ಭೇಟಿ ನೀಡಿದ್ದ ವೇಳೆ ಮಾತನಾಡಿ, ಲಾಕ್ ಡೌನ್ ಮೇ 3ರವರೆಗೆ ವಿಸ್ತರಣೆಯಾಗಿದೆ. ಅಲ್ಲಿಯವರೆಗೂ ಮಾರ್ಕೆಟ್, ಎಪಿಎಂಸಿ ಸೇರಿ ಜನ ಸೇರುವ ಸ್ಥಳಗಳಲ್ಲಿ ಸಾಮಾಜಿಕಅಂತರ ಕಾಯಲು ತಾಲೂಕಾಡಳಿತ,ಪೊಲೀಸ್ ಮತ್ತು ಪುರಸಭೆಯವರು ಇನ್ನಷ್ಟು ಶ್ರಮಿಸಬೇಕು ಮತ್ತು ಚೆಕ್‌ಪೋಸ್ಟ್‌ಗಳಲ್ಲಿ ಕಟ್ಟುನಿಟ್ಟಿನ ನಿಗಾವಹಿಸಬೇಕು. ಏ. 20ರ ನಂತರ ಸರ್ಕಾರದ ಹೊಸ ಮಾರ್ಗಸೂಚಿಗಳು ಅನ್ವಯವಾಗಲಿದ್ದು, ಈ ವೇಳೆಯಿಂದ ಜಿಲ್ಲೆಯಲ್ಲಿ ಒಂದಿಷ್ಟುವಿನಾಯಿತಿ ಲಭಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಈ ವೇಳೆ ಅವರುಕೈಗಾ-ಇಳಕಲ್ ರಾಜ್ಯ ಹೆದ್ದಾರಿಯಲ್ಲಿರುವ ಗೋನಾಳ ಹತ್ತಿರದ ಚೆಕ್‌ಪೋಸ್ಟ್‌ಗೆ ಭೇಟಿ ನೀಡಿ ಮಾಹಿತಿ ಪಡೆದರು. ಬಳಿಕ ಪುರಸಭೆ ಆವರಣದ ಮುಂದೆ ನಡೆಯುತ್ತಿರುವ ತರಕಾರಿ ಹರಾಜು ಪ್ರಕ್ರಿಯೆ ವೀಕ್ಷಿಸಿ ಸಾಮಾಜಿಕ ಅಂತರದೊಂದಿಗೆ ವ್ಯವಸ್ಥಿತವಾಗಿ ನಡೆದ ಹರಾಜು ಪ್ರಕ್ರಿಯೆ ಮೆಚ್ಚಿದರು. ಈ ವೇಳೆ ಶಿಗ್ಲಿಯ ರೈತರ ಮೋಹನಜನಿವಾರದ ಅವರು, ಗೋವಿನಜೋಳ ಕೇಳುವವರಿಲ್ಲದೇ ಹಾಳಾಗುತ್ತಿದೆ. ಗೋವಿನ ಜೋಳವನ್ನು ಬೆಂಬಲ ಬೆಲೆಯಡಿ ಖರೀದಿಸಲು ಜಿಲ್ಲಾಧಿಕಾರಿಗೆ ಮನವಿಮಾಡಿದರು. ಉಪ ತಹಶೀಲ್ದಾರ್ ಎಂ.ಜಿ. ದಾಸಪ್ಪನವರ, ಪುರಸಭೆ ಮುಖ್ಯಾಧಿಕಾರಿ ಆರ್.ಎಂ. ಪಾಟೀಲ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag; ಶಿರಹಟ್ಟಿ ಕ್ಷೇತ್ರದ ಶಾಸಕ ಚಂದ್ರು ಲಮಾಣಿ ಕಾರು ಚಾಲಕ ಆತ್ಮಹತ್ಯೆ
Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ
Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
MUST WATCH
ಹೊಸ ಸೇರ್ಪಡೆ
Chamarajpete: ಕೆಚ್ಚಲು ಕೊಯ್ದ ಪ್ರಕರಣ: ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ
ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್ ಚಿರತೆ ಸೆರೆ ಕಾರ್ಯಾಚರಣೆ ಸ್ಥಗಿತ
Hubballi: ವರೂರಿನ ನವಗ್ರಹ ತೀರ್ಥಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕಕ್ಕೆ ವಿಧ್ಯುಕ್ತ ಚಾಲನೆ
Chikkaballapura: “ಈಶ’ದಲ್ಲಿ 54 ಅಡಿ ಎತ್ತರದ ತ್ರಿಶೂಲ ಲೋಕಾರ್ಪಣೆ
Chamarajpete: ಕೆಚ್ಚಲು ಕೊಯ್ದ ಕೇಸ್; 3 ಲಕ್ಷ ರೂ.ಮೌಲ್ಯದ 3 ಹಸು ಕೊಡಿಸಿದ ಸಚಿವ ಜಮೀರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.