ಡಿಡಿಪಿಐ ಮನೆಮನೆ ಭೇಟಿ


Team Udayavani, Feb 11, 2020, 3:38 PM IST

gadaga-tdy-1

ಗಜೇಂದ್ರಗಡ: ಮಕ್ಕಳಿಗೆ ಪೊಷಕರು ಹೆಚ್ಚಿನ ಅಂಕಗಳಿಕೆಯ ಒತ್ತಡ ಹೇರದೇ ಒತ್ತಡ ರಹಿತ ವಾತಾವರಣ ನಿರ್ಮಿಸಲು ಮುಂದಾಗಬೇಕು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪಠ್ಯ ವಿಷಯ ಮನದಟ್ಟು ಮಾಡಿಕೊಂಡು ಅಭ್ಯಾಸದಲ್ಲಿ ತೊಡಗಿರಿ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಜಿಲ್ಲಾ ಉಪನಿರ್ದೇಶಕ ಎನ್‌.ಎಚ್‌. ನಾಗೂರ ಹೇಳಿದರು.

ಪಟ್ಟಣದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಮನೆ ಮನೆಗೆ ತೆರಳಿ ಪರೀಕ್ಷೆ ಫಲಿತಾಂಶ ಸುಧಾರಣೆಗಾಗಿ ಮಕ್ಕಳ ವಿದ್ಯಾಭ್ಯಾಸದ ಕ್ರಮ ಕುರಿತು ಪೋಷಕರೊಂದಿಗೆ ಚರ್ಚಿಸಿ ಅವರು ಮಾತನಾಡಿದರು. ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಸಮೀಪಿಸುತ್ತಿದ್ದು, ಪಾಲಕರು ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಕಡೆಗೆ ಹೆಚ್ಚು ಗಮನಹರಿಸಬೇಕು. ಮಕ್ಕಳನ್ನು ನಿಮ್ಮ ಸ್ನೇಹಿತರಂತೆ ಕಂಡು ಅವರಲ್ಲಿಆತ್ಮಸ್ಥೈರ್ಯ ತುಂಬಬೇಕು. ಅಂದಾಗ ಮಾತ್ರ ಫಲಿತಾಂಶ ಸುಧಾರಣೆ ಕಾಣಲು ಸಾಧ್ಯ ಎಂದರು.

ಮಕ್ಕಳನ್ನು ಟಿ.ವಿ ಮತ್ತು ಮೊಬೈಲ್‌ಗ‌ಳಿಂದ ದೂರವಿರಸಿ ಅಭ್ಯಾಸಕ್ಕೆ ಒತ್ತು ನೀಡುವಂತೆ ಪ್ರೇರೇಪಿಸಬೇಕು. ಶಿಕ್ಷಣದ ಯಶಸ್ಸು, ಯೋಚನೆ, ಯೋಜನೆ ಮತ್ತು ಅನುಷ್ಠಾನ ತ್ರಿಸೂತ್ರದ ಮೇಲೆನಿಂತಿದೆ. ಕೇವಲ ವಿದ್ಯಾಭ್ಯಾಸಕ್ಕಿಂತ ಪಾಲಕರ ನೀತಿಪಾಠಗಳು ಮಕ್ಕಳು ಗುರಿ ತಲುಪಲುಸಹಕಾರಿಯಾಗಲಿವೆ. ಪ್ರತಿಯೊಬ್ಬ ಪಾಲಕರು ತಮ್ಮ ಮಕ್ಕಳ ವಿದ್ಯಾಭ್ಯಾಸದ ಕಡೆ ಚಿತ್ತಹರಿಸಿ ಅವರನ್ನು ದೇಶದ ಆಸ್ತಿಯನ್ನಾಗಿಸುವ ಜವಾಬ್ದಾರಿ ಪಾಲಕ ಹಾಗೂ ಶಿಕ್ಷಕರ ಮೇಲಿದೆ ಎಂದರು.

ಜಿಲ್ಲೆಯಲ್ಲಿ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಸುಧಾರಣೆಗಾಗಿ ಓದಿನ ಮನೆ, ಮನೆ ಮನೆಗೆ ಭೇಟಿ ಕಾರ್ಯಾಗಾರದಂತಹ ಹಲವಾರು ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತಂದು ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ಪೋಷಕರು ಮಕ್ಕಳಿಗೆ ಯಾವುದೇ ಒತ್ತಡ ಹೇರದೇ ಅವರನ್ನು ಕೇವಲ ಅಭ್ಯಾಸಕ್ಕೆ ಪ್ರೇರೇಪಿಸಿದಾಗ ಮಾತ್ರ ಹೆಚ್ಚು ಅಂಕ ಪಡೆಯಲು ಸಾಧ್ಯ ಎಂದರು.

ಈ ಸಂದರ್ಭದಲ್ಲಿ ಪಟ್ಟಣದ ಸರಕಾರಿ ಬಾಲಕರ ಪ್ರೌಢಶಾಲೆ, ಸರಕಾರಿ ಬಾಲಕಿಯರ ಪ್ರೌಢಶಾಲೆ ಸೇರಿ ವಿವಿಧ ಪ್ರೌಢಶಾಲೆಗಳ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿ ವಿದ್ಯಾಭ್ಯಾಸದ ಕುರಿತು ಪರಿಶೀಲನೆ ನಡೆಸಿದರು. ಮುಖ್ಯ ಶಿಕ್ಷಕ ಆರ್‌.ಎಲ್‌. ಶೆಟ್ಟರ, ಎಂ.ಎನ್‌. ಕಡಗದ, ಎಸ್‌.ಸಿ. ಬದಾಮಿ, ಆರ್‌.ಎಸ್‌. ಶೃಂಗಾರಪುರ, ಎಚ್‌.ವಿ. ಮಲಜಿ, ಝಡ್‌.ಯು. ಗೊಡೇಕಾರ ಸೇರಿ ಇದ್ದರು.

ಟಾಪ್ ನ್ಯೂಸ್

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ

ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

BJP: ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

Supriya-Sule

Maha Election: ಡಿಕೆಶಿ ಸೇರಿ ಕಾಂಗ್ರೆಸ್‌ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

courts-s

Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ

ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

BJP: ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.