ಸಾಲಮನ್ನಾ ನ್ಯೂನತೆ ಸರಿಪಡಿಸದಿದ್ರೆ ಹೋರಾಟ
•ರಾಜ್ಯ-ಕೇಂದ್ರ ಸರ್ಕಾರಗಳು ಸಮನ್ವಯದಿಂದ ಮಹದಾಯಿ ಯೋಜನೆ ಅನುಷ್ಠಾನಗೊಳಿಸಲಿ
Team Udayavani, Jul 6, 2019, 10:44 AM IST
ನರಗುಂದ: ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರೈತ ಸೇನಾ ರಾಜ್ಯಾಧ್ಯಕ್ಷ ಶಂಕರಪ್ಪ ಅಂಬಲಿ ಮಾತನಾಡಿದರು.
ನರಗುಂದ: ಸಹಕಾರಿ ಮತ್ತು ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ರಾಜ್ಯ ಸರ್ಕಾರ ಘೋಷಿಸಿದ ರೈತರ ಸಾಲಮನ್ನಾ ಯೋಜನೆಯಲ್ಲಿ ಸ್ಪಷ್ಟತೆಯಿಲ್ಲ. ಸಹಕಾರಿ ಬ್ಯಾಂಕ್‌ನಲ್ಲಿ ಲಾಭ ಪಡೆದ ರೈತರಿಗೆ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ಅವಕಾಶವಿಲ್ಲ. ಇಂತಹ ಹಲವಾರು ನ್ಯೂನತೆಗಳನ್ನು ಸರಿಪಡಿಸದಿದ್ದರೆ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಅನಿವಾರ್ಯವಾಗುತ್ತದೆ ಎಂದು ಕರ್ನಾಟಕ ರೈತ ಸೇನಾ ರಾಜ್ಯಾಧ್ಯಕ್ಷ ಶಂಕರಪ್ಪ ಅಂಬಲಿ ಎಚ್ಚರಿಕೆ ನೀಡಿದರು.
ಪಟ್ಟಣದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, 2017,ಡಿ.31ರವರೆಗೆ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿನ ಸುಸ್ತಿ ಸಾಲ ಮತ್ತು 2018 ಜು.10ರವರೆಗಿನ ಸಹಕಾರಿ ಬ್ಯಾಂಕ್‌ನಲ್ಲಿನ ಸಾಲ ಮನ್ನಾ ಘೋಷಣೆ ಮಾಡಲಾಗಿದೆ. ಆದರೆ ಮೊದಲಿಗೆ ಸಹಕಾರಿ ಬ್ಯಾಂಕಿನಲ್ಲಿನ ಸಾಲಮನ್ನಾ ಮಾಡಿದ ಸರ್ಕಾರದ ಕ್ರಮದಿಂದ ಯೋಜನೆ ರೈತರಿಗೆ ಸಮರ್ಪಕವಾಗಿ ಅನುಷ್ಟಾನಗೊಂಡಿಲ್ಲ ಎಂದರು.
ರಾಷ್ಟ್ರೀಕೃತ ಬ್ಯಾಂಕಿನಲ್ಲಿನ 2 ಲಕ್ಷ ಹಾಗೂ ಸಹಕಾರಿ ಬ್ಯಾಂಕಿನಲ್ಲಿನ 1 ಲಕ್ಷ ರೂ.ಸಾಲ ಮನ್ನಾ ಘೋಷಿಸಲಾಗಿದೆ. ಆದರೆ ಒಂದು ಕಡೆಗೆ ಲಾಭ ಪಡೆದ ರೈತರಿಗೆ ಮತ್ತೂಂದು ಕಡೆ ವಂಚಿತವಾಗುವಂತಾಗಿದೆ. ಉ.ಕ.ರೈತರಿಗೆ ಸಾಲಮನ್ನಾ ಲಾಭ ಸಿಗದಂತೆ ಮಾಡಲಾಗಿದೆ. ಆದ್ದರಿಂದ ಎಲ್ಲ ರೈತರ ಸಂಪೂರ್ಣ 2 ಲಕ್ಷ ರೂ. ಸಾಲಮನ್ನಾ ಘೋಷಣೆಗೆ ರಾಜ್ಯ ಸರ್ಕಾರ ಮುಂದಾಗದಿದ್ದರೆ ಹೋರಾಟದ ಹಾದಿ ತುಳಿಯಬೇಕಾಗುತ್ತದೆ ಎಂದು ಹೇಳಿದರು.
