ಮುಂಗಾರು ಹಂಗಾಮಿನ ಭತ್ತಕ್ಕೆ ಬೆಂಬೆಲೆ ಘೋಷಣೆ
ಎಪಿಎಂಸಿ ಮತ್ತು ಕೃಷಿ ಇಲಾಖೆಯಲ್ಲಿ ಹೆಸರು ನೋಂದಾಯಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ.
Team Udayavani, Nov 13, 2021, 6:19 PM IST
ಗಂಗಾವತಿ: ಮುಂಗಾರು ಹಂಗಾಮಿನ ಭತ್ತದ ಬೆಳೆಗೆ ರಾಜ್ಯ ಸರ್ಕಾರ ಬೆಂಬಲ ಬೆಲೆ ಘೋಷಣೆ ಮಾಡಿದೆ. ರೈತರು ಕೂಡಲೇ ಭತ್ತ ಖರೀದಿ ಕೇಂದ್ರಗಳಲ್ಲಿ ಮತ್ತು ಕೃಷಿ ಇಲಾಖೆಯಲ್ಲಿ ತಮ್ಮ ಹೆಸರನ್ನು ಭೂಮಿಯ ದಾಖಲಾತಿ ನೀಡಿ ನೋಂದಾಯಿಸಿಕೊಳ್ಳುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ವಿ. ವೆಂಕಟೇಶ ಸಂಬಂಧಪಟ್ಟ ಕೃಷಿ ಇಲಾಖೆ ಮತ್ತು ಎಪಿಎಂಸಿಗಳಿಗೆ ಸುತ್ತೋಲೆ ಹೊರಡಿಸಿದ್ದಾರೆ.
ಪ್ರಸ್ತುತ ಹಂಗಾಮಿನಲ್ಲಿ ರಾಜ್ಯದಲ್ಲಿ 3.35 ಲಕ್ಷ ಮೆಟ್ರಿಕ್ ಟನ್ ಭತ್ತ ಖರೀದಿ ಮಾಡಲು ಸರ್ಕಾರ ಯೋಜನೆ ರೂಪಿಸಿದೆ. ಇದೀಗ ತುಂಗಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ ಭತ್ತ ಕಟಾವು ಕಾರ್ಯ ಆರಂಭವಾಗಿದ್ದು, ಮುಂಗಡವಾಗಿ ಸರ್ಕಾರ ಭತ್ತಕ್ಕೆ ಬೆಂಬಲ ಬೆಲೆ ಪ್ರೋತ್ಸಾಹಧನವನ್ನು ಘೋಷಣೆ ಮಾಡಿ ರೈತರಿಗೆ ಸಂಬಂಧಪಟ್ಟ ಭತ್ತ ಖರೀದಿ ಕೇಂದ್ರ, ಎಪಿಎಂಸಿ ಮತ್ತು ಕೃಷಿ ಇಲಾಖೆಯಲ್ಲಿ ಹೆಸರು ನೋಂದಾಯಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ.
ಭತ್ತಕ್ಕೆ ಮುಂಚಿತವಾಗಿ ವೈಜ್ಞಾನಿಕ ಬೆಲೆ ಘೋಷಣೆ ಮಾಡಿ ಭತ್ತ ಕಟಾವಿಗೂ ಮುಂಚೆ ಖರೀದಿ ಕೇಂದ್ರಗಳನ್ನು ಆರಂಭ ಮಾಡುವಂತೆ ರಾಜ್ಯದ ರೈತರು ಸರ್ಕಾರವನ್ನು ಕಳೆದ ಹತ್ತು ವರ್ಷಗಳಿಂದ ಒತ್ತಾಯ ಮಾಡುತ್ತಿದ್ದರು. ಇದೀಗ ಸರ್ಕಾರ ಭತ್ತ ಕಟಾವಿಗೂ ಮುಂಚೆ ಸಾಮಾನ್ಯ ಭತ್ತ 100 ಕೆ.ಜಿ. ಭರ್ತಿಗೆ 1940 ರೂ. ಗಳನ್ನು ಮತ್ತು ಭತ್ತ ಎ ಗ್ರೇಡ್‌ಗೆ 1960 ರೂ.ಗಳ ಬೆಂಬಲ ಬೆಲೆ ಘೋಷಣೆ ಮಾಡಿದೆ.
ಈಗಾಗಲೇ ಸರ್ಕಾರ ಭರವಸೆ ನೀಡಿದಂತೆ ಮುಂಗಾರು ಭತ್ತ ಕಟಾವಿಗೂ ಮುಂಚೆ ಬೆಂಬಲ ಬೆಲೆ ಘೋಷಣೆ ಮಾಡಿ ರೈತರು ತಮ್ಮ ಭತ್ತವನ್ನು ಖರೀದಿ ಕೇಂದ್ರದಲ್ಲಿ ಮಾರಾಟ ಮಾಡಲು ಸರ್ಕಾರ ಅನುಕೂಲ ಮಾಡಿಕೊಟ್ಟಿದೆ. ಹಲವು ವರ್ಷಗಳ ಬೇಡಿಕೆಯನ್ನು ಸರಕಾರ ಈಡೇರಿಸಿದ್ದು, ಈ ಬಾರಿ ರೈತರು ಭತ್ತ ಖರೀದಿ ಕೇಂದ್ರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭತ್ತವನ್ನು ಮಾರಾಟ ಮಾಡುವಂತೆ ಶಾಸಕ ಪರಣ್ಣ ಮನವಳ್ಳಿ ಉದಯವಾಣಿಯೊಂದಿಗೆ ಮಾತನಾಡಿ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
MUST WATCH
ಹೊಸ ಸೇರ್ಪಡೆ
BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.