ಅಪಾಯದ ಕಟ್ಟಡ ತೆರವಿಗೆ ನಿರ್ದೇಶನ

•ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಸೂಚನೆ •ನಕಲಿ ವೈದ್ಯರ ಹಾವಳಿ ತಡೆಗೆ ಅಗತ್ಯ ಕ್ರಮ

Team Udayavani, Jun 16, 2019, 11:16 AM IST

gadaga-tdy-1..

ಗದಗ: ಜಿ.ಪಂ. ಸಭಾಂಗಣದಲ್ಲಿ ಜಿ.ಪಂ. ಅಧ್ಯಕ್ಷ ಎಸ್‌.ಪಿ. ಬಳಿಗಾರ ಅಧ್ಯಕ್ಷತೆಯಲ್ಲಿ ಮಾಸಿಕ ಕೆಡಿಪಿ ಸಭೆ ನಡೆಯಿತು.

ಗದಗ: ಅಪಾಯದ ಸ್ಥಿತಿಯ ಸರಕಾರಿ ಕಟ್ಟಡಗಳಲ್ಲಿರುವ ಶಾಲಾ ಕೊಠಡಿ, ಅಂಗನವಾಡಿಗಳನ್ನು ತಕ್ಷಣ ತೆರವುಗೊಳಿಸಬೇಕು ಎಂದು ಜಿಪಂ ಅಧ್ಯಕ್ಷ ಎಸ್‌.ಪಿ. ಬಳಿಗಾರ ನಿರ್ದೇಶನ ನೀಡಿದ್ದಾರೆ.

ಇಲ್ಲಿನ ಜಿಪಂ ಸಭಾಂಗಣದಲ್ಲಿ ಶನಿವಾರ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮ (ಕೆಡಿಪಿ) ತಿಂಗಳ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರಾಥಮಿಕ ಆರೋಗ್ಯ ಕೇಂದ್ರ, ಶಾಲಾ ಕೊಠಡಿ, ಅಂಗನವಾಡಿ ಹೊಸ ಕಟ್ಟಡಗಳ ನಿರ್ಮಾಣ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು. ರೇಷ್ಮೆ ಹುಳು ಸಾಕಾಣಿಕೆ ಕಟ್ಟಡಗಳು ಖಾಲಿ ಇದ್ದಲ್ಲಿ ಅವುಗಳ ಕುರಿತು ಇಲಾಖೆ ಪಟ್ಟಿ ಮಾಡಿ, ಜಿ.ಪಂ. ಸಿಇಒ ಅವರಿಗೆ ವರದಿ ಸಲ್ಲಿಸಬೇಕು. ಈ ಖಾಲಿ ಕಟ್ಟಡಗಳನ್ನು ಅಗತ್ಯವಿರುವ ಇಲಾಖೆಗಳಿಗೆ ನೀಡಲು ಕ್ರಮ ಕೈಕೊಳ್ಳಲು ಜಿ.ಪಂ. ಅಧ್ಯಕ್ಷರು ಸೂಚಿಸಿದರು.

ಜಿಲ್ಲೆಯ 28 ಮೇವು ಬ್ಯಾಂಕುಗಳಲ್ಲಿ ರೈತರ ಜಾನುವಾರುಗಳಿಗೆ ಉತ್ತಮ ಗುಣಮಟ್ಟದ ಮೇವು ಮಾರಾಟಕ್ಕೆ ಗಮನ ನೀಡಬೇಕು. ಜಿಲ್ಲೆಯಲ್ಲಿ ನಕಲಿ ವೈದ್ಯರ ಹಾವಳಿ ತಡೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿ.ಪಂ. ಉಪಾಧ್ಯಕ್ಷೆ ಶಕುಂತಲಾ ಮೂಲಿಮನಿ ತಿಳಿಸಿದರು.

ಜಿ.ಪಂ. ವ್ಯಾಪ್ತಿಯ ಇಲಾಖೆಗಳು 2019-20ಕ್ಕೆ ಕ್ರಿಯಾಯೋಜನೆ ತಯಾರಿಸಿ ಸಲ್ಲಿಸಲು ಈಗಾಗಲೇ ಸೂಚಿಸಲಾಗಿದ್ದರೂ ಇನ್ನು ಕೆಲವು ಇಲಾಖೆಗಳು ಕ್ರಮ ಜರುಗಿಸಿಲ್ಲವೆಂದು ಜಿ.ಪಂ. ಸಿಇಒ ಮಂಜುನಾಥ ಚವ್ಹಾಣ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು, ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಯೋಜನೆಯಡಿ ಇಲಾಖೆಗಳು ಸಮುದಾಯಿಕ ಆಸ್ತಿ, ರೈತರ ಹೊಲಗಳ ಅಭಿವೃದ್ಧಿ, ಜಲಸಂವರ್ಧನೆ, ತೋಟಗಾರಿಕೆ ಮುಂತಾದವುಗಳನ್ನು ಸಮನ್ವಯಗೊಳಿಸಿ ಸಾರ್ವಜನಿಕ ಉಪಯುಕ್ತ ಸರ್ಕಾರದ ಸೌಲಭ್ಯಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ನೀಡಲು ಕ್ರಮ ಜರುಗಿಸಬೇಕು.