ಅಧಿಸೂಚನೆ ನೀಡಲಿ: ನ್ಯಾಯಾಧೀಕರಣ ಮಹದಾಯಿ ನದಿ ನೀರು ಹಂಚಿಕೆ ಮಾಡಿ ವರ್ಷ ಗತಿಸುತ್ತ ಬಂದರೂ ನಮ್ಮ ಪಾಲಿನ ನೀರು ನಮಗೆ ದೊರಕುತ್ತಿಲ್ಲ. ಈ ಹಂತದಲ್ಲಿ ಕೇಂದ್ರ ಸರ್ಕಾರದ್ದು ಒಂದೆಡೆ ನಿರ್ಲಕ್ಷ್ಯವಾದರೆ, ರಾಜ್ಯ ಸರ್ಕಾರದ್ದು ಮತ್ತೂಂದೆಡೆ ನಿರ್ಲಕ್ಷ ್ಯವಾಗುತ್ತಿದೆ. ಮುಖ್ಯವಾಗಿ ಕೇಂದ್ರ ಸರ್ಕಾರ ಅಗತ್ಯ ಅಧಿಸೂಚನೆ ಹೊರಡಿಸಲು ರಾಜ್ಯ ಸರ್ಕಾರ ತೀರ್ಪಿನಂತೆ ಪರಿಷ್ಕೃತ ಯೋಜನಾ ವರದಿ(ಡಿಪಿಆರ್) ಇದುವರೆಗೂ ಸಲ್ಲಿಸದಿರುವುದು ಪ್ರಮುಖ ಅಡ್ಡಿಯಾಗಿದೆ ಎಂದು ಶಂಕರಪ್ಪ ಅಂಬಲಿ ಆರೋಪಿಸಿದರು.
ಒಂದೊಂದು ವಿಷಯದಲ್ಲಿ ಮೂರೂ ರಾಜ್ಯಗಳು ನ್ಯಾಯಾಧೀಕರಣ ತೀರ್ಪು ಪ್ರಶ್ನಿಸಿ ಸರ್ವೋಚ್ಛ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿವೆ. ಆದರೆ ಈ ಹಂತದಲ್ಲಿ ನಮ್ಮ ರಾಜ್ಯಕ್ಕೆ ಹಂಚಿಕೆಯಾದ ನೀರನ್ನು ಪಡೆಯಲು ರಾಜ್ಯ ಸರ್ಕಾರ ಕೂಡಲೇ ಕೇಂದ್ರ ಜಲಶಕ್ತಿ, ಪರಿಸರ, ಅರಣ್ಯ ಇಲಾಖೆ ಅನುಮತಿ ಪಡೆದರೆ ಆ ಕೂಡಲೇ ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಶನ್ ಹೊರಡಿಸಬೇಕು ಎಂದು ಒತ್ತಾಯಿಸಿದರು.
ಇದೇ ಜು.16ಕ್ಕೆ ಮಹದಾಯಿ ಹೋರಾಟ 4 ವರ್ಷಗಳನ್ನು ಪೂರೈಸುತ್ತ ಬಂದರೂ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರೈತರ ಮಾತು ಆಲಿಸುತ್ತಿಲ್ಲ. ಇನ್ನಾದರೂ ಉಭಯ ಸರ್ಕಾರಗಳು ಸಮನ್ವಯತೆಯಿಂದ ಯೋಜನೆ ಅನುಷ್ಠಾನಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದರು.
ರೈತಸಂಘ ಜಿಲ್ಲಾಧ್ಯಕ್ಷ ಬಸವರಾಜ ಸಾಬಳೆ, ಶಹರ ಅಧ್ಯಕ್ಷ ವಿಠಲ ಜಾಧವ, ಲೋಕನಾಥ ಹೆಬಸೂರ, ವೀರಬಸಪ್ಪ ಹೂಗಾರ, ಪರಶುರಾಮ ಜಂಬಗಿ, ವೀರಣ್ಣ ಸೊಪ್ಪಿನ, ಚನ್ನು ನಂದಿ, ಜಿನ್ನಪ್ಪ ಮುತ್ತಿನ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
ಗದಗ: ನೀರು ಸೋರಿಕೆ- ನದಿಯಲ್ಲಿ ನೀರಿದ್ದರೂ ತಪ್ಪದ ಹಾಹಾಕಾರ!
ಮುದ್ರಣ ಕಾಶಿಯಲ್ಲಿ ಕ್ಯಾಲೆಂಡರ್ ಮುದ್ರಣ ಭರಾಟೆ; ಕ್ಯಾಲೆಂಡರ್-ತೂಗು ಪಂಚಾಂಗಗಳಿಗೆ ಖ್ಯಾತಿ
Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.