ಎಚ್. ಆಂಜನೇಯ, ಎಂ.ಡಿ. ಲಕ್ಷ್ಮೀನಾರಾಯಣ ಅವರಿಗೆ ಎಂಎಲ್ಸಿ ಚುನಾವಣೆಗೆ ಅವಕಾಶ ನೀಡುವಂತೆ ಆಗ್ರಹ
Team Udayavani, May 28, 2024, 1:18 PM IST
ಗದಗ: ಮಾಜಿ ಸಚಿವ ಎ. ಆಂಜನೇಯ ಅವರಿಗೆ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಅವಕಾಶ ನೀಡಬೇಕು ಎಂದು ಮಾದಿಗ ಮಹಾಸಭಾದ ಪ್ರಕಾಶ ಹೊಸಳ್ಳಿ ಕಾಂಗ್ರೆಸ್ ಪಕ್ಷವನ್ನು ಆಗ್ರಹಿಸಿದರು.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾದಿಗ ಸಮಾಜ ಬಹುದೊಡ್ಡ ಸಂಖ್ಯೆಯಲ್ಲಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದರು.
ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಎಚ್. ಆಂಜನೇಯ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ. ಜೊತೆಗೆ ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿದ್ದ ಸಂದರ್ಭದಲ್ಲಿ ಪರಿಶಿಷ್ಟ ಜಾತಿಗೆ ಹಾಗೂ ರಾಜ್ಯಕ್ಕೆ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ವಿಧಾನ ಪರಿಷತ್ ಗೆ ಟಿಕೆಟ್ ನೀಡಿ ಗೆಲ್ಲಿಸಿಕೊಂಡು ಬರಬೇಕು ಎಂದು ಒತ್ತಾಯಿಸಿದರು.
ಮುಖಂಡರಾದ ರಮೇಶ ಕಡೆಮನಿ, ಮೈಲಾರಪ್ಪ ಚಳ್ಳಮರದ ಮಾತನಾಡಿ, ಸಮಾಜದ ಪ್ರಭಾವಿ ಮುಖಂಡರಾಗಿರುವ ಎಚ್. ಆಂಜನೇಯ ಅವರಿಗೆ ವಿಧಾನ ಪರಿಷತ್ತಿಗೆ ಟಿಕೆಟ್ ನೀಡಲೇಬೇಕು. ಟಿಕೆಟ್ ನೀಡಿ ವಿಧಾನ ಪರಿಷತ್ತಿಗೆ ಆಯ್ಕೆಯಾದರೆ, ಕಾಂಗ್ರೆಸ್ ಗೆ ಬಲ ತಂದುಕೊಡುತ್ತಾರೆ. ಮುಂಬರುವ ಜಿಪಂ, ತಾಪಂ ಚುನಾವಣೆಗೆ ಶಕ್ತಿ ತುಂಬುತ್ತಾರೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾದಿಗ ಸಮಾಜದ ಮುಖಂಡರಾದ ವಿಜಯ ಕಲ್ಮನಿ, ಸಂಗಪ್ಪ ಹೊಸಮನಿ, ಕಿರಣಕುಮಾರ, ರಾಘವೇಂದ್ರ ಗೆಜ್ಜಳ್ಳಿ ಸೇರಿ ಅನೇಕರು ಇದ್ದರು.
**********************************************************************************************************
ಎಂ.ಡಿ. ಲಕ್ಷ್ಮೀನಾರಾಯಣ ಅವರಿಗೆ ವಿಧಾನ ಪರಿಷತ್ ಸದಸ್ಯ ಸ್ಥಾನ ನೀಡುವಂತೆ ದೇವಾಂಗ ಸಮಾಜದವರಿಂದ ಆಗ್ರಹ
ಗದಗ: ಎಂ.ಡಿ. ಲಕ್ಷ್ಮೀನಾರಾಯಣ ಅವರಿಗೆ ವಿಧಾನ ಪರಿಷತ್ತಿಗೆ ಅವಕಾಶ ನೀಡಬೇಕು ಎಂದು ದೇವಾಂಗ ಸಮಾಜದ ಜಿಲ್ಲಾಧ್ಯಕ್ಷ ದಶರಥರಾಜ ಕೊಳ್ಳಿ ಹೇಳಿದರು.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಂ.ಡಿ. ಲಕ್ಷ್ಮೀನಾರಾಯಣ ಅವರು ಕಳೆದ ಕೆಲ ದಶಕಗಳಿಂದ ಬಿಜೆಪಿ ನಿಷ್ಠಾವಂತ ಕಾರ್ಯಕರ್ತರಾಗಿ, ಆರ್ ಎಸ್ ಎಸ್ ಮೂಲದಿಂದ ಸಂಘಟನೆಯಲ್ಲಿ ತೊಡಗಿಕೊಂಡು ಬಂದಿದ್ದಾರೆ. ಹೀಗಾಗಿ ಬಿಜೆಪಿ ನೇಕಾರರಿಗೆ ರಾಜಕೀಯ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು.
ನೇಕಾರಿಕೆ ಅವಲಂಬಿಸಿರುವ ಹಲವು ಸಮಾಜಗಳನ್ನು ಜೋಡಿಸಿ ನೇಕಾರ ಸಮುದಾಯಗಳ ಒಕ್ಕೂಟ ಸ್ಥಾಪಿಸಿ ಒಂದೇ ವೇದಿಕೆಯಲ್ಲಿ ನೇಕಾರರನ್ನು ಜೋಡಿಸಿದ ಕೀರ್ತಿ ಎಂ.ಡಿ. ಲಕ್ಷ್ಮೀನಾರಾಯಣ ಅವರಿಗೆ ಸಲ್ಲುತ್ತದೆ. ದೇವಾಂಗ ಹಾಗೂ ನೇಕಾರಿಕೆ ಕುಲಕಸಬುಗಳನ್ನು ಮಾಡಿಕೊಂಡ ಸಮುದಾಯಗಳ ಒಗ್ಗಟ್ಟಿಗಾಗಿ ರಾಜ್ಯಾದ್ಯಂತ ಸಂಚರಿಸಿ ನೇಕಾರರ ಸಮಸ್ಯೆಗಳನ್ನು ಪರಿಹರಿಸಲು ಹೋರಾಟ ಮಾಡಿದ್ದಾರೆ.
ಕೆ ಎಚ್ ಡಿ ಸಿ ನಿಗಮದ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ನೇಕಾರರ ಪ್ರತಿಯೊಂದು ಸಮಸ್ಯೆಗಳಿಗೂ ಸ್ಪಂದಿಸಿ ಸಾಂಪ್ರದಾಯಿಕ ಉದ್ಯೋಗಕ್ಕೆ ಹಲವಾರು ಯೋಜನೆಗಳನ್ನು ಜಾರಿಗೆ ತರುವಲ್ಲಿ ಶ್ರಮಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಯಡಿಯೂರಪ್ಪ ಅವರು ನೇಕಾರರ ಧ್ವನಿಯಾಗಿ ಕೆಲಸ ಮಾಡಲು ಎಂ.ಡಿ. ಲಕ್ಷ್ಮೀನಾರಾಯಣ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಬೇಕು ಎಂದು ಒತ್ತಾಯಿಸಿದರು.
ನಗರಸಭೆ ಸದಸ್ಯ ರಾಘವೇಂದ್ರ ಯಳವತ್ತಿ, ದೇವಾಂಗ ಸಮಾಜದ ಮುಖಂಡರಾದ ಅಶೋಕ ಬಣ್ಣದ, ಪ್ರೇಮನಾಥ ಬಣ್ಣದ, ಅನಿಲ ಗಡ್ಡಿ, ರಾಜೇಂದ್ರ ಬರದ್ವಾಡ ಸೇರಿ ಅನೇಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
Max: ಇಂದು ಸುದೀಪ್ ಮ್ಯಾಕ್ಸ್ ತೆರೆಗೆ; ಆ್ಯಕ್ಷನ್ ಅಡ್ಡದಲ್ಲಿ ಕಿಚ್ಚ ಮಿಂಚು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.