ಡಿಬಿಒಟಿ ಯೋಜನೆಯಡಿ ಹಾಗೂ ಇತರೆ ಕುಡಿಯುವ ನೀರಿನ ಯೋಜನೆಗಳಡಿ ಇರುವ ನಿಗದಿತ ಅವಧಿಗೆ ಸ್ವಚ್ಛಗೊಳಿಸಲು ಹಾಗೂ ನೀರಿನ ಸದ್ಬಳಕೆಗೆ ಕ್ರಮ ಜರುಗಿಸಬೇಕು. ಈ ಕುರಿತು ಜನಪ್ರತಿನಿಧಿಗಳು, ಜನರಿಗೆ ಜಾಗೃತಿ ಮೂಡಿಸುವ ಕೆಲಸ ಆಗಬೇಕು. ಜೂ. 21ರಂದು ಜಿಲೆಯ್ನಾದ್ಯಂತ ಎಲ್ಲ ಶಾಲೆಗಳಲ್ಲಿ ಯೋಗದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲು ಸಾರ್ವಜನಿಕ ಶಿಕ್ಷಣ ಇಲಾಖೆ ಅಗತ್ಯ ಕ್ರಮ ಜರುಗಿಸಲು ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ಕಿಸಾನ್‌ ಸಮ್ಮಾನ ನಿಧಿಯಡಿ ವಾರ್ಷಿಕ 6 ಸಾವಿರ ರೂ. ಪಡೆಯಲು ಈ ಹಿಂದಿನ ನಿರ್ದೇಶನದಂತೆ 95 ಸಾವಿರ ಅರ್ಹ ರೈತರ ಪೈಕಿ 39,500 ರೈತರು ನೋಂದಣಿ ಮಾಡಿಸಿದ್ದು, ಅದರಲ್ಲಿ 9 ಸಾವಿರ ರೈತರು ಸೌಲಭ್ಯ ಪಡೆಯುತ್ತಿದ್ದಾರೆ. ಕೇಂದ್ರ ಸರ್ಕಾರದ ಪುನರವಿಮರ್ಷಿತ ಸೂಚನೆಯಂತೆ ಜಿಲ್ಲೆಯ ಎಲ್ಲ 1.67 ಲಕ್ಷ ರೈತರು (ಜನಪ್ರತಿನಿಧಿ, ಆದಾಯ ಕರ ಸಂದಾಯಿತರನ್ನು ಹೊರತುಪಡಿಸಿ) ಈ ಯೋಜನೆ ವ್ಯಾಪ್ತಿಗೆ ಬರುತ್ತಿದ್ದು, ನಿಗದಿತ ಕೇಂದ್ರ ಸರ್ಕಾರ ಪೋರ್ಟಲ್ನಲ್ಲಿ ರೈತರು ನೋಂದಣಿ ಮಾಡಿಸಬೇಕು. ಜಿಲ್ಲೆಯ ಶಿರಹಟ್ಟಿ ಭಾಗದಲ್ಲಿ ಕೆಲವೆಡೆ ಉತ್ತಮ ಮಳೆಯಾಗಿದ್ದು ಹೆಸರಿನ ಬಿತ್ತನ ಆರಂಭಗೊಂಡಿದೆ. ರೈತರ ಬೇಡಿಕೆಗೆ ಅನುಗುಣವಾಗಿ ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆಗೆ ಕೃಷಿ ಇಲಾಖೆ ಅಗತ್ಯದ ಕ್ರಮ ಕೈಕೊಂಡಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಬಾಲರೆಡ್ಡಿ ಸಭೆಗೆ ಮಾಹಿತಿ ನೀಡಿದರು.

ಜಿ.ಪಂ. ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಹನುಮಂತಪ್ಪ ಪೂಜಾರ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಶಿವಕುಮಾರ ನೀಲಗುಂದ, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಈರಪ್ಪ ನಾಡಗೌಡ್ರ ವಿವಿಧ ವಿಷಯಗಳ ಚರ್ಚೆಯಲ್ಲಿ ಭಾಗವಹಿಸಿದ್ದರು. ಜಿ.ಪಂ. ಉಪಕಾರ್ಯದರ್ಶಿ ಪ್ರಾಣೇಶರಾವ್‌ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

1-jmm

INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

Waqf

Waqf Issue: ಐದು ವರ್ಷ ಹಿಂದೆ ವಕ್ಫ್ ಆಸ್ತಿ ವಿರುದ್ಧ ಹೋರಾಡಿ ಗೆದ್ದಿದ್ದ 315 ರೈತರು

Gadaga: ಐತಿಹಾಸಿಕ ವೀರನಾರಾಯಣ ದೇವಸ್ಥಾನ ಪುನರುತ್ಥಾನ ಕಾರ್ಯಕ್ಕೆ ಚಾಲನೆ

Gadaga: ಐತಿಹಾಸಿಕ ವೀರನಾರಾಯಣ ದೇವಸ್ಥಾನ ಪುನರುತ್ಥಾನ ಕಾರ್ಯಕ್ಕೆ ಚಾಲನೆ

ಕುಂಬಾರರ ಬದುಕಿನಲ್ಲಿಲ್ಲ ದೀಪಾವಳಿ ಬೆಳಕು: ಮಾರುಕಟ್ಟೆಗೆ ಲಗ್ಗೆ ಇಟ್ಟ ಪಿಂಗಾಣಿ ಹಣತೆ

ಕುಂಬಾರರ ಬದುಕಿನಲ್ಲಿಲ್ಲ ದೀಪಾವಳಿ ಬೆಳಕು: ಮಾರುಕಟ್ಟೆಗೆ ಲಗ್ಗೆ ಇಟ್ಟ ಪಿಂಗಾಣಿ ಹಣತೆ

ಗದಗ: ಜನಮಾನಸದಲ್ಲಿ ಅಚ್ಚಳಿಯದ ರಾಣಿ ಚನ್ನಮ್ಮ

ಗದಗ: ಜನಮಾನಸದಲ್ಲಿ ಅಚ್ಚಳಿಯದ ರಾಣಿ ಚನ್ನಮ್ಮ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

attack

Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ

1-reeee

Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.