ಗ್ರಾಮ-ನಗರ ಸ್ವಚ್ಛತೆಗೆ ಪಣ
•ಜಿಲ್ಲಾಮಟ್ಟದ ಸ್ವಚ್ಛಮೇವ ಜಯತೆ-ಜಲಾಮೃತ ಕಾರ್ಯಕ್ರಮಕ್ಕೆ ಸಚಿವ ಪರಮೇಶ್ವರ ನಾಯ್ಕ ಚಾಲನೆ
Team Udayavani, Jun 12, 2019, 10:19 AM IST
•ಜಿಲ್ಲಾಮಟ್ಟದ ಸ್ವಚ್ಛಮೇವ ಜಯತೆ-ಜಲಾಮೃತ ಕಾರ್ಯಕ್ರಮಕ್ಕೆ ಸಚಿವ ಪರಮೇಶ್ವರ ನಾಯ್ಕ ಚಾಲನೆ
ಗದಗ: ಆರೋಗ್ಯಕರ ಮತ್ತು ಕ್ರಿಯಾಶೀಲತೆಗಾಗಿ ಸ್ವಚ್ಛಮೇವ ಜಯತೆ ಹಾಗೂ ಜಲಾಮೃತ ಕಾರ್ಯಗಳು ಪ್ರತಿಯೊಬ್ಬರ ಜೀವನದ ಮಂತ್ರವಾಗಬೇಕು ಎಂದು ರಾಜ್ಯ ಕೌಶಲಾಭಿವೃದ್ಧಿ, ಮುಜರಾಯಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ ಹೇಳಿದರು.
ತಾಲೂಕಿನ ಬಿಂಕದಕಟ್ಟಿ ಗ್ರಾಮದ ಹೊರವಲಯದಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ಸ್ವಚ್ಛಮೇವ ಜಯತೆ ಹಾಗೂ ಜಲಾಮೃತ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಸರ್ಕಾರ ಸಿಸಿ ರಸ್ತೆ, ಒಳಚರಂಡಿ, ಕುಡಿಯುವ ನೀರು, ಕೃಷಿ ಕಾರ್ಮಿಕರಿಗೆ ಉದ್ಯೋಗ ಹೀಗೆ ಎಲ್ಲ ಸೌಲಭ್ಯಗಳನ್ನೂ ನೀಡುತ್ತಿದೆ. ಅದನ್ನು ಬಳಸುವವರು ಎಲ್ಲವೂ ಗ್ರಾ.ಪಂ., ನಗರಸಭೆ ಅಥವಾ ಸರ್ಕಾರವೇ ಮಾಡಬೇಕು ಎಂಬ ಮನೋಭಾವ ಬದಿಗಿಟ್ಟು ಸ್ವಚ್ಛತೆಗೆ, ನೀರಿನ ಸದ್ಭಳಕೆಗೆ ಗಮನ ಹರಿಸಬೇಕು. ಅಂದಾಗ ಮಾತ್ರ ಇಡೀ ಓಣಿ, ಗ್ರಾಮ, ನಗರ ಪ್ರದೇಶಗಳನ್ನು ಸ್ವಚ್ಛ ಸುಂದರವನ್ನಾಗಿಸಲು ಸಾಧ್ಯ. ಇಂತಹ ಕಾರ್ಯಗಳಲ್ಲಿ ಜನರು ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಶಾಸಕ ಎಚ್.ಕೆ. ಪಾಟೀಲ ಮಾತನಾಡಿ, ಜಲ ಸಂವರ್ಧನೆಗಾಗಿ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ರಿಜ್ ವ್ಯಾಲಿ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ರೈತರಿಗೆ ಸಾಕಷ್ಟು ಪ್ರಮಾಣದಲ್ಲಿ ಅನುಕೂಲವಾಗಿದೆ. ರಾಜ್ಯ ಸರಕಾರವು ಗ್ರಾಮೀಣ ಜನರ ಜೀವನಮಟ್ಟ ಸುಧಾರಣೆಗಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದು, ಈ ಯೋಜನೆಗಳ ಯಶಸ್ಸಿಗೆ ಸಾರ್ವಜನಿಕರ ಸಹಭಾಗಿತ್ವ ಪ್ರಮುಖವಾಗಿದೆ. ಮುಂದಿನ ದಿನಮಾನಗಳಲ್ಲಿ ಈ ಭಾಗದಲ್ಲಿ ಹನಿ ನೀರಾವರಿ ಯೋಜನೆ ಜಾರಿಗೆ ಬರಲಿದ್ದು, ಈ ಭಾಗದ ರೈತರು ಸಂಬಂಧಿಸಿದ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಯೋಜನೆಗೆ ತಕ್ಕಂತೆ ತಮ್ಮ ಹೊಲಗಳನ್ನು ಹದ ಮಾಡಿಕೊಳ್ಳಬೇಕು ಎಂದು ಪಾಟೀಲ ಸಲಹೆ ನೀಡಿದರು.
ಜಿ.ಪಂ. ಅಧ್ಯಕ್ಷ ಎಸ್.ಪಿ. ಬಳಿಗಾರ, ಮಾಜಿ ಶಾಸಕ ನಂಜಯ್ಯನಮಠ ಮಾತನಾಡಿದರು.
ಜಿ.ಪಂ. ಸಿಇಒ ಮಂಜುನಾಥ ಚವ್ಹಾಣ ಪ್ರಾಸ್ತಾವಿಕವಾಗಿ ಮಾತನಾಡಿ, ಕಳೆದ ಎರಡು ದಶಕಗಳಲ್ಲಿ ರಾಜ್ಯ 14 ವರ್ಷ ಬರಗಾಲ ಎದುರಿಸಿದೆ. ಕಳೆದ 5 ವರ್ಷಗಳಲ್ಲಿ ಗದಗ ಜಿಲ್ಲಾ ಸೇರಿದಂತೆ 4 ವರ್ಷ ಬರಗಾಲವಿದ್ದು, ರೈತರ ಗ್ರಾಮೀಣ ವರ್ಗದ ಜನರ ಜೀವನ ಸಂಕಷ್ಟಕೆ ಸಿಲುಕಿದೆ. ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆ 2019ನ್ನು ಜಲಾಮೃತ ವರ್ಷವೆಂದು ಘೋಷಿಸಿದ್ದು, ನೀರು ನೆಲಗಳ ಸಂವರ್ಧನೆ, ರಕ್ಷಣೆ ಅವುಗಳ ಸದ್ಭಳಕೆಗೆ ಜನಜಾಗೃತಿಗೆ ಮುಂದಾಗಿದೆ ಎಂದರು.
ಈ ಸಂದರ್ಭದಲ್ಲಿ ಸ್ವಚ್ಛಮೇವ ಜಯತೆ ಹಾಗೂ ಜಲಾಮೃತ ಕುರಿತಂತೆ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.
ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಜಿ.ಪಂ. ಉಪಾಧ್ಯಕ್ಷೆ ಶಕುಂತಲಾ ಮೂಲಿಮನಿ, ಜಿ.ಪಂ. ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ಹನುಮಂತಪ್ಪ ಪೂಜಾರ, ಸದಸ್ಯರಾದ ವಾಸಣ್ಣ ಕುರಡಗಿ, ಸಿದ್ಧು ಪಾಟೀಲ, ತಾ.ಪಂ. ಅಧ್ಯಕ್ಷ ಮೋಹನ ದುರಗಣ್ಣವರ, ಉಪಾಧ್ಯಕ್ಷೆ ಸುಜಾತಾ ಖಂಡು, ಬಿಂಕದಕಟ್ಟಿ ಗ್ರಾ.ಪಂ. ಅಧ್ಯಕ್ಷ ವಿ.ಡಿ. ರಂಗಪ್ಪನವರ, ಉಪಾಧ್ಯಕ್ಷೆ ಜಯಶ್ರೀ ಹುಲ್ಲೋಜಿ, ಪ್ರಮುಖರಾದ ರವಿ ಮೂಲಿಮನಿ, ಡಾ| ಮೇಟಿ ಡಬಾಲಿ ಇದ್ದರು.
ಕಾರ್ಯಕ್ರಮದ ಅಂಗವಾಗಿ ಆರೋಗ್ಯ ಇಲಾಖೆ, ಕೃಷಿ ಕಾರ್ಮಿಕರಿಗೆ ಏರ್ಪಡಿಸಿದ್ದ ಆರೋಗ್ಯ ತಪಾಸಣೆ ಶಿಬಿರ, ಕೃಷಿ, ಜಲಾನಯನ, ಪಶುಪಾಲನೆ , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಮಾಹಿತಿ ಕೇಂದ್ರಗಳನ್ನು ಸಚಿವರು ವೀಕ್ಷಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Padubidri: ಅಪರಿಚಿತ ವಾಹನ ಢಿಕ್ಕಿ; ಪಾದಚಾರಿಗೆ ತೀವ್ರ ಗಾಯ
Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ
Padubidri: ಕೆಎಸ್‌ಆರ್‌ಟಿಸಿ ಬಸ್ಸು ಢಿಕ್ಕಿ; ಪಾದಚಾರಿ ಸಾವು
Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು
Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